Jharkhand Assembly Polls 2024: ಜಾರ್ಖಂಡ್‌ನಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮಗಳು ಪಟ್ಟಿ

Jharkhand Assembly Polls 2024: ಜಾರ್ಖಂಡ್‌ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳಷ್ಟೇ ಬಾಕಿಯಿದ್ದು, ಎಲ್ಲಾ ರಾಜಕೀಯ ಪಕ್ಷಗಳು ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಇನ್ನು ಇಂದು (ನವೆಂಬರ್‌ 04) ರಾಜ್ಯದ ಎರಡು ಕಡೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಅಬ್ಬರದ ಪ್ರಚಾರ ನಡೆಸಲಿದ್ದಾರೆ. ಹಾಗಾದರೆ ಎಲ್ಲೆಲ್ಲಿ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಪ್ರಧಾನಿ ಮೋದಿ ಅವರು ಇಂದು ನೇರವಾಗಿ ಬಿಹಾರದ ಗಯಾ ವಿಮಾನ ನಿಲ್ದಾಣಕ್ಕೆ ಬಂದು ಇಳಿಯಲಿದ್ದಾರೆ. ಬಳಿಕ ಗರ್ವಾದಲ್ಲಿ ಬಿಜೆಪಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಅವರು ರಾಂಚಿಗೆ ಹೋಗಲಿದ್ದು, ಬಳಿಕ ಮಧ್ಯಾಹ್ನ 2:30ರ ವೇಳೆಗೆ ಚೈಬಾಸಾದಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.

Jharkhand Assembly Polls 2024 List of PM Modi s Programs today

ಅಮಿತ್‌ ಶಾ ಆಕ್ರೊಶ: ಬಿಜೆಪಿ ಅಧಿಕಾರಕ್ಕೆ ಬಂದರೆ, ಜಾರ್ಖಂಡ್‌ನಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಘೋಷಣೆ ಮಾಡಿದ್ದಾರೆ. ನಮ್ಮ ಸರ್ಕಾರವು ಜಾರ್ಖಂಡ್‌ನಲ್ಲಿ ಯುಸಿಸಿಯನ್ನು ಪರಿಚಯಿಸುತ್ತದೆ. ಆದರೆ, ಹೇಮಂತ್ ಸೋರೆನ್ ಮತ್ತು ಜೆಎಂಎಂ ಸರ್ಕಾರ ಯುಸಿಸಿ ಬುಡಕಟ್ಟು ಹಕ್ಕುಗಳು, ಸಂಸ್ಕೃತಿ ಮತ್ತು ಸಂಬಂಧಿತ ಶಾಸನಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಸುಳ್ಳು ಪ್ರಚಾರವನ್ನು ಮಾಡುತ್ತಿದ್ದಾರೆ. ಇದು ಸಂಪೂರ್ಣವಾಗಿ ಆಧಾರ ರಹಿತವಾಗಿದೆ ಎಂದು ಹೇಳಿದರು.

ಯುಸಿಸಿ ಜಾರಿಯಾಗಿದ್ದರೂ, ಬುಡಕಟ್ಟು ಜನಾಂಗದವರ ಹಕ್ಕುಗಳಿಗೆ ಧಕ್ಕೆ ಆಗದಂತೆ ನೋಡಿಕೊಳ್ಳುತ್ತದೆ ಎಂದು ಹೇಳುವ ಮೂಲಕ ಕಾಂಗ್ರೆಸ್‌ ಹಾಗೂ ಜೆಎಂಎಂ ವಿರುದ್ಧ ಆಕ್ರೋಶ ಹೊರಹಾಕಿದರು.

ಬಿಜೆಪಿ ಭರವಸೆಗಳು: ಜಾರ್ಖಂಡ್‌​ನ ಕುಟುಂಬಗಳು 500 ರೂಪಾಯಿಗೆ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಖರೀದಿಸಲು ಸಾಧ್ಯ ಆಗುತ್ತದೆ. ಜೊತೆಗೆ, ಒಂದು ವರ್ಷದಲ್ಲಿ ಎರಡು ಸಿಲಿಂಡರ್‌ಗಳನ್ನು ಉಚಿತವಾಗಿ ನೀಡಲಾಗುವುದು. ಅಲ್ಲದೇ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ 2.87 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಮೊಟ್ಟ ಮೊದಲ ಸಂಪುಟ ಸಭೆಯ ನಂತರ ನೇಮಕಾತಿ ಪ್ರಕ್ರಿಯೆ ಆರಂಭ ಆಗಲಿದ್ದು, 2025ರ ನವೆಂಬರ್ ವೇಳೆಗೆ 1.5 ಲಕ್ಷ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.

ಪಕ್ಷವು ಅಧಿಕಾರಕ್ಕೆ ಬಂದರೆ, ಎರಡು ವರ್ಷಗಳವರೆಗೆ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ 2,000 ರೂಪಾಯಿಗಳ ಆರ್ಥಿಕ ಸಹಾಯವನ್ನು ನೀಡುತ್ತದೆ. ಇದರಿಂದಾಗಿ ಅವರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗಬಹುದು. ಬಿಜೆಪಿಯು ಮಹಿಳೆಯರ ಸಬಲೀಕರಣದ ಧ್ಯೇಯೋದ್ದೇಶದ ಭಾಗವಾಗಿ 'ಗೋಗೋ-ದೀದಿ' ಯೋಜನೆಯನ್ನು ಆರಂಭಿಸಲಿದೆ ಮತ್ತು ಕಾರ್ಯಕ್ರಮದಡಿಯಲ್ಲಿ ಮಹಿಳೆಯರಿಗೆ ತಿಂಗಳಿಗೆ 2,100 ರೂಪಾಯಿ ನೀಡಲಾಗುತ್ತದೆ.

ಇನ್ನು ಜಾರ್ಖಂಡ್‌ನ 81 ವಿಧಾನಸಭಾ ಸ್ಥಾನಗಳಿಗಗೆ ನವೆಂಬರ್ 13 ಮತ್ತು ನವೆಂಬರ್ 20ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮತಗಳ ಎಣಿಕೆ ನವೆಂಬರ್ 23ರಂದು ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+