ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊವಿಡ್ 19: JEE, NEET 2020 ಪರೀಕ್ಷೆ ಮತ್ತೆ ಮುಂದೂಡಿಕೆ

|
Google Oneindia Kannada News

ನವದೆಹಲಿ, ಜುಲೈ 03: ರಾಷ್ಟ್ರಮಟ್ಟದ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಪರೀಕ್ಷೆಗಳ ಜಂಟಿ ಪ್ರವೇಶ ಪರೀಕ್ಷೆ (JEE) ಮತ್ತು ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(NEET)ಗಳನ್ನು ಮುಂದೂಡಲಾಗಿದೆ ಎಂದು ಮಾನವ ಸಂಪನ್ಮೂಲ ಸಚಿವಾಲಯವು ಶುಕ್ರವಾರ ಸಂಜೆ ಪ್ರಕಟಿಸಿದೆ.

Recommended Video

Virat Kohli improvises Hardik Pandya's Flying push-ups and challenges him | Oneindia Kannada

JEE ಜನವರಿ ಮತ್ತು ಏಪ್ರಿಲ್‌ನಲ್ಲಿ ನಡೆದರೆ, NEET ಫೆಬ್ರುವರಿ ಮತ್ತು ಮೇ ತಿಂಗಳಿನಲ್ಲಿ ಸಾಮಾನ್ಯವಾಗಿ ನಿಗದಿಯಾಗಿರುತ್ತದೆ. ಆದರೆ, ಕೊವಿಡ್ 19 ದೆಸೆಯಿಂದ ಪರೀಕ್ಷೆಗಳನ್ನು ಮುಂದೂಡುವುದು ಅನಿವಾರ್ಯವಾಗಿದೆ.

ವೈದ್ಯಕೀಯ ಪ್ರವೇಶದ 'ಕ್ಯಾಪಿಟೇಶನ್' ಪಿಡುಗಿಗೆ ರಾಮಬಾಣ NEETವೈದ್ಯಕೀಯ ಪ್ರವೇಶದ 'ಕ್ಯಾಪಿಟೇಶನ್' ಪಿಡುಗಿಗೆ ರಾಮಬಾಣ NEET

ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ JEE ಮುಖ್ಯ ಪರೀಕ್ಷೆ ಸೆಪ್ಟೆಂಬರ್ 1-6, JEE advanced ಪರೀಕ್ಷೆ ಸೆಪ್ಟೆಂಬರ್ 27ರಂದು ನಡೆಯಲಿದೆ.ಸೆಪ್ಟೆಂಬರ್ 13ರಂದು NEET ಪರೀಕ್ಷೆ ನಿಗದಿಯಾಗಿದೆ ಎಂದು ಮಾನವ ಸಂಪನ್ಮೂಲ ಇಲಾಖೆ ಸಚಿವ ರಮೇಶ್ ಪೋಖ್ರಿಯಾಲ್ ಹೇಳಿದರು.

Jee Main, Neet 2020 Exams Postponed, To Be Held In September

ವಿಶ್ವವಿದ್ಯಾಲಯ ಅನುದಾನ ಆಯೋಗದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಯುಜಿಸಿ ನೆಟ್), ಕಾಮನ್ ಮ್ಯಾನೇಜ್‌ಮೆಂಟ್ ಅಡ್ಮಿಷನ್ ಟೆಸ್ಟ್ (ಸಿಎಂಎಟಿ) ಪರೀಕ್ಷೆಗಳ ಜತೆಗೆ ಈ ಪರೀಕ್ಷೆಗಳನ್ನು ಕೂಡ ನಡೆಸುವ ಹೊಣೆಗಾರಿಕೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಗೆ (ಎನ್‌ಟಿಎ) ವಹಿಸಿಕೊಂಡಿದೆ. ಇದಕ್ಕೂ ಮುನ್ನ JEE ಮತ್ತು NEETನಿರ್ವಹಣೆಯನ್ನು ಸಿಬಿಎಸ್‌ಇ ನಡೆಸುತ್ತಿತ್ತು.

ಈ ವರ್ಷ ಮೆಡಿಕಲ್ ವೃತ್ತಿಪರ ಕೋರ್ಸ್ ಪ್ರವೇಶಕ್ಕಾಗಿ ನಡೆಯುವ NEET ಜುಲೈ 26ರಂದು ನಿಗದಿಯಾಗಿತ್ತು, ಇಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕಾಗಿ ನಡೆಯುವ ಜೆಇಇ ಮೇನ್ಸ್ ಜುಲೈ 18 ರಿಂದ 23 ರಂದು ನಡೆಯಲು ನಿಗದಿಪಡಿಸಲಾಗಿತ್ತು. ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ) ಆಯೋಜಿಸುವ ಜೆಇಇ- advanced ಪರೀಕ್ಷೆ ಆಗಸ್ಟ್ 23ರಂದು ನಿಗದಿಯಾಗಿತ್ತು.

English summary
The HRD Ministry on Friday postponed medical and engineering entrance exams NEET and JEE to September in view of the spike in COVID-19 cases.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X