ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾವೈರಸ್ ಕಾಲದಲ್ಲಿ ಕೈ ಚೆಲ್ಲಿದರಾ ಪ್ರಧಾನಮಂತ್ರಿ ಮೋದಿ!?

|
Google Oneindia Kannada News

ನವದೆಹಲಿ, ಮೇ 24: ಊರಿಗೆ ಊರೇ ಕೊಚ್ಚಿಕೊಂಡು ಹೋಗುತ್ತಿದ್ದರೆ ಅಲ್ಲೊಬ್ಬ ಕುಳಿತು ಪಿಟೀಲು ಬಾರಿಸುತ್ತಿದ್ದನಂತೆ. ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ನಡುವೆ ಕೇಂದ್ರ ಸರ್ಕಾರವೂ ಇದೇ ರೀತಿ ವರ್ತಿಸುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯು ಮರಣಮೃದಂಗ ಬಾರಿಸುತ್ತಿದೆ. ಮೊದಲಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿನಿತ್ಯ ಕೊವಿಡ್-19 ಸೋಂಕಿತರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಈ ದುಸ್ಥಿತಿ ನಿರ್ವಹಿಸಬೇಕಿರುವ ಕೇಂದ್ರ ಸರ್ಕಾರವು ಎಲ್ಲದಕ್ಕೂ ರಾಜ್ಯ ಸರ್ಕಾರಗಳತ್ತ ಬೊಟ್ಟು ತೋರಿಸುತ್ತಿದೆ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ದೂಷಿಸಿದ್ದಾರೆ.

ಸಖತ್ ಸುದ್ದಿ: ಭಾರತದಲ್ಲಿ ಕೊರೊನಾವೈರಸ್ ನಿವಾರಣೆಗೆ UV-C ಬೆಳಕಿನ ಕಿರಣ!ಸಖತ್ ಸುದ್ದಿ: ಭಾರತದಲ್ಲಿ ಕೊರೊನಾವೈರಸ್ ನಿವಾರಣೆಗೆ UV-C ಬೆಳಕಿನ ಕಿರಣ!

ದೇಶದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಿರ್ವಹಣೆಯ ಜವಾಬ್ದಾರಿಯನ್ನು ಕೇಂದ್ರ ಸರ್ಕಾರವೇ ವಹಿಸಿಕೊಳ್ಳಬೇಕು. ಕೊವಿಡ್-19 ಸೋಂಕಿತರ ಚಿಕಿತ್ಸೆ, ಆಮ್ಲಜನಕ ಪೂರೈಕೆ, ಲಸಿಕೆ ವಿತರಣೆ ಹಾಗೂ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸುವ ಹೊಣೆಯನ್ನು ಆಯಾ ರಾಜ್ಯಗಳಿಗೆ ವಹಿಸಿರುವುದು ಸೂಕ್ತವಲ್ಲ. ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಕೊವಿಡ್-19 ನಿರ್ವಹಣೆ ಮತ್ತು ಚಿಕಿತ್ಸೆಗೆ ಅಗತ್ಯ ಸಹಕಾರ ದೊರೆಯುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ. ಈ ಕುರಿತು ಒಂದು ವಿಶೇಷ ವರದಿ ಇಲ್ಲಿದೆ.

