ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಾರ್ಖಂಡ್ ವಿಧಾನಸಭೆಗಾಗಿ ಬಿಜೆಪಿ ರಣತಂತ್ರ, 52 ಅಭ್ಯರ್ಥಿಗಳ ಪಟ್ಟಿ ಪ್ರಕಟ

|
Google Oneindia Kannada News

ನವದೆಹಲಿ, ನವೆಂಬರ್ 10: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಆಸೆ ಕೈಬಿಟ್ಟಿರುವ ಭಾರತೀಯ ಜನತಾ ಪಕ್ಷ ಈಗ ಜಾರ್ಖಂಡ್ ವಿಧಾನಸಭೆಯತ್ತ ಗಮನ ಹರಿಸಿದೆ. ವಿಧಾನಸಭೆ ಚುನಾವಣೆಯಲ್ಲಿ ಗೆಲುವು ದಾಖಲಿಸಲು ರಣತಂತ್ರ ರೂಪಿಸಿದ್ದು, ಅಳೆದು ತೂಗಿ 52 ಮಂದಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಭಾನುವಾರದಂದು ಪ್ರಕಟಿಸಿದೆ.

ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ಜೆಪಿ ನಡ್ಡಾಅವರು ಸುದ್ದಿಗೋಷ್ಠಿ ನಡೆಸಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮುಂದಿಟ್ಟಿದ್ದಾರೆ. "ಐದು ವರ್ಷಗಳ ಹಿಂದೆ ಜಾರ್ಖಂಡ್ ರಾಜ್ಯವು ಭ್ರಷ್ಟಾಚಾರ ಹಾಗೂ ಅಸ್ಥಿರ ಪರಿಸ್ಥಿತಿಯನ್ನು ಎದುರಿಸಿತ್ತು. ಇಂದು ರಘುಬರ್ ದಾಸ್ ಅವರ ನಾಯಕತ್ವದಲ್ಲಿ ಜಾರ್ಖಂಡ್ ನಲ್ಲಿ ಸ್ಥಿರ ಹಾಗೂ ಅಭಿವೃದ್ಧಿ ಪರಿಸ್ಥಿತಿ ನಿರ್ಮಾಣವಾಗಿದೆ. ಅಭಿವೃದ್ಧಿಗೆ ಮಾರಕವಾಗಿದ್ದ ಭ್ರಷ್ಟಾಚಾರವನ್ನು ತೊಡೆದು ಹಾಕಲಾಗಿದೆ" ಎಂದು ಜೆಪಿ ನಡ್ಡಾ ಹೇಳಿದರು.

Jharkhand Assembly Elections 2019: BJP releases first candidate list of 52 candidates

81 ಕ್ಷೇತ್ರಗಳ ಜಾರ್ಖಂಡ್ ವಿಧಾನಸಭೆಗಾಗಿ 52 ಅಭ್ಯರ್ಥಿಗಳನ್ನು ಹೆಸರಿಸಲಾಗಿದ್ದು, ಮುಖ್ಯಮಂತ್ರಿ ರಘುಬರ್ ದಾಸ್ ಅವರು ಜೆಮ್ಶೆಡ್ಪುರ್ ಪೂರ್ವ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಜಾರ್ಖಂಡ್ ರಾಜ್ಯಾಧ್ಯಕ್ಷ ಲಕ್ಷ್ಮಣ್ ಗಿಲುವಾ ಅವರು ಚಕ್ರಧಾರ್ ಪುರ್ ನಿಂದ ಸ್ಪರ್ಧಿಸುತ್ತಿದ್ದಾರೆ.

65 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ: ರಘುವರ್ ದಾಸ್ ವಿಶ್ವಾಸ65 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ: ರಘುವರ್ ದಾಸ್ ವಿಶ್ವಾಸ

ಜಾರ್ಖಂಡ್ ರಾಜ್ಯದಲ್ಲಿ ಐದು ಸುತ್ತಿನಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್ 30 ರಂದು ಮೊದಲ ಹಂತದ ಮತದಾನ ನಡೆಯಲಿದ್ದು, ಡಿಸೆಂಬರ್ 23ರಂದು ಕೊನೆ ಹಂತದ ಮತದಾನ ನಿಗದಿಯಾಗಿದೆ.

ಬಿಜೆಪಿಗೆ ಸೆಡ್ಡು ಹೊಡೆಯಲು ಜಾರ್ಖಂಡ್ ಮುಕ್ತಿ ಮೋರ್ಚಾ( ಜೆಎಂಎಂ), ಕಾಂಗ್ರೆಸ್, ಲಾಲೂ ಪ್ರಸಾದ್ ಯಾದವ್ ಅವರ ರಾಷ್ಟ್ರೀಯ ಜನತಾ ದಳ ಮೈತ್ರಿಕೂಟ ರಚಿಸಿವೆ. ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಅವರು ಮೈತ್ರಿಕೂಟದ ಸಿಎಂ ಅಭ್ಯರ್ಥಿಯಾಗಿ ಗುರುತಿಸಿಕೊಂಡಿದ್ದಾರೆ.

81 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 31, ಆರ್ ಜೆಡಿ 7 ಹಾಗೂ ಜೆಎಂಎಂ 43 ಸ್ಥಾನಗಳಲ್ಲಿ ಸ್ಪರ್ಧೆಗಿಳಿದಿವೆ. ಜಾರ್ಖಂಡ್ ನಲ್ಲಿ ಕಳೆದ ವಿಧಾನಸಭೆ ಚುನಾವನೆ 2014 ರಲ್ಲಿ ನಡೆದಿತ್ತು. ಒಟ್ಟು 81 ಶಾಸಕ ಬಲದ ಜಾರ್ಖಂಡ್ ನಲ್ಲಿ ಪ್ರಸ್ತುತ ಬಿಜೆಪಿ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿದೆ. 37 ಸ್ಥಾನಗಳ್ಲಲಿ ಜಯಗಳಿಸಿದ್ದ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿ, ಸ್ಥಳೀಯ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಬಹುಮತ ಸಾಬೀತುಪಡಿಸಿ, ಸರ್ಕಾರ ರಚಿಸಿತ್ತು. ರಘುವರ್ ದಾಸ್ ಮುಖ್ಯಮಂತ್ರಿಯಾಗಿದ್ದರು.

English summary
Bharatiya Janata Party (BJP) has released its first candidate list for Jharkhand Legislative Assembly Elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X