Jharkhand Assembly Election 2024: ಬಿಜೆಪಿ ಮೊದಲ ಪಟ್ಟಿಯಲ್ಲಿ ಯಾರೆಲ್ಲಾ ಸ್ಥಾನ ಪಡೆದಿದ್ದಾರೆ?

Jharkhand Assembly Elections 2024: ಜಾರ್ಖಂಡ್ ವಿಧಾನಸಭೆ ಚುನಾಚಣೆಗೆ ಈಗಾಗಲೇ ದಿನಾಂಕ ಘೋಷಣೆ ಆಗಿದೆ. ಇನ್ನು ಶನಿವಾರ (ಅಕ್ಟೋಬರ್ 19) ಬಿಜೆಪಿಯು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಚಂಪೈ ಸೊರೇನ್, ಸೀತಾ ಸೊರೆನ್ ಅವರು ಸ್ಥಾನವನ್ನು ಪಡೆದಿದ್ದಾರೆ.

ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಸ್ಥಾನ ಹೊಂದಾಣಿಕೆ ಒಪ್ಪಂದವನ್ನು ಎಸ್‌ಜೆಯು-ಪಿ, ಜೆಡಿಯು ಮತ್ತು ಎಲ್‌ಜೆಪಿ (ರಾಮ್‌ ವಿಲಾಸ್) ಜೊತೆ ಒಪ್ಪಂದ ಅಂತಿಮಗೊಂಡ ಬೆನ್ನಲ್ಲೇ ಬಿಜೆಪಿ ಶನಿವಾರ 68 ವಿಧಾನಸಭಾ ಕ್ಷೇತ್ರಗಳ ಪೈಕಿ 66 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ.

Jharkhand Assembly Election 2024 Champai Soren s Name in BJP First List of candidates

ಸಿಎಂ ಹೇಮಂತ್ ಸೊರೇನ್ ಸ್ಪರ್ಧಿಸಲಿರುವ ಬರ್ಹೈತ್ (ಎಸ್ಟಿ) ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಇದುವರೆಗೆ ಘೋಷಣೆ ಮಾಡಿಲ್ಲ. ಹಾಗೆಯೇ ತುಂಡಿ ಕ್ಷೇತ್ರವನ್ನು ಸಗ ಖಾಲಿ ಉಳಿಸಿಕೊಂಡಿದೆ. ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ನೇತೃತ್ವದ ಬಿಜೆಪಿಯ ಕೇಂದ್ರೀಯ ಚುನಾವಣಾ ಸಮಿತಿಯಲ್ಲಿ ಈ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸಹ ಈ ಸಭೆಯಲ್ಲಿ ಭಾಗವಹಿಸಿದ್ದರು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೇಳಿದ್ದಾರೆ.

ರಾಂಚಿ ಕ್ಷೇತ್ರದಿಂದ ಹಿರಿಯ ಮುತ್ಸದ್ಧಿ ಸಿ.ಪಿ.ಸಿಂಗ್ ಅವರನ್ನು 7ನೇ ಬಾರಿಗೆ ಕಣಕ್ಕಿಳಿಸಲಾಗಿದೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಅಮರ್ ಕುಮಾರ್ ಬೌರಿ ಬೊಕಾರೊ ಜಿಲ್ಲೆಯ ಸ್ವಕ್ಷೇತ್ರ ಚಂದನಕ್ಯಾರಿ (ಎಸ್ಸಿ)ಯಿಂದ ಕಣಕ್ಕಿಳಿಯಲಿದ್ದಾರೆ.

ರಾಜ್ಯ ಘಟಕದ ಅಧ್ಯಕ್ಷ ಬಾಬುಲಾಲ್ ಮುರಂಡಿ ಅವರು ಗಿರಧ್ ಜಿಲ್ಲೆಯ ಸ್ವಕ್ಷೇತ್ರ ಧನ್ವರ್‌ನಿಂದ ಸ್ಪರ್ಧೆಗಿಳಿಯಲಿದ್ದಾರೆ. ಮಾಜಿ ಆರೋಗ್ಯ ಸಚಿವ ರಾಮಚಂದ್ರ ಚಂದ್ರವಂಶಿ ಬಿಶ್ರಾಮಪುರದಿಂದ, ಮಾಜಿ ಸಿಎಂ ಹಾಗೂ ಜೆಎಂಎಂ ಮಾಜಿ ಮುಖಂಡ ಚಂಪೈ ಸೊರೇನ್ ಅವರನ್ನು ಸೆರಿಯಾಕೇಲಾ (ಎಸ್ಸಿ) ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಚಂಪೈ ಸೊರೇನ್ ಪುತ್ರ ಬಾಬುಲಾಲ್ ಅವರು ಘಟಶಿಲಾ (ಎಸ್ಟಿ) ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಮಾಜಿ ಸಿಎಂ ಮತ್ತು ಒಡಿಶಾ ರಾಜ್ಯಪಾಲ ರಘುಬರ ದಾಸ್ ಅವರ ಸೊಸೆ ಪೂರ್ಣಿಮಾ ದಾಸ್ ಸಾಹು ಅವರನ್ನು ಜೆಮ್ಶೆಡ್ಪುರ (ಪೂರ್ವ) ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಈ ಕ್ಷೇತ್ರದಿಂದ 5 ಬಾರಿ ಆಯ್ಕೆಯಾಗಿದ್ದ ರಘುಬರ ದಾಸ್ 2019ರಲ್ಲಿ ಸೋಲನುಭವಿಸಿದ್ದರು. ಮಾಜಿ ಸಿಎಂ ಅರ್ಜುನ್ ಮುಂಡಾ ಅವರ ಪತ್ನಿ ಮೀರಾ ಮುಂಡಾ ಅವರು ಪೋಕ್ಟಾ (ಎಸ್ಟಿ) ಮತ್ತು ಮಾಜಿ ಸಿಎಂ ಮಧು ಕೋಡಾ ಅವರ ಪತ್ನಿ ಗೀತಾ ಕೋಡಾ ಅವರನ್ನು ಜಗನ್ನಾಥಪುರ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ.

ಸಿಎಂ ಹೇಮಂತ್ ಸೊರೇನ್ ಅವರ ಅತ್ತಿಗೆ ಸೀತಾ ಸೊರೆನ್ ಜಮತಾರಾ ಕ್ಷೇತ್ರದಿಂದ ಸ್ಪರ್ಧೆಗಿಳಿಯಲಿದ್ದಾರೆ. ಲೋಕಸಭಾ ಚುನಾವಣೆಗೆ ಮುಂಚೆ ಇವರು ಜೆಎಂಎಂಗೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಗೊಂಡಿದ್ದು, ಮೂರು ಬಾರಿ ಈ ಕ್ಷೇತ್ರವನ್ನು ಪ್ರತಿನಿಧಿಸಿದವರಾಗಿದ್ದಾರೆ. ರಾಜ್ಯದ 81 ವಿಧಾನಸಭೆ ಸ್ಥಾನಗಳಿಗೆ ನವೆಂಬರ್ 13 ಮತ್ತು 20ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+