ಜಾರ್ಖಂಡ್, ಉತ್ತರಾಖಂಡದಲ್ಲಿ ಪ್ರತ್ಯೇಕ ಅಪಘಾತ: 13 ಜನ ಬಲಿ

Posted By:
Subscribe to Oneindia Kannada

ದುಮ್ಕಾ, ಫೆಬ್ರವರಿ 12: ಜಾರ್ಖಂಡ್ ಮತ್ತು ಉತ್ತರಾಖಂಡದಲ್ಲಿ ನಡೆದ ಎರಡು ಪ್ರತ್ಯೇಕ ವಾಹನಾಪಘಾತದಲ್ಲಿ 13 ಜನ ಮೃತರಾದ ಘಟನೆ ಇಂದು(ಫೆ.12) ನಡೆದಿದೆ.

ವಾಹನವೊಂದು ನದಿಗೆ ಉರುಳಿದ ಪರಿಣಾಮ 8 ಜನ ಮೃತರಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರು ಮತ್ತು ಗಾಯಗೊಂಡವರ ಗುರುತು ಪತ್ತೆಯಾಗಿಲ್ಲ. ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ಶಂಕಿಸಲಾದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಉತ್ತರಾಖಂಡದ ಉತ್ತರಕಾಶಿಯಲ್ಲಿ ವಾಹನವೊಂದು ಕಣಿವೆಗೆ ಉರುಳಿದ ಪರಿಣಾಮ 5 ಜನ ಮೃತರಾಗಿದ್ದು, 4 ಜನ ಗಾಯಗೊಂಡಿದ್ದಾರೆ. ಈ ಘಟನೆಯಲ್ಲೂ ಮೃತರ ಗುರುತಿನ್ನೂ ಪತ್ತೆಯಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Jharkhand and Uttarakhand: Separate accidents kill 13 people

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
In 2 separate accidents total 13 people died on Feb 12th. The incident took place in Uttarakhand and Jharkhand.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

X