Jharkhand: ಸೋಷಿಯಲ್ ಮೀಡಿಯಾ ಪೋಸ್ಟ್ ಡಿಲೀಟ್ ಮಾಡಲು ಬಿಜೆಪಿಗೆ ಚುನಾವಣಾ ಆಯೋಗ ಸೂಚನೆ

ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ವಾಗ್ವಾದ ತಾರಕಕ್ಕೇರಿದೆ. ಜಾರ್ಖಂಡ್ ರಾಜ್ಯ ಬಿಜೆಪಿಯುವ ಜೆಎಂಎಂ ಸರ್ಕಾರದ ವಿರುದ್ದ ಆಕ್ಷೇಪಾರ್ಹ ಪ್ರಚಾರದ ವಿಡಿಯೋ ಪೋಸ್ಟ್ ಮಾಡಿದ್ದಕ್ಕೆ ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದ್ದಲ್ಲದೆಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ಕೊಡಲಾಗಿತ್ತು. ದೂರಿಗೆ ಸ್ಪಂದಿಸಿರುವ ಚುನಾವಣಾ ಆಯೋಗವು ಕೂಡಲೇ ವಿಡಿಯೋ ಮತ್ತು ವಿವಾದಿತ ಪೋಸ್ಟ್‌ಗಳನ್ನು ತೆಗೆದುಹಾಕುವಂತೆ ಸೂಚನೆ ಕೊಟ್ಟಿದೆ.

ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ ಮತ್ತು ಕಾಂಗ್ರೆಸ್ ದೂರಿನ ಬಳಿಕ ಎಚ್ಚೆತ್ತ ಚುನಾವಣಾ ಆಯೋಗ ಕಾಂಗ್ರೆಸ್ ಉಲ್ಲೇಖಿಸಿದಂತೆ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಖಾತೆಯಲ್ಲಿ ಮಾದರಿ ನೀತಿ ಸಂಹಿತೆ ನಿಬಂಧನೆಗಳ ಉಲ್ಲಂಘನೆಯಾಗಿರುವ ಬಗ್ಗೆ ವಿವರಣೆ ನೀಡುವಂತೆ ಬಿಜೆಪಿಗೆ ಕೇಳಿದೆ.

Jharkhand bjp social media post poll code violation

ಎಕ್ಸ್ ಮತ್ತು ಫೇಸ್‌ಬುಕ್‌ನಲ್ಲಿ ಬಿಜೆಪಿ ಪೋಸ್ಟ್ ಮಾಡಿರುವ ವಿಡಿಯೋ ಸಂದೇಶದಲ್ಲಿ ಕೋಮುವಾದ, ದುರುದ್ದೇಶಪೂರಿತ ಮತ್ತು ತಪ್ಪುದಾರಿಗೆಳೆಯುವ ಅಂಶಗಳಿವೆ ಎಂದು ಕಾಂಗ್ರೆಸ್ ಮತ್ತು ಜೆಂಎಂಎಂ ಆರೋಪಿಸಿತ್ತು. ಬಿಜೆಪಿ ಹಂಚಿಕೊಂಡಿರುವ ಪೋಸ್ಟ್ ಜಾರ್ಖಂಡ್ ರಾಜ್ಯದಲ್ಲಿ ಗೊತ್ತುಪಡಿಸಿದ ಅಧಿಕಾರದ ಮೂಲಕ ಐಟಿ ಕಾಯಿದೆಯ ಸೆಕ್ಷನ್ 79(3)(ಬಿ) ಅಡಿಯ ಸ್ಪಷ್ಟ ಉಲ್ಲಂಘನೆಯಾಗಿದ್ದು ತಕ್ಷಣ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ಕೊಟ್ಟಿದೆ.

ಬಾಂಗ್ಲಾದೇಶದಿಂದ ವಲಸೆ ಬಂದು ಜಾರ್ಖಂಡ್‌ನಲ್ಲೇ ನೆಲೆಸಲು ಈಗಿನ ರಾಜ್ಯ ಸರ್ಕಾರ ಅನುಮತಿ ನೀಡುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದಾರೆ. ಬಿಜೆಪಿ ಏನಾದರೂ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಒಳನುಸುಳುವಿಕೆ ಮತ್ತು ಭ್ರಷ್ಟಾಚಾರವನ್ನು ನಿಲ್ಲಿಸುತ್ತೇನೆ ಎಂದು ಭರವಸೆ ನೀಡಿದೆ.

ಬಿಜೆಪಿ ಕೊಟ್ಟಿರುವ ಭರವಸೆಗಳೇನು

ನುಸುಳುಕೋರರನ್ನು ದೇಶಬಿಟ್ಟು ಹೊರಹಾಕುವುದು, ಏಕರೂಪ ನಾಗರಿಕ ಸಂಹಿತೆ (ಯುಸಿಸಿ), ಪ್ರತಿ ಮಹಿಳೆಗೆ ತಿಂಗಳಿಗೆ ₹ 2,100 ಮತ್ತು ಯುವಕರಿಗೆ 5 ಲಕ್ಷ ಉದ್ಯೋಗಾವಕಾಶ ನೀಡುವುದಾಗಿ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ತಿಳಿಸಿದೆ. ಈಗಾಗಲೇ ಜಾರ್ಖಂಡ್‌ನಲ್ಲಿ ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. ನವೆಂಬರ್ 13 ರಂದು ಮೊದಲ ಹಂತದ ಚುನಾವಣೆ ಮುಕ್ತಾಯವಾಗಿದ್ದು ಇನ್ನೂ 38 ಕ್ಷೇತ್ರಗಳಲ್ಲಿ ನವೆಂಬರ್ 20ರಂದು ಮತದಾನ ನಡೆಯಲಿದೆ. ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.

ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳ ನಡುವಿನ ಆರೋಪ ಪ್ರತ್ಯಾರೋಪಗಳು ಹೆಚ್ಚಾಗಿದ್ದು, ನವೆಂಬರ್ 23ರಂದು ಹೊರಬರುವ ಫಲಿತಾಂಶದಲ್ಲಿ ಯಾವ ಪಕ್ಷ ಗೆಲ್ಲುತ್ತದೆ ಎನ್ನುವ ಕುತೂಹಲ ಹೆಚ್ಚಾಗಿದೆ. 20ರಂದು ಮತದಾನ ನಡೆಯಲಿದ್ದು ಪೊಲೀಸ್ ಇಲಾಖೆ ಸಿಬ್ಬಂದಿ ಬಿಗಿ ಭದ್ರತೆಗಾಗಿ ಕ್ರಮ ತೆಗೆದುಕೊಳ್ಳುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+