ಕೇಂದ್ರದ ವಿರುದ್ಧ ಜಾರ್ಖಂಡ್ ಮುಖ್ಯಮಂತ್ರಿ ಆರೋಪ

ಕೇಂದ್ರದ ವಿರುದ್ಧ ಜಾರ್ಖಂಡ್ ಮುಖ್ಯಮಂತ್ರಿ ಆರೋಪ

ರಾಂಚಿಯಲ್ಲಿ ಸಂಡೇ ಎಕ್ಸ್ ಪ್ರೆಸ್ ಪತ್ರಿಕೆಗೆ ಸಂದರ್ಶನ ನೀಡಿರುವ ಜಾರ್ಖಂಡ್ ಮುಖ್ಯಮಂತ್ರಿ ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಕೊವಿಡ್-19 ಸಾಂಕ್ರಾಮಿಕ ಪಿಡುಗು ನಿರ್ವಹಿಸುವ ಜವಾಬ್ದಾರಿಯನ್ನು ರಾಜ್ಯಗಳ ಹೆಗಲಿಗೆ ವಹಿಸಲಾಗಿದೆ. ಕೇಂದ್ರ ಸರ್ಕಾರ ಜವಾಬ್ದಾರಿಯನ್ನು ನಿರ್ವಹಿಸದೇ ರಾಜ್ಯಗಳಿಗೆ ಹಸ್ತಾಂತರಿಸಿ ಮರೆಗೆ ಸರಿಯುತ್ತಿದೆ. ಕೇಂದ್ರ ಸರ್ಕಾರ ವಿಧಿಸಿರುವ ನಿರ್ಬಂಧಗಳಿಂದ ನಾವು ಔಷಧಿಗಳನ್ನು ಆಮದು ಮಾಡಿಕೊಳ್ಳುವುದಕ್ಕೂ ಆಗುತ್ತಿಲ್ಲ, ಕೇಂದ್ರ ಸರ್ಕಾರದಿಂದಲೂ ಸೂಕ್ತ ಸಮಯದಲ್ಲಿ ಅಗತ್ಯ ನೆರವು ಸಿಗುತ್ತಿಲ್ಲ ಎಂದು ಸಿಎಂ ಹೇಮಂತ್ ಸೊರೆನ್ ಆರೋಪಿಸಿದ್ದಾರೆ.

ಕೇಂದ್ರ ಸರ್ಕಾರ ಸೂಕ್ತ ವೇಳೆಯಲ್ಲಿ ಔಷಧಿ, ಲಸಿಕೆ ಪೂರೈಸುತ್ತಿಲ್ಲ

ಕೇಂದ್ರ ಸರ್ಕಾರ ಸೂಕ್ತ ವೇಳೆಯಲ್ಲಿ ಔಷಧಿ, ಲಸಿಕೆ ಪೂರೈಸುತ್ತಿಲ್ಲ

ಕೊರೊನಾವೈರಸ್ ತುರ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲ ವ್ಯವಸ್ಥೆಗಳ ಮೇಲೆ ಕೇಂದ್ರ ಸರ್ಕಾರವೇ ನಿಯಂತ್ರಣವನ್ನು ಸಾಧಿಸಿದೆ. ಕೊವಿಡ್-19 ಸೋಂಕಿನ ನಿರ್ವಹಣೆಗೆ ಅಗತ್ಯವಾಗಿರುವ ಆಮ್ಲಜನಕ ಹಂಚಿಕೆ, ವೈದ್ಯಕೀಯ ಸೌಲಭ್ಯ ಮತ್ತು ಲಸಿಕೆ ವಿತರಣೆಯು ಕೇಂದ್ರದ ವ್ಯಾಪ್ತಿಯಲ್ಲಿದೆ. ಅದಾಗ್ಯೂ, ರಾಜ್ಯಗಳಿಗೆ ಸೂಕ್ತ ಸಮಯದಲ್ಲಿ ಅಗತ್ಯವಿರುವ ಕೊರೊನಾವೈರಸ್ ಲಸಿಕೆಯಾಗಲಿ, ಔಷಧಿಗಳಾಗಲಿ ಸಿಗುತ್ತಿಲ್ಲ ಎಂದು ಸೂರೆನ್ ಹೇಳಿದ್ದಾರೆ.

