Jharkhand Assembly Election 2024: ಜೆಜೆಎಂನಿಂದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
Jharkhand Assembly Election 2024: ಈಗಾಗಲೇ ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಇನ್ನು ಇಂದು (ಅಕ್ಟೋಬರ್ 23) ಜಾರ್ಖಂಡ್ ಜಾರ್ಖಂಡ್ ಮುಕ್ತಿ ಮೂರ್ಚಾ (ಜೆಎಂಎಂ) ಪಕ್ಷ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಘೋಷಣೆ ಮಾಡಿದೆ. ಎಷ್ಟು ಸ್ಥಾನಗಳಿಗೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಮುಂಬರುವ ವಿಧಾನಸಭಾ ಚುನಾವಣೆಗೆ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷವು ತನ್ನ 35 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಬಿಗುಡೆ ಮಾಡಿದೆ. ಬರ್ಹೈತ್‌ನಿಂದ ಮುಖ್ಯಮಂತ್ರಿ ಹೇಮಂತ್ ಸೊರೇನ್ ಮತ್ತು ಗಂಡೇ ಕ್ಷೇತ್ರದಿಂದ ಕಲ್ಪನಾ ಸೊರೇನ್ ಅವರನ್ನು ಕಣಕ್ಕಿಳಿಸಿದೆ.

ಇನ್ನು 35 ಜೆಎಂಎಂ ಅಭ್ಯರ್ಥಿಗಳಲ್ಲಿ ಮುಖ್ಯಮಂತ್ರಿಯ ಸಹೋದರ ಬಸಂತ್ ಸೊರೇನ್ ದುಮ್ಕಾ, ಜಾರ್ಖಂಡ್ ವಿಧಾನಸಭಾ ಸ್ಪೀಕರ್ ರವೀಂದ್ರನಾಥ್ ಮಹತೋ ನಾಲಾ, ಸಚಿವ ಮಿಥಿಲೇಶ್ ಠಾಕೂರ್ ಗರ್ವಾ, ಸೋನು ಸುದಿವ್ಯಾ ಗಿರಿದಿಹ್ ಮತ್ತು ಬೇಬಿ ದೇವಿ ಡುಮ್ರಿಯಿಂದ ಸರ್ಧೆ ಮಾಡಲಿದ್ದಾರೆ.
ಜಾರ್ಖಂಡ್‌ನ ವಿಧಾನಸಭಾ ಚುನಾವಣೆಗೆ ನವೆಂಬರ್ 13 ಮತ್ತು 20ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟ ಆಗಲಿದೆ.
ಬಿಜೆಪಿ ವಿರುದ್ಧ ಗುಡುಗಿದ ಕಲ್ಪನಾ: ಈಗಾಗಲೇ ಜಮ್ಮು-ಕಾಶ್ಮೀರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆ ನಡೆದಿದ್ದು, ಫಲಿತಾಂಶ ಕೂಡ ಹೊರಬಿದ್ದಿದೆ. ಇನ್ನು ಇದೀಗ ಜಾರ್ಖಂಡ್ ವಿಧಾನಸಭೆ ಚುನಾವಣೆಗೂ ದಿನಾಂಕ ಘೋಷಣೆಯಾಗಿದ್ದು, ಚುನಾವಣೆ ಆಯೋಗದ ನಿರ್ಧಾರಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ. ಹಾಗೆಯೇ ಇದೀಗ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದ ನಾಯಕಿಯೊಬ್ಬರು ಆಕ್ರೊಶ ಹೊರಹಾಕಿದ್ದಾರೆ.
ಬಿಜೆಪಿಯ ಪಿತೂರಿ ಭಾಗವಾದ ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆಯನ್ನು ನಿಗದಿತ ಸಮಯಯಕ್ಕಿಂತ ಮುಂಚಿತವಾಗಿ ನಡೆಸಲಾಗುತ್ತಿದೆ ಎಂದು ಶಾಸಕಿ, ಮುಖ್ಯಮಂತ್ರಿ ಹೇಮಂತ್ ಸೋರೇನ್ ಪತ್ನಿ ಕಲ್ಪನಾ ಸೊರೆನ್ ಆರೋಪ ಮಾಡಿದರು. ಗಿರಿಧಿಹದಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಚುನಾವಣೆ ಸಂಸ್ಥೆಗಳ ಮೇಲೆ ಬಿಜೆಪಿಯು ತನ್ನ ಪ್ರಭಾವವನ್ನು ಬಲಪಡಿಸುತ್ತಿದೆ ಎಂದು ಆರೋಪ ಮಾಡುವ ಮೂಲಕ ಆಕ್ರೊಶ ಹೊರಹಾಕಿದ್ದಾರೆ.
ಮಹಾರಾಷ್ಟ್ರದಲ್ಲಿ ನಿಗದಿತ ಸಮಯಕ್ಕೆ ಚುನಾವಣೆ ಘೋಷಣೆಯಾಗಿದೆ. ಆದರೆ, ಜಾರ್ಖಂಡ್‌ನಲ್ಲಿಅವಧಿಗೂ ಮುನ್ನ ಘೋಷಣೆ ಆಗಿದೆ. ಸಾಮಾನ್ಯವಾಗಿ 5 ಹಂತಗಳಲ್ಲಿ ನಡೆಯುತ್ತಿದ್ದ ಚುನಾವಣೆಯನ್ನು ಈ ಬಾರಿ ಬರೀ 2 ಹಂತಗಳಲ್ಲಿ ನಡೆಸಲಾಗುತ್ತಿದೆ ಎಂದು ಹೇಳಿದರು. ಇನ್ನು ಗ್ರಾಮೀಣ ಪ್ರದೇಶದಲ್ಲಿ ಮತದಾನದ ವೇಳೆಯನ್ನು ಒಂದು ಗಂಟೆ ಕಡಿತಗೊಳಿಸಲಾಗಿದೆ ಎಂದರು.












Click it and Unblock the Notifications