Jharkhand Assembly Election 2024: ಜಾರ್ಖಂಡ್ ಚುನಾವಣೆ.. 38 ವಿಧಾನಸಭಾ ಕ್ಷೇತ್ರಗಳಲ್ಲಿ 47.92% ಮತದಾನ

ರಾಂಚಿ ನವೆಂಬರ್ 20: ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ಇಂದು (ನವೆಂಬರ್ 20) ಎರಡನೇ ಹಾಗೂ ಅಂತಿಮ ಹಂತದ ಮತದಾನ ನಡೆಯುತ್ತಿದೆ. 38 ವಿಧಾನಸಭಾ ಕ್ಷೇತ್ರಗಳಲ್ಲಿ ಮಧ್ಯಾಹ್ನದವರೆಗೆ ಒಟ್ಟು 47.92% ಮತದಾನವಾಗಿದೆ ಎಂದು ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಡಾ. ನೇಹಾ ಅರೋರಾ ತಿಳಿಸಿದ್ದಾರೆ.

ಜಾರ್ಖಂಡ್‌ನಲ್ಲಿ 81 ವಿಧಾನಸಭಾ ಕ್ಷೇತ್ರಗಳಿದ್ದು, ನವೆಂಬರ್ 13ರಂದು ಜಾರ್ಖಂಡ್‌ನ 43 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಇಂದು (ನವೆಂಬರ್ 20) ಬುಧವಾರ ಒಟ್ಟು 38 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಇಂದಿನ ಮತದಾನದ ಬಳಿಕ ಚುನಾವಣೋತ್ತರ ಸಮೀಕ್ಷೆಗಳು ಹೊರಬೀಳುವ ಸಾಧ್ಯತೆ ಇದ್ದು, ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.

Jharkhand Assembly Election 47 92 PC Voter Turnout Recorded In 38 Assembly Seats Till Afternoon

ಇನ್ನು ಎರಡನೇ ಹಂತವಾಗಿ 38 ವಿಧಾನಸಭಾ ಕ್ಷೇತ್ರಗಳಲ್ಲಿ ಬೆಳಗ್ಗೆ 7 ಗಂಟೆ ಸುಮಾರಿಗೆ ಮತದಾನ ಆರಂಭವಾಗಿದ್ದು, ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಶಾಂತಿಯುತ ಮತದಾನದ ಮುನ್ನೆಚ್ಚರಿಕೆ ಕ್ರಮವಾಗಿ ಜಾರ್ಖಂಡ್‌ನ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಗಿ ಬಂದೋಬಸ್ತ್‌ ವ್ಯವಸ್ಥೆ ಮಾಡಲಾಗಿದೆ.

ಅಂತಿಮ ಹಂತದ 38 ವಿಧಾನಸಭಾ ಕ್ಷೇತ್ರಗಳಲ್ಲಿ ಒಂದು ಕೋಟಿಗೂ ಹೆಚ್ಚು ಮತದಾರರು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ ಎಂದು ಈಗಾಗಲೇ ಚುನಾವಣಾ ಆಯೋಗ ತಿಳಿಸಿದೆ. ನವೆಂಬರ್ 13 ರಂದು ನಡೆದ ಜಾರ್ಖಂಡ್‌ನ ಮೊದಲನೇ ಹಂತದ ಮತದಾನದಲ್ಲಿ 66.65% ರಷ್ಟು ಮತದಾನವಾಗಿದೆ. ಇದು 2019ರ ವಿಧಾನಸಭಾ ಚುನಾವಣೆಯ ಮತದಾನಕ್ಕಿಂತ 2.75% ಹೆಚ್ಚಾಗಿದೆ. ಇನ್ನು ಎರಡನೇ ಹಂತದಲ್ಲಿ ಬೆಳಗ್ಗೆಯಿಂದ ಈವರೆಗೆ 47.92% ಮತದಾನವಾಗಿದೆ ಎಂದು ತಿಳಿದು ಬಂದಿದೆ.

ಇನ್ನು ಮಹಾರಾಷ್ಟ್ರದಲ್ಲಿಯೂ ಇಂದು (ನವೆಂಬರ್‌ 20) ಬುಧವಾರ ವಿಧಾನಸಭೆ ಚುನಾವಣೆಗೆ ಮತದಾನ ನಡೆಯುತ್ತಿದೆ. ಮಹಾರಾಷ್ಟ್ರದ ಒಟ್ಟು 288 ಕ್ಷೇತ್ರಗಳಿಗೆ ಒಂದೇ ಹಂತದ ಮತದಾನ ನಡೆದಿದ್ದು, ಕಣದಲ್ಲಿರುವ ಒಟ್ಟು 4,136 ಅಭ್ಯರ್ಥಿಗಳ ಭವಿಷ್ಯ ನವೆಂಬರ್‌ 23ರಂದು ಹೊರಬೀಳಲಿದೆ. ಇನ್ನು ಬೆಳಗ್ಗೆ 7 ಗಂಟೆ ಸುಮಾರಿಗೆ ಮತದಾನ ಆರಂಭವಾಗಿದ್ದು, ಈವರೆಗೆ 32.18% ಮತದಾನವಾಗಿದೆ ಎಂದು ತಿಳಿದು ಬಂದಿದೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+