ಕೊರೊನಾಗೆ 'ಸ್ಟೀಮ್' ರಾಮಬಾಣ: ವೈರಲ್ ಆದ ವೈದ್ಯರ ಹೇಳಿಕೆಯ ಸತ್ಯಾಸತ್ಯತೆಕೊರೊನಾಗೆ 'ಸ್ಟೀಮ್' ರಾಮಬಾಣ: ವೈರಲ್ ಆದ ವೈದ್ಯರ ಹೇಳಿಕೆಯ ಸತ್ಯಾಸತ್ಯತೆ

ಕೇಂದ್ರದಿಂದ ಜಾರ್ಖಂಡ್ ರಾಜ್ಯಕ್ಕೆ 40 ಲಕ್ಷ ಡೋಸ್ ಲಸಿಕೆ

ಕೇಂದ್ರದಿಂದ ಜಾರ್ಖಂಡ್ ರಾಜ್ಯಕ್ಕೆ 40 ಲಕ್ಷ ಡೋಸ್ ಲಸಿಕೆ

ಜಾರ್ಖಂಡ್ ಪ್ರಜೆಗಳಿಗೆ ಮೂರೂವರೆ ಕೋಟಿಯಿಂದ ನಾಲ್ಕು ಕೋಟಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯ ಅಗತ್ಯವಿದೆ. ಆದರೆ ಕೇಂದ್ರ ಸರ್ಕಾರ ಈವರೆಗೂ ಕೇವಲ 40 ಲಕ್ಷ ಡೋಸ್ ಕೊವಿಡ್-19 ಲಸಿಕೆಯನ್ನು ಮಾತ್ರ ನೀಡಲಾಗಿದೆ. ಬೃಹನ್ ಮುಂಬೈ ಮಹಾನಗರ ಪಾಲಿಕೆಯು ತನ್ನ ಪ್ರಜೆಗಳಿಗಾಗಿ ಜಾಗತಿಕ ಮಟ್ಟದಿಂದ ಟೆಂಡರ್ ಕರೆದು ಲಸಿಕೆ ನೀಡಲು ಪ್ರಯತ್ನಿಸುತ್ತಿದೆ. ಆದರೆ ಜಾರ್ಖಂಡ್ ಅಂತಹ ರಾಜ್ಯದಲ್ಲಿ ಅದು ಸಾಧ್ಯವಾಗುವುದಿಲ್ಲ ಎಂದು ಸಿಎಂ ಹೇಮಂತ್ ಸೊರೆನ್ ತಿಳಿಸಿದ್ದಾರೆ.

ಮಹಾರಾಷ್ಟ್ರ ಮತ್ತು ಜಾರ್ಖಂಡ್ ನಡುವೆ ಎಂಥಾ ಹೋಲಿಕೆ?

ಮಹಾರಾಷ್ಟ್ರ ಮತ್ತು ಜಾರ್ಖಂಡ್ ನಡುವೆ ಎಂಥಾ ಹೋಲಿಕೆ?

