ಜಾರ್ಖಂಡ್: ಗ್ರಾಮದಿಂದ ಹೊರಹಾಕಿ 50 ದಲಿತ ಕುಟುಂಬಗಳ ಮೇಲೆ ಹಲ್ಲೆ- ಕೇಸ್ ದಾಖಲು
50 ದಲಿತ ಕುಟುಂಬಗಳಿಗೆ ಹಿಂಸೆ ನೀಡಿ ಗ್ರಾಮದಿಂದ ಹೊರಹಾಕಿರುವ ಅಮಾನವೀಯ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ. ಜಾರ್ಖಂಡ್‌ನ ಮುರುಮಾಟು ಗ್ರಾಮದಿಂದ ಸುಮಾರು 50 ದಲಿತ ಕುಟುಂಬಗಳನ್ನು ಹೊರಹಾಕಲಾಗಿದೆ. ಕಳೆದ ನಾಲ್ಕು ದಶಕಗಳಿಂದ ನೆಲೆಸಿದ್ದ ಕುಟುಂಬಗಳನ್ನು ಜಾರ್ಖಂಡ್‌ನ ಪಲಾಮು ಜಿಲ್ಲೆಯಲ್ಲಿ ನಿರ್ದಿಷ್ಟ ಸಮುದಾಯದ ಸದಸ್ಯರು ಹೊರಹಾಕಿದ್ದಾರೆ.
ಮಾಹಿತಿ ಪಡೆದ ಉಪವಿಭಾಗಾಧಿಕಾರಿ (SDO), ಮೇದಿನಿನಗರ, ರಾಜೇಶ್ ಕುಮಾರ್ ಸಾಹ್ ಮತ್ತು ಉಪವಿಭಾಗೀಯ ಪೊಲೀಸ್ ಅಧಿಕಾರಿ (SDPO), ಬಿಶ್ರಾಂಪುರ, ಸುರ್ಜಿತ್ ಕುಮಾರ್, ಮುರುಮಾಟು ಗ್ರಾಮದಿಂದ 1 ಕಿಮೀ ದೂರದಲ್ಲಿರುವ ಟೋಂಗ್ರಿ ಪಹಾಡಿ ಪ್ರದೇಶಕ್ಕೆ ಧಾವಿಸಿದರು. ಕಾನೂನು ಸುವ್ಯವಸ್ಥೆ ಕಾಪಾಡಲು ಅಧಿಕಾರಿಗಳು ಸ್ಥಳದಲ್ಲಿಯೇ ಇದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ 12 ಮಂದಿ ಮತ್ತು ಇತರ 150 ಮಂದಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗಿದೆ. ಘಟನೆಯ ಬಗ್ಗೆ ಜಾರ್ಖಂಡ್ ರಾಜ್ಯಪಾಲ ರಮೇಶ್ ಬೈಸ್ ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರು ಎರಡು ದಿನಗಳೊಳಗೆ ಜಿಲ್ಲಾಧಿಕಾರಿ ಪಲಾಮು ಎ ದೊಡ್ಡೆ ಅವರಿಂದ ವಿವರವಾದ ವರದಿ ಕೇಳಿದ್ದಾರೆ ಎಂದು ರಾಜಭವನದ ಪ್ರಕಟಣೆ ತಿಳಿಸಿದೆ.

ಕೂಡಲೇ ಆರೋಪಿಗಳನ್ನು ಬಂಧಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ದೊಡ್ಡೆ ಸೂಚಿಸಿದ್ದಾರೆ. ಇದೇ ಗ್ರಾಮದಲ್ಲಿ ಎಲ್ಲ 50 ಕುಟುಂಬಗಳಿಗೆ ಆದ್ಯತೆ ಮೇರೆಗೆ ಪುನರ್ವಸತಿ ಕಲ್ಪಿಸುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದ್ದಾರೆ. ಈ ಉದ್ದೇಶಕ್ಕಾಗಿ ಪರಿಹಾರ ಏಜೆನ್ಸಿಗಳನ್ನು ಸಕ್ರಿಯಗೊಳಿಸಲಾಗಿದೆ ಎಂದು ಪಲಾಮು ಎ ದೊಡ್ಡೆ ತಿಳಿಸಿದ್ದಾರೆ.
