jharkhand assembly election 2024: ಜಾರ್ಖಂಡ್ ಚುನಾವಣೆ ದಿನಾಂಕ ಘೋಷಣೆ, ಎರಡು ಹಂತದಲ್ಲಿ ಚುನಾವಣೆ
ಜಾರ್ಖಂಡ್ ಹಾಗೂ ಮಹಾರಾಷ್ಟ್ರದ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಹರಿಯಾಣ ಹಾಗೂ ಜಮ್ಮು ಮತ್ತು ಕಾಶ್ಮೀರದ ನಂತರ ಇದೀಗ ದೇಶದ ಇನ್ನೆರಡು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಭಾರತೀಯ ಚುನಾವಣಾ ಆಯೋಗವು ಮಂಗಳವಾರ ಪತ್ರಿಕಾಗೋಷ್ಠಿಯನ್ನು ನಡೆಸಿದ್ದು, ದಿನಾಂಕ ಘೋಷಿಸಲಾಗಿದೆ.
ಕೇಂದ್ರ ಚುನಾವಣಾ ಆಯೋಗವು ದಿನಾಂಕ ಘೋಷಣೆ ಮಾಡಿದ್ದು, ಜಾರ್ಖಂಡ್‌ನಲ್ಲಿ ಎರಡು ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಮಹಾರಾಷ್ಟ್ರದಲ್ಲಿ ನವೆಂಬರ್ 20ಕ್ಕೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಜಾರ್ಖಂಡ್ ವಿಧಾನಸಭೆ ಚುನಾವಣೆಯು ನವೆಂಬರ್ 13 ಹಾಗೂ ನವೆಂಬರ್ 20ಕ್ಕೆ ನಡೆಯಲಿದೆ. ಚುನಾವಣೆ ಫಲಿತಾಂಶವು ನವೆಂಬರ್ 23ಕ್ಕೆ ಪ್ರಕಟವಾಗಲಿದೆ.
ಎರಡು ಹಂತಗಳಲ್ಲಿ ಜಾರ್ಖಂಡ್ ವಿಧಾನಸಭೆ ಚುನಾವಣೆ ನಡೆಯಲಿದೆ. ಜಾರ್ಖಂಡ್ ವಿಧಾನಭೆಯಲ್ಲಿ 81 ಸ್ಥಾನಗಳನ್ನು ಹೊಂದಿದೆ. ಇನ್ನು ಜಾರ್ಖಂಡ್ ವಿಧಾನಸಭೆಯ ಅವಧಿಯು ಮುಂದಿನ ವರ್ಷ ಜನವರಿ 5ಕ್ಕೆ ಮುಕ್ತಾಯವಾಗಲಿದೆ. ಆದರೆ, ಅವಧಿ ಪೂರ್ವ ಚುನಾವಣೆ ನಡೆಯುತ್ತಿದೆ.

81 ಕ್ಷೇತಗಳಲ್ಲೂ ಸ್ಪರ್ಧೆ: ಜಾರ್ಖಂಡ್ ವಿಧಾನಸಭೆ ಚುನಾವಣೆಯಲ್ಲಿ ಎಲ್ಲಾ 81 ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡುವುದಾಗಿ ಜಾರ್ಖಂಡ್ ಮುಕ್ತಿ ಮೋರ್ಚ್ ಹೇಳಿದೆ. ಜಾರ್ಖಂಡ್‌ನಲ್ಲಿ ಇದೀಗ ಜಾರ್ಖಂಡ್ ಮುಕ್ತಿ ಮೋರ್ಚ್ (ಜೆಎಂಎಂ) ನೇತೃತ್ವದ ಮೈತ್ರಿಕೂಟವು ಅಧಿಕಾರದಲ್ಲಿ ಇದೆ.
ಎಲ್ಲಾ 81 ಕ್ಷೇತ್ರಗಳಲ್ಲೂ ಸ್ಪರ್ಧಿಸುವುದಾಗಿ ಜಾರ್ಖಂಡ್ ಮುಕ್ತಿ ಮೋರ್ಚ್ ಪಕ್ಷದ ಮುಖಂಡ ಹಾಗೂ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಹೇಳಿದ್ದಾರೆ.