ಕೇಂದ್ರ ಸರ್ಕಾರವು ಕೊರೊನಾವೈರಸ್ ಮತ್ತು ವೈದ್ಯಕೀಯ ಸೌಲಭ್ಯಗಳ ಹಂಚಿಕೆ ವೇಳೆಯಲ್ಲಿ ರಾಜ್ಯಗಳ ನಡುವಿನ ಹೋಲಿಕೆಯ ನೀತಿಯೇ ಸರಿಯಾಗಿಲ್ಲ. ಆರ್ಥಿಕವಾಗಿ ಸದೃಢವಾಗಿರುವ ಮುಂಬೈ ಮಹಾನಗರ ಪಾಲಿಕೆಯ ತನ್ನ ಪ್ರಜೆಗಳಿಗಾಗಿ ಖಾಸಗಿಯಾಗಿ ಲಸಿಕೆ ಖರೀದಿಗೆ ಮುಂದಾಗಿದೆ. ಒಂದು ವೇಳೆ ಅದೇ ರೀತಿಯಾಗಿ ನಮಗೆ ಬೇಕಾದಷ್ಟು ಕೊವಿಡ್-19 ಲಸಿಕೆಯನ್ನು ನಾವೇ ಖರೀದಿಸಲು ಮುಂದಾದರೆ ಆರ್ಥಿಕವಾಗಿ ದಿವಾಳಿಯಾಗುತ್ತೇವೆ. ಆಯಾ ರಾಜ್ಯಗಳೇ ಲಸಿಕೆ ಖರೀದಿಸುವುದಾದರೆ ನಾವು ಪರಿಸ್ಥಿತಿಯನ್ನು ಹೇಗೆ ತಾನೇ ನಿರ್ವಹಿಸಲು ಸಾಧ್ಯವಾಗುತ್ತದೆ. ಕೇಂದ್ರ ಸರ್ಕಾರವು ಜಾರ್ಖಂಡ್ ಅನ್ನು ಮಹಾರಾಷ್ಟ್ರ ಮತ್ತು ತಮಿಳುನಾಡಿನ ಜೊತೆಗೆ ಹೇಗೆ ತಾನೇ ಹೋಲಿಕೆ ಮಾಡುತ್ತಾರೆ. ಆ ರಾಜ್ಯಗಳಿಗೆ ಹೋಲಿಸಿದ್ದಲ್ಲಿ ನಮ್ಮ ಬಜೆಟ್ ತೀರಾ ಕಡಿಮೆಯಾಗಿರುತ್ತದೆ ಎಂದು ಸಿಎಂ ಸೊರೆನ್ ಹೇಳಿದ್ದಾರೆ.

ಕೇಂದ್ರ ಸರ್ಕಾರದಿಂದ ರಾಜ್ಯ/ಕೇಂದ್ರಾಡಳಿತ ಪ್ರದೇಶಕ್ಕೆ ಲಸಿಕೆ

ಕೇಂದ್ರ ಸರ್ಕಾರದಿಂದ ರಾಜ್ಯ/ಕೇಂದ್ರಾಡಳಿತ ಪ್ರದೇಶಕ್ಕೆ ಲಸಿಕೆ

ಕೊವಿಡ್-19 ಲಸಿಕೆಯ ಉದಾರೀಕರಣ ಹಾಗೂ ವೇಗವರ್ಧಿತ 3ನೇ ಹಂತದ ಕಾರ್ಯತಂತ್ರದ ಅನುಷ್ಠಾನವು 2021ರ ಮೇ 1 ರಿಂದ ಪ್ರಾರಂಭವಾಗಿದೆ. ಈ ಕಾರ್ಯತಂತ್ರದ ಅಡಿಯಲ್ಲಿ, ಪ್ರತಿ ತಿಂಗಳಲ್ಲಿ ಯಾವುದೇ ತಯಾರಕರು ಉತ್ಪಾದಿಸುವ ಕೇಂದ್ರ ಔಷಧ ಪ್ರಯೋಗಾಲಯದ (ಸಿಡಿಎಲ್) ಅನುಮೋದನೆ ಪಡೆದ ಲಸಿಕೆಯಲ್ಲಿ ಶೇ. 50ರಷ್ಟು ಡೋಸ್‌ಗಳನ್ನು ಭಾರತ ಸರಕಾರವು ಖರೀದಿಸುತ್ತದೆ. ರಾಜ್ಯ ಸರಕಾರಗಳಿಗೆ ಈ ಹಿಂದಿನಂತೆಯೇ ಈ ಡೋಸ್‌ಗಳು ಸಂಪೂರ್ಣ ಉಚಿತವಾಗಿ ಲಭ್ಯವಾಗುವಂತೆ ನೋಡಿಕೊಳ್ಳಲಾಗುತ್ತದೆ. ಸರಕಾರವು ಇಲ್ಲಿಯವರೆಗೆ ಉಚಿತವಾಗಿ ಮತ್ತು ರಾಜ್ಯ ಸರ್ಕಾರಗಳಿಂದ ನೇರ ಖರೀದಿ ಮಾರ್ಗದ ಮೂಲಕ, ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ 21,80,51,890 ಕೋಟಿ ಡೋಸ್ ಲಸಿಕೆಯನ್ನು ಒದಗಿಸಿದೆ.

