Jharkhand Election 2024: ಮುಖ್ಯ ಚುನಾವಣಾ ಆಯುಕ್ತ ಅಧಿಕಾರಿಗಳಿಗೆ ನೀಡಿದ ಪ್ರಮುಖ ಸೂಚನೆಗಳೇನು?
Jharkhand Election 2024: ವಿಧಾನಸಭೆ ಚುನಾವಣಗೆ ದಿನಾಂಕ ಘೋಷಣೆಯಾಗಿಲ್ಲ. ಆದರೆ ಈಗಾಗಲೇ ರಾಜ್ಯದಲ್ಲಿ ಗೆಲುವುಗಾಗಿ ಕಾಂಗ್ರೆಸ್, ಬಿಜೆಪಿ ಸೇರಿದಂತೆ ಸ್ಥಳೀಯ ಪಕ್ಷಗಳು ಇನ್ನಿಲ್ಲದ ಪ್ರಯತ್ನಗಳನ್ನು ನಡೆಸುತ್ತಿವೆ. ಮತ್ತೊಂದೆಡೆ ರಾಂಚಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಸಭೆ ನಡೆಸಿದ್ದಾರೆ. ಮಾಹಿತಿ ಇಲ್ಲಿದೆ ತಿಳಿಯಿರಿ.
ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು, ರಾಂಚಿಯಲ್ಲಿ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್, ಡಾ.ಎಸ್.ಎಸ್.ಸಂಧು, ಪೊಲೀಸ್ ಅಧಿಕಾರಿಗಳೊಂದಿಗೆ ಸಮಗ್ರ ಪರಿಶೀಲನಾ ಸಭೆ ನಡೆಸಿದರು. ಈ ವೇಳೆ ರಾಜ್ಯದಲ್ಲಿ ಚುನಾವಣೆ ವೇಳೆ ಯಾವುದೇ ಲೋಪದೋಷಗಳು ಆಗಬಾರದು ಎಂದು ರಾಜ್ಯ ಹಾಗೂ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.

ಚುನಾವಣಾ ಆಯೋಗ ತಂಡವು ಎರಡು ದಿನಗಳ ಕಾಲ ಜಾರ್ಖಂಡ್ ಪ್ರವಾಸದಲ್ಲಿ ವಿಧಾನಸಭಾ ಚುನಾವಣೆಯ ಸಿದ್ಧತೆಗಳನ್ನು ಪರಿಶೀಲನೆ ನಡೆಸಿತು. ಈ ವೇಳೆ ಯಾವುದೇ ಪಕ್ಷಪಾತವಿಲ್ಲದೆ ಮತ್ತು ನಿಗದಿತ ಮಾರ್ಗಸೂಚಿಗಳ ಪ್ರಕಾರ ಚುನಾವಣೆ ನಡೆಸಲಾಗುವುದು ಎಂದು ತಿಳಿಸಿತು. ಇನ್ನು ಯಾವಾಗ ಬೇಕಾದರೂ ಚುನಾವಣಾ ದಿನಾಂಕವನ್ನು ಪ್ರಕಟ ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
2019ರಲ್ಲಿ ನವೆಂಬರ್ 30 ಮತ್ತು ಡಿಸೆಂಬರ್ 20ರ ನಡುವೆ 5 ಹಂತಗಳಲ್ಲಿ 81 ವಿಧಾನಸಭಾ ಸ್ಥಾನಗಳಿಗೆ ಚುನಾವಣೆಗಳನ್ನು ನಡೆಸಲಾಗಿದ್ದು, ಡಿಸೆಂಬರ್ 23ರಂದು ಫಲಿತಾಂಶಗಳನ್ನು ಘೋಷಣೆ ಮಾಡಲಾಯಿತು. ಇನ್ನು ಈ ಬಾರಿ ವರ್ಷದ ಕೊನೆಯಲ್ಲಿ ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. 