Get Updates
Get notified of breaking news, exclusive insights, and must-see stories!

Assembly Election 2024: 83,700 ಕೋಟಿ ರೂಪಾಯಿ ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

Jharkhand Assembly Election 2024: ಜಾರ್ಖಂಡ್‌ ಚುನಾವಣೆಗೆ ವಿಧಾನಸಭೆ ಚುನಾವಣೆಗೆ ದಿನಾಂಕ ಇನ್ನೂ ಘೋಷಣೆಯಾಗಿಲ್ಲ. ಆದರೆ, ಎಲ್ಲಾ ಪಕ್ಷಗಳ ರಾಜಕೀಯ ನಾಯಕರು ಮಾತ್ರ ಅಬ್ಬರ ಪ್ರಚಾರ ಆರಂಭಿಸಿದ್ದಾರೆ. ಇನ್ನು ಇಂದು (ಅಕ್ಟೋಬರ್‌ 2) ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜಾರ್ಖಂಡ್‌ನಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ಹಾಗಾದರೆ ಸಂಪೂರ್ಣ ಮಾಹಿತಿ ಇಲ್ಲಿದೆ ತಿಳಿಯಿರಿ.

ವಿಧಾನಸಭೆ ಚುನಾವಣೆ ಹಿನ್ನೆಲೆ ಈಗಾಗಲೇ ಇತ್ತೀಚೆಗಷ್ಟೇ ಜಾರ್ಖಂಡ್‌ನಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆ ಮಾಡಿದ್ದರು. ಇದೀಗ ಜಾರ್ಖಂಡ್‌ನಲ್ಲಿ 83,700 ಕೋಟಿ ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಅಕ್ಟೋಬರ್‌ 02) ಚಾಲನೆ ನೀಡಿದರು. ಇದೀಗ ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ 78,150 ಕೋಟಿ ರೂಪಾಯಿ ವೆಚ್ಚದಲ್ಲಿ ಧರ್ತಿ ಆಬಾ ಜನಜಾತಿಯ ಗ್ರಾಮ ಉತ್ಕರ್ಷ್‌ ಅಭಿಯಾನಕ್ಕೆ ಪ್ರಧಾನಿ ಚಾಲನೆ ನೀಡಿದರು.

Jharkhand Assembly Election 2024 PM Modi unveils Projects Worth Rs 83 700 Crores today

ಈ ಮೂಲಕ ದೇಶಾದ್ಯಂತ ಬುಡಕಟ್ಟು ಜನಸಮುದಾಯಗಳ ಸಮಗ್ರ ಅಭಿವೃದ್ಧಿಯನ್ನು ಖಾತ್ರಿಪಡಿಸುವ ಉದ್ದೇಶ ಹೊಂದಲಾಗಿದೆ. ಈ ಯೋಜನೆಯಿಂದ 30 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ 549 ಜಿಲ್ಲೆಗಳ 5 ಕೋಟಿಗೂ ಹೆಚ್ಚು ಬುಡಕಟ್ಟು ಜನಾಂಗದವರಿಗೆ ಪ್ರಯೋಜನ ಸಿಗಲಿದೆ. 1,360 ಕೋಟಿ ರೂಪಾಯಿ ಮೌಲ್ಯದ ಪ್ರಧಾನಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಅಭಿಯಾನಕ್ಕೂ ಪ್ರಧಾನಿ ಮೋದಿ ಚಾಲನೆ ನೀಡಿದರು.

ಇದು 1,380 ಕಿಲೋ ಮೀಟರ್‌ ರಸ್ತೆ, 120 ಅಂಗನವಾಡಿ ಕೇಂದ್ರಗಳು, 250 ಬಹು ಉದ್ದೇಶದ ಕೇಂದ್ರಗಳು ಮತ್ತು 10 ಶಾಲಾ ಹಾಸ್ಟೇಲ್‌ಗಳನ್ನು ಒಳಗೊಂಡಿದೆ.

ಪರಿವರ್ತಾನಾ ಯಾತ್ರೆ: ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 20ರಿಂದ ಬಿಜೆಪಿ ಪರಿವರ್ತನ ಯಾತ್ರೆಗೆ ಚಾಲನೆ ನೀಡಿದ್ದು, ಇದು ಅಕ್ಟೋಬರ್ 2ರಂದು ಮುಕ್ತಾಯಗೊಳಿಸಲಾಗಿತ್ತು. ಇನ್ನು 24 ಜಿಲ್ಲೆಗಳ 81 ವಿಧಾನಸಭಾ ಕ್ಷೇತ್ರಗಳಲ್ಲಿ 5,400 ಕಿಲೋ ಮೀಟರ್‌ ಯಾತ್ರೆ ಸಾಗಿತ್ತು ಎನ್ನುವ ಮಾಹಿತಿ ಲಭ್ಯವಾಗಿತ್ತು.

2019ರಲ್ಲಿ ನವೆಂಬರ್ 30 ಮತ್ತು ಡಿಸೆಂಬರ್ 20ರ ನಡುವೆ 5 ಹಂತಗಳಲ್ಲಿ 81 ವಿಧಾನಸಭಾ ಸ್ಥಾನಗಳಿಗೆ ಚುನಾವಣೆಗಳನ್ನು ನಡೆಸಲಾಗಿದ್ದು, ಡಿಸೆಂಬರ್ 23ರಂದು ಫಲಿತಾಂಶಗಳನ್ನು ಘೋಷಣೆ ಮಾಡಲಾಯಿತು. ಇನ್ನು ಈ ಬಾರಿ ವರ್ಷದ ಕೊನೆಯಲ್ಲಿ ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. 2-3 ಹಂತಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಜಾರ್ಖಂಡ್ ವಿಧಾನಸಭೆಯ ಚುನಾವಣೆಯು ಜನವರಿ 5, 2025ರಂದು ಕೊನೆಗೊಳ್ಳಲಿದೆ ಎಂದು ಹೇಳಾಲಾಗುತ್ತಿದೆ. ರಾಜ್ಯದಲ್ಲಿ ಒಟ್ಟು 2.59 ಕೋಟಿ ಮತದಾರರಿದ್ದಾರೆ. ಇವರಲ್ಲಿ 1.31 ಕೋಟಿ ಪುರುಷರು ಮತ್ತು 1.28 ಕೋಟಿ ಮಹಿಳೆಯರಿದ್ದಾರೆ. ರಾಜ್ಯದಲ್ಲಿ ಪ್ರಥಮ ಬಾರಿಗೆ 11.5 ಲಕ್ಷಕ್ಕೂ ಹೆಚ್ಚು ಮಂದಿ ಮತದಾನ ಮಾಡಲಿದ್ದಾರೆ. 1.5 ಲಕ್ಷ ಮತದಾರರು 85 ವರ್ಷ ಮೇಲ್ಪಟ್ಟವರಾಗಿದ್ದು, 3.64 ಲಕ್ಷ ಅಂಗವಿಕಲ ಮತದಾರರಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಜಾರ್ಖಂಡ್‌ ವಿಧಾನಸಭೆ ಚುನಾವಣೆ ನವೆಂಬರ್‌ 2ನೇ ವಾರ ನಡೆಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+