ಹರಿಯಾಣ ಹಾಗೂ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ನಂತರ ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆಗಳು ಭಾರೀ ಕುತೂಹಲ ಮೂಡಿಸಿವೆ. ಜಾರ್ಖಂಡ್‌ನಲ್ಲಿ ಸ್ಥಳೀಯ ಪಕ್ಷ ಆಡಳಿತದಲ್ಲಿ ಇದ್ದರೆ, ಮಹಾರಾಷ್ಟ್ರದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿ ಇದೆ.
ಇದೀಗ ಜಾರ್ಖಂಡ್‌ನ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು, ಮುಂದಿನ ಬಾರಿಯೂ ಜಾರ್ಖಂಡ್‌ನಲ್ಲಿ ನಾವೇ ಅಧಿಕಾರಕ್ಕೆ ಬರಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅವಧಿ ಪೂರ್ವ ವಿಧಾನಸಭೆ ಚುನಾವಣೆ: ಜಾರ್ಖಂಡ್ ವಿಧಾನಸಭೆ ಚುನಾವಣೆ ಅವಧಿಯು ಮುಂದಿನ ವರ್ಷ ಮುಕ್ತಾಯವಾಗಲಿದೆ. ಅಂದರೆ, 2025ನೇ ಸಾಲಿನ ಜನವರಿ 5ಕ್ಕೆ ಮುಕ್ತಾಯವಾಗಲಿದೆ. ಆದರೆ, ಜಾರ್ಖಂಡ್‌ನಲ್ಲಿ ಅವಧಿ ಪೂರ್ವ ವಿಧಾನಸಭೆ ಚುನಾವಣೆ ನಡೆಯುತ್ತಿದೆ.
ಕುತೂಹಲ ಮೂಡಿಸಿರುವ ಚುನಾವಣೆಗಳು: ಮಹಾರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭೆ ಚುನಾವಣೆಯು ಭಾರೀ ಕುತೂಹಲ ಮೂಡಿಸಿದೆ. ಹರಿಯಾಣ ಹಾಗೂ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯ ನಡುವೆ ಜಿದ್ದಾಜಿದ್ದಿ ಇತ್ತು. ಆದರೆ, ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆ ಚುನಾವಣೆ ಭಿನ್ನವಾಗಿವೆ. ಈ ಎರಡೂ ರಾಜ್ಯಗಳಲ್ಲೂ ಸ್ಥಳೀಯ ಹಾಗೂ ಪ್ರಾದೇಶಿಕ ಪಕ್ಷಗಳ ಪಾತ್ರ ನಿರ್ಣಾಯಕವಾಗಿದೆ.
ಹರಿಯಾಣ ವಿಧಾನಸಭೆ ಚುನಾವಣೆಯ ಗೆಲುವುನೊಂದಿಗೆ ಬಿಜೆಪಿ ಪಕ್ಷವು ಹುಮ್ಮಸ್ಸಿನಲ್ಲಿ ಇದೆ. ಆದರೆ, ಗೆಲ್ಲಬಹುದಾದ ಚುನಾವಣೆಯಲ್ಲಿ ಸೋತಿರುವ ಕಾಂಗ್ರೆಸ್ ಈ ಎರಡೂ ವಿಧಾನಸಭೆ ಚುನಾವಣೆಯಲ್ಲಿ ಹೊಸ ತಂತ್ರವನ್ನೇ ಅನುಸರಿಸುತ್ತಿದೆ. ಹೀಗಾಗಿ, ಎರಡೂ ರಾಜ್ಯಗಳ ವಿಧಾನಸಭೆ ಚುನಾವಣೆ ಭಾರೀ ಕುತೂಹಲವನ್ನು ಮೂಡಿಸಿದೆ.












Click it and Unblock the Notifications