"ಪ್ರಧಾನಮಂತ್ರಿ ನಡೆಸುವ ವಿಡಿಯೋ ಕಾನ್ಫರೆನ್ಸ್ ನಾಮಕಾವಸ್ಥೆ"

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಿರ್ವಹಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ನಡೆಸುವ ವಿಡಿಯೋ ಕಾನ್ಫರೆನ್ಸ್ ಎಲ್ಲವೂ ನಾಮಕಾವಸ್ಥೆ ಆಗಿರುತ್ತದೆ. ಪ್ರಧಾನಿ ಮೋದಿ ಕೇವಲ ಮಾತನಾಡುತ್ತಾರೆಯೇ ವಿನಃ ಕೇಳಿಸಿಕೊಳ್ಳುವುದಿಲ್ಲ. ಸಂಜೆವರೆಗೂ ಪ್ರಧಾನಿ ಚರ್ಚೆ ನಡೆಸಿದರು ಎಂಬ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗುತ್ತದೆ. ಇದೆಲ್ಲ ಕೇವಲ ರಾಜಕೀಯ ಉದ್ದೇಶ ಮತ್ತು ಮುಖ್ಯಮಂತ್ರಿಗಳ ಜೊತೆಗಿನ ಸಭೆ ಕೇವಲ ಔಪಚಾರಿಕ ಉದ್ದೇಶವನ್ನು ಹೊಂದಿರುತ್ತದೆ ಎಂದು ಮುಖ್ಯಮಂತ್ರಿ ಹೇಮಂತ್ ಸೊರೆನ್ ಆರೋಪಿಸಿದ್ದಾರೆ.

"ಇದು ಕೇವಲ ರಾಜಕಾರಣ ಮಾಡುವ ಸಮಯವಲ್ಲ"

"ನಾವು ಬೇರೆ ಬೇರೆ ಪಕ್ಷಕ್ಕೆ ಸೇರಿದ ನಾಯಕರೇ ಆಗಿರಬಹುದು. ವಿಭಿನ್ನ ಆಲೋಚನೆ ಮತ್ತು ಸಿದ್ದಾಂತಗಳನ್ನೇ ಹೊಂದಿರಬಹುದು. ಆದರೆ ಇದು ನಾವು ನಾವೇ ಹೋರಾಡುವ ಸಮಯವಲ್ಲ. ಪ್ರಸ್ತುತ ಸನ್ನಿವೇಶದಲ್ಲಿ ದೇಶ ಎಂಬ ದೋಣಿಯು ಸಮುದ್ರದ ಮಧ್ಯೆದಲ್ಲಿ ಸಿಲುಕಿದೆ. ಈ ದೋಣಿಯನ್ನು ದಡ ಸೇರಿಸುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕಿದೆ. ದೋಣಿಯನ್ನು ಒಮ್ಮೆ ದಡ ಮುಟ್ಟಿಸಿದ ಬಳಿಕ ಮತ್ತೆ ನಮ್ಮ ಹೋರಾಟವನ್ನು ಬೇಕಿದ್ದರೆ ಮುಂದುವರಿಸೋಣ" ಎಂದು ಸೊರೆನ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡುವುದನ್ನೂ ಕಲಿಯಬೇಕು

ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡುವುದನ್ನೂ ಕಲಿಯಬೇಕು

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ನಿರ್ವಹಣೆಯಲ್ಲಿ ವೈಫಲ್ಯ ಅನುಭವಿಸುತ್ತಿರುವ ಕೇಂದ್ರ ಸರ್ಕಾರವನ್ನು ಪ್ರತಿಪಕ್ಷಗಳು ಪ್ರಶ್ನೆ ಮಾಡಬೇಕಿದೆ. ಪರಿಸ್ಥಿತಿಯನ್ನು ನಿರ್ವಹಿಸಲು ಸೋತ ಸರ್ಕಾರವನ್ನು ಪ್ರಶ್ನೆ ಮಾಡುವ ಸ್ಥಾನದಲ್ಲಿ ಪ್ರತಿಪಕ್ಷಗಳಿವೆ. ಹಾಗೆಂದ ಮಾತ್ರಕ್ಕೆ ಪ್ರಶ್ನೆ ಮಾಡುವುದೊಂದೇ ವಿರೋಧ ಪಕ್ಷಗಳ ಕೆಲಸವಲ್ಲ. ಆಡಳಿತ ಪಕ್ಷಕ್ಕೆ ವಿರೋಧ ಪಕ್ಷ ಕೂಡ ಬೆಂಬಲವಾಗಿ ನಿಲ್ಲಬೇಕಿದೆ. ಪ್ರಧಾನಮಂತ್ರಿ ಪರಿಹಾರ ನಿಧಿಯಲ್ಲಿ ಸಂಗ್ರಹವಾಗಿರುವ ಸಾವಿರಾರು ಕೋಟಿ ರೂಪಾಯಿ ಹಣವನ್ನು ಪಾರದರ್ಶಕವಾಗಿ ಬಳಸಿಕೊಳ್ಳಬೇಕಿದೆ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಆಗ್ರಹಿಸಿದ್ದಾರೆ.

ದೇಶದಲ್ಲಿ ಕೊವಿಡ್-19 ಸೋಂಕಿತರ ಅಂಕಿ-ಸಂಖ್ಯೆ

ದೇಶದಲ್ಲಿ ಕೊವಿಡ್-19 ಸೋಂಕಿತರ ಅಂಕಿ-ಸಂಖ್ಯೆ

ಕಳೆದ 24 ಗಂಟೆಗಳಲ್ಲಿ2,22,315 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 3,02,544 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದೇ ದಿನ ಕೊರೊನಾವೈರಸ್ ಮಹಾಮಾರಿಗೆ 4,454 ಮಂದಿ ಪ್ರಾಣ ಬಿಟ್ಟಿದ್ದಾರೆ. ಭಾರತದಲ್ಲಿ ಒಟ್ಟು 2,67,52,447 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,37,28,011 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 3,03,720 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 27,20,716 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ 19.49 ಕೋಟಿ ಜನರಿಗೆ ಕೊರೊನಾವೈರಸ್ ಲಸಿಕೆ

ಭಾರತದಲ್ಲಿ 19.49 ಕೋಟಿ ಜನರಿಗೆ ಕೊರೊನಾವೈರಸ್ ಲಸಿಕೆ

ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 125 ದಿನಗಳಲ್ಲಿ 19,49,51,603 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಣೆ ಮಾಡಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಶನಿವಾರ ರಾತ್ರಿ 8 ಗಂಟೆ ವೇಳೆಗೆ 15,52,126 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 13,80,232 ಜನರಿಗೆ ಮೊದಲ ಡೋಸ್ ಹಾಗೂ 1,71,894 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ನೀತಿ?

ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ನೀತಿ?

ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕಲು ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರು, ಎರಡನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟವರಿಗೆ ಹಾಗೂ ಮೂರನೇ ಹಂತದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ.

ಕಳೆದ ಮೇ 1ರಿಂದ ಈವರೆಗೂ 18 ವರ್ಷ ಮೇಲ್ಪಟ್ಟ 44 ವರ್ಷದೊಳಗಿನ 99,79,676 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ಭಾರತದಲ್ಲಿ ಈವರೆಗೂ 97,52,422 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 67,00,147 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,49,47,941 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 83,22,058 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ. ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 6,06,73,244 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 97,84,465 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 5,65,49,096 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 1,82,42,554 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

English summary
The Central government has taken control of almost all critical issues related to management of the Covid-19 pandemic: allocation of oxygen, medical equipment, and vaccines, Soren claimed. “But we are not getting what is needed, be it vaccines, or medicines,” he said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X