ಸಂತ್ರಸ್ತರೆಲ್ಲರೂ "ಮುಷಾರ್" ಜಾತಿಗೆ ಸೇರಿದವರಾಗಿದ್ದು, ಕಳೆದ ನಾಲ್ಕು ದಶಕಗಳಿಂದ ಗ್ರಾಮದಲ್ಲಿ ವಾಸಿಸುತ್ತಿದ್ದಾರೆ. ಸಂತ್ರಸ್ತರಲ್ಲಿ ಒಬ್ಬರಾದ ಜಿತೇಂದ್ರ ಮುಶಾರ್, "ನಾವು ಗ್ರಾಮದಲ್ಲಿ ವರ್ಷಗಳಿಂದ ಒಟ್ಟಿಗೆ ವಾಸಿಸುತ್ತಿದ್ದೇವೆ. ಆದರೆ ಮುರುಮಾಟು ಗ್ರಾಮದ ಎಲ್ಲಾ ನಿವಾಸಿಗಳು ಸೋಮವಾರ ನಮ್ಮನ್ನು ಬಲವಂತವಾಗಿ ಗ್ರಾಮದಿಂದ ಓಡಿಸಿದರು, ಅವರು ನಮ್ಮನ್ನು ವಾಹನಗಳಲ್ಲಿ ತುಂಬಿಸಿ ನಮ್ಮ ವಸ್ತುಗಳನ್ನು ಎಸೆದರು. ಹತ್ತಿರದ ಕಾಡಿಗೆ ಬಂದಿದ್ದೇವೆ" ಎಂದು ಅಳಲು ತೋಡಿಕೊಂಡಿದ್ದಾರೆ.
ಮಾತ್ರವಲ್ಲದೆ ತಮ್ಮ ಮೇಲೆ ಹಲ್ಲೆ ನಡೆಸಿ ಪೊಲೀಸರಿಗೆ ದೂರು ನೀಡದಂತೆ ತಡೆದಿದ್ದಾರೆ ಎಂದು ಆರೋಪಿಸಿದರು. ದಲಿತರು ವಾಸವಾಗಿರುವ ಜಮೀನು ಶಿಕ್ಷಣ ಸಂಸ್ಥೆಗೆ ಸೇರಿದ್ದು ಎಂಬುದನ್ನು ಸಾಬೀತುಪಡಿಸಲು ದಾಖಲೆಗಳನ್ನು ನೀಡುವಂತೆ ಆರೋಪಿಗಳಿಗೆ ತಿಳಿಸಲಾಗಿದೆ. ಅವರಿಗೆ ಅದೇ ಸ್ಥಳದಲ್ಲಿ ಪುನರ್ವಸತಿ ಕಲ್ಪಿಸಲು ವ್ಯವಸ್ಥೆ ಮಾಡಲಾಗುತ್ತಿದೆ.
ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಅವರನ್ನು ಬಂಧಿಸಲು ಭಾರಿ ಶೋಧ ನಡೆಸಲಾಗುತ್ತಿದೆ ಎಂದು ಎಸ್‌ಡಿಪಿಒ ಹೇಳಿದರು. ಸಂತ್ರಸ್ತರ ಮನೆಗಳನ್ನು ನೆಲಸಮಗೊಳಿಸಲಾಗಿದ್ದು, ಸೂಕ್ತ ಭದ್ರತೆಯೊಂದಿಗೆ ಅದೇ ಸ್ಥಳದಲ್ಲಿ ಪುನರ್ವಸತಿ ಕಲ್ಪಿಸಲಾಗುವುದು ಎಂದು ಎಸ್‌ಡಿಒ ತಿಳಿಸಿದ್ದಾರೆ. ತಪ್ಪಿತಸ್ಥರನ್ನು ಬಿಡುವುದಿಲ್ಲ ಮತ್ತು ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಂತ್ರಸ್ತ ಕುಟುಂಬಗಳಿಗೆ ಭರವಸೆ ನೀಡಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications