Jharkhand Assembly Election 2024: 81ರ ಪೈಕಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಸ್ಪರ್ಧಿಸಲಿದೆ?-ಹಿಮಂತ ಬಿಸ್ವಾ ಹೇಳಿದ್ದೇನು?

Jharkhand Assembly Election 2024: ಈಗಾಗಲೇ ಜಮ್ಮು-ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭೆ ಚುನಾವಣೆ ನಡೆದಿದ್ದು, ಫಲಿತಾಂಶ ಕೂಡ ಹೊರಬಿದ್ದಿದೆ. ಇನ್ನು ಈಗಾಗಲೇ ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಆಗಿದ್ದು, ಬಿಜೆಪಿಯು ಇಂದು (ಅಕ್ಟೋಬರ್‌ 18) ಅಥವಾ ನಾಳೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನುನ ಬಿಡುಗಡೆ ಮಾಡಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇನ್ನು ಸೀಟು ಹಂಚಿಕೆ ಬಗ್ಗೆ ಹಿಮಂತ ಬಿಸ್ವಾ ಶರ್ಮಾ ಅವರು ಮಹತ್ವದ ಮಾಹಿತಿಯನ್ನು ನೀಡಿದ್ದಾರೆ. ಹಾಗಾದರೆ ಯಾವ್ಯಾವವ ಪಕ್ಷಗಳಿಗೆ ಎಷ್ಟು ಸ್ಥಾನ ಎನ್ನುವ ಮಾಹಿತಿಯನ್ನು ಅವರು ಬಹಿರಂಗಪಡಿಸಿದ್ದಾರೆ.

Jharkhand Assembly Election 2024 BJP to contest 68 seats says Himanta Biswa Sarma

ರಾಜ್ಯದಲ್ಲಿ ಸೀಟು ಹಂಚಿಕೆ ಬಹುತೇಕ ಪೂರ್ಣವಾಗಿದೆ. ರಾಜ್ಯದ 81 ವಿಧಾನಸಭಾ ಸ್ಥಾನಗಳ ಪೈಕಿ ಬಿಜೆಪಿ 68 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಇನ್ನು ಎಜೆಎಸ್‌ಯು 10 ಸ್ಥಾನ, ಜೆಡಿಯು 2 ಸ್ಥಾನಗಳಲ್ಲಿ ಮತ್ತು ಎಲ್‌ಜೆಪಿ 1 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಅಸ್ಸಾಂ ಸಿಎಂ ಮತ್ತು ಬಿಜೆಪಿ ನಾಯಕ ಹಿಮಂತ ಬಿಸ್ವಾ ಶರ್ಮಾ ಅವರು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ.

"ನಮ್ಮ ಪ್ರಕಾರ ಎಜೆಎಸ್‌ಯು 10 ಸ್ಥಾನಗಳಲ್ಲಿ, ಜೆಡಿಯು ಎರಡು ಸ್ಥಾನಗಳಲ್ಲಿ, ಎಲ್‌ಜೆಪಿ 1 ಸ್ಥಾನ ಮತ್ತು ಬಿಜೆಪಿ ಉಳಿದ ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. ಆದರೂ, ಈ ಬಗ್ಗೆ ಇನ್ನೂ ಚರ್ಚೆಗಳು ನಡೆಯುತ್ತಿವೆ," ಎಂದು ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಪ್ರಮುಖ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸದಸ್ಯರು ಸೇರಿದಂತೆ ಪಕ್ಷದ ಹಲವು ನಾಯಕರು ಎರಡು ದಿನಗಳ ಹಿಂದೆ ನಾಮನಿರ್ದೇಶಿತರ ಆಯ್ಕೆಯ ಬಗ್ಗೆ ಚರ್ಚಿಸಿದ್ದಾರೆ ಎಂದರು.

ಸಭೆಯಲ್ಲಿ ಜಾರ್ಖಂಡ್ ಚುನಾವಣಾ ಉಸ್ತುವಾರಿ ಶಿವರಾಜ್ ಸಿಂಗ್ ಚೌಹಾಣ್, ಹಿಮಂತ ಬಿಸ್ವಾ ಶರ್ಮಾ ಮತ್ತು ಬಾಬುಲಾಲ್ ಮರಾಂಡಿ ಮತ್ತು ಅರ್ಜುನ್ ಮುಂಡಾ ಸೇರಿದಂತೆ ರಾಜ್ಯದ ಇತರ ಹಿರಿಯ ನಾಯಕರು ಉಪಸ್ಥಿತರಿದ್ದರು.

ಚುನಾಚಣೆ ದಿನಾಂಕಗಳ ವಿವರ ತಿಳಿಯಿರಿ: ಇನ್ನು 81 ಸದಸ್ಯ ಬಲದ ಜಾರ್ಖಂಡ್ ವಿಧಾನಸಭೆಗೆ ನವೆಂಬರ್ 13 ಮತ್ತು 20ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಸಮಿತಿ ಈಗಾಗಲೇ ಘೋಷಣೆ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+