2-3 ಹಂತಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಇನ್ನು ಜಾರ್ಖಂಡ್ ವಿಧಾನಸಭೆಯ ಚುನಾವಣೆಯು ಜನವರಿ 5, 2025ರಂದು ಕೊನೆಗೊಳ್ಳಲಿದೆ ಎಂದು ಹೇಳಾಲಾಗುತ್ತಿದೆ. ರಾಜ್ಯದಲ್ಲಿ ಒಟ್ಟು 2.59 ಕೋಟಿ ಮತದಾರರಿದ್ದಾರೆ. ಇವರಲ್ಲಿ 1.31 ಕೋಟಿ ಪುರುಷರು ಮತ್ತು 1.28 ಕೋಟಿ ಮಹಿಳೆಯರಿದ್ದಾರೆ. ರಾಜ್ಯದಲ್ಲಿ ಪ್ರಥಮ ಬಾರಿಗೆ 11.5 ಲಕ್ಷಕ್ಕೂ ಹೆಚ್ಚು ಮಂದಿ ಮತದಾನ ಮಾಡಲಿದ್ದಾರೆ. 1.5 ಲಕ್ಷ ಮತದಾರರು 85 ವರ್ಷ ಮೇಲ್ಪಟ್ಟವರಾಗಿದ್ದು, 3.64 ಲಕ್ಷ ಅಂಗವಿಕಲ ಮತದಾರರಿದ್ದಾರೆ ಎಂದು ತಿಳಿದುಬಂದಿದೆ.
ಎಷ್ಟು ಮತದಾನವಾಗಿದೆ?: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಎರಡನೇ ಹಂತದ ಮತದಾನ ಇಂದು (ಸೆಪ್ಟೆಂಬರ್ 25) ಮುಕ್ತಾಯವಾಗಿದೆ. ಬಿಗಿ ಭದ್ರತೆಯ ನಡುವೆ 26 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ 2ನೇ ಹಂತದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದ್ದು, ಒಟ್ಟು 56% ಮತದಾನ ನಡೆದಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ಜಮ್ಮು ಭಾಗದಲ್ಲಿ ಶ್ರೀ ಮಾತಾ ವೈಷ್ಣೋ ದೇವಿ ಕ್ಷೇತ್ರದಲ್ಲಿ 75.29% ಮತದಾನವಾಗಿದೆ. ಕಾಶ್ಮೀರ ಭಾಗದಲ್ಲಿ ಖಾನ್ಸಾಹಿಬ್ ಕ್ಷೇತ್ರದಲ್ಲಿ 67.70% ರಷ್ಟು ಮತದಾನ ನಡೆದಿದೆ ಎಂದು ತಿಳಿದುಬಂದಿದೆ.
ಮೊದಲ ಹಂತದಲ್ಲಿ ಶೇಕಡ 61.38ರಷ್ಟು ಮತದಾನ ಆಗಿದೆ. ಇನ್ನು ಮೂರನೇ ಹಂತ ಅಕ್ಟೋಬರ್ 1 ರಂದು ನಡೆಯಲಿದ್ದು, ಅಕ್ಟೋಬರ್ 8ರಂದು ಮತ ಎಣಿಕೆ ನಡೆಯಲಿದೆ. ಈ ಬಾರಿ ಶ್ರೀನಗರ ಜಿಲ್ಲೆಯಲ್ಲಿ 93, ಬುದ್ಗಾಮ್ ಜಿಲ್ಲೆಯಲ್ಲಿ 46, ರಾಜೌರಿ ಜಿಲ್ಲೆಯಲ್ಲಿ 34, ಪೂಂಚ್ ಜಿಲ್ಲೆಯಲ್ಲಿ 25, ಗಂದರ್‌ಬಾಲ್ ಜಿಲ್ಲೆಯಲ್ಲಿ 21 ಮತ್ತು ರಿಯಾಸಿ ಜಿಲ್ಲೆಯಲ್ಲಿ 20 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications