Jharkhand Election 2024: ಚುನಾವಣೆ ಸಂಸ್ಥೆಗಳ ಮೇಲೆ ಬಿಜೆಪಿ ಪ್ರಭಾವ: ಬಿಜೆಪಿ ವಿರುದ್ಧ ಗುಡುಗಿದ ಕಲ್ಪನಾ ಸೊರೆನ್
Jharkhand Assembly Election 2024: ಈಗಾಗಲೇ ಜಮ್ಮು-ಕಾಶ್ಮೀರ ಮತ್ತು ಹರಿಯಾಣ ವಿಧಾನಸಭೆ ಚುನಾವಣೆ ನಡೆದಿದ್ದು, ಫಲಿತಾಂಶ ಕೂಡ ಹೊರಬಿದ್ದಿದೆ. ಇನ್ನು ಇದೀಗ ಜಾರ್ಖಂಡ್ ವಿಧಾನಸಭೆ ಚುನಾವಣೆಗೂ ದಿನಾಂಕ ಘೋಷಣೆಯಾಗಿದ್ದು, ಚುನಾವಣೆ ಆಯೋಗದ ನಿರ್ಧಾರಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ. ಹಾಗೆಯೇ ಇದೀಗ ಜಾರ್ಖಂಡ್ ಮುಕ್ತಿ ಮೋರ್ಚಾ ಪಕ್ಷದ ನಾಯಕಿಯೊಬ್ಬರು ಆಕ್ರೊಶ ಹೊರಹಾಕಿದ್ದಾರೆ.
ಬಿಜೆಪಿಯ ಪಿತೂರಿ ಭಾಗವಾದ ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆಯನ್ನು ನಿಗದಿತ ಸಮಯಯಕ್ಕಿಂತ ಮುಂಚಿತವಾಗಿ ನಡೆಸಲಾಗುತ್ತಿದೆ ಎಂದು ಶಾಸಕಿ, ಮುಖ್ಯಮಂತ್ರಿ ಹೇಮಂತ್ ಸೋರೇನ್ ಪತ್ನಿ ಕಲ್ಪನಾ ಸೊರೆನ್ ಆರೋಪ ಮಾಡಿದರು. ಗಿರಿಧಿಹದಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, ಚುನಾವಣೆ ಸಂಸ್ಥೆಗಳ ಮೇಲೆ ಬಿಜೆಪಿಯು ತನ್ನ ಪ್ರಭಾವವನ್ನು ಬಲಪಡಿಸುತ್ತಿದೆ ಎಂದು ಆರೋಪ ಮಾಡುವ ಮೂಲಕ ಆಕ್ರೊಶ ಹೊರಹಾಕಿದ್ದಾರೆ.

ಮಹಾರಾಷ್ಟ್ರದಲ್ಲಿ ನಿಗದಿತ ಸಮಯಕ್ಕೆ ಚುನಾವಣೆ ಘೋಷಣೆಯಾಗಿದೆ. ಆದರೆ, ಜಾರ್ಖಂಡ್‌ನಲ್ಲಿಅವಧಿಗೂ ಮುನ್ನ ಘೋಷಣೆ ಆಗಿದೆ. ಸಾಮಾನ್ಯವಾಗಿ 5 ಹಂತಗಳಲ್ಲಿ ನಡೆಯುತ್ತಿದ್ದ ಚುನಾವಣೆಯನ್ನು ಈ ಬಾರಿ ಬರೀ 2 ಹಂತಗಳಲ್ಲಿ ನಡೆಸಲಾಗುತ್ತಿದೆ ಎಂದು ಹೇಳಿದರು. ಇನ್ನು ಗ್ರಾಮೀಣ ಪ್ರದೇಶದಲ್ಲಿ ಮತದಾನದ ವೇಳೆಯನ್ನು ಒಂದು ಗಂಟೆ ಕಡಿತಗೊಳಿಸಲಾಗಿದೆ ಎಂದರು.
ಗ್ರಾಮೀಣ ಭಾಗದ ಅನೇಕ ಮತದಾರರು ಮತಗಟ್ಟೆಗಳನ್ನು ತಲುಪಲು ತುಂಬಾ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಇದು ಹೇಮಂತ್ ಸೋರೇನ್ ಪರ ಗಟ್ಟಿಯಾಗಿ ನಿಂತಿರುವ ಬಡವರು, ರೈತರು, ಕಾರ್ಮಿಕರು ಮತ್ತು ಮಹಿಳೆಯರ ಹಕ್ಕುಗಳನ್ನು ಕಸಿದುಕೊಳ್ಳುವ ಪ್ರಯತ್ನವಾಗಿದೆ ಎಂದರು. ಇನ್ನು ಜಾರ್ಖಂಡ್ ವಿಧಾನಸಭೆಗೆ ನವೆಂಬರ್ 13 ಮತ್ತು 20ರಂದು ಎರಡು ಹಂತದಲ್ಲಿ ಮತದಾನ ನಡೆಯಲಿದ್ದು, ನವೆಂಬರ್ 23ಕ್ಕೆ ಮತ ಎಣಿಕೆ ನಡೆಯಲಿದೆ.
ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ: ಶನಿವಾರ (ಅಕ್ಟೋಬರ್ 19) ಬಿಜೆಪಿಯು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಚಂಪೈ ಸೊರೇನ್, ಸೀತಾ ಸೊರೆನ್ ಅವರು ಸ್ಥಾನವನ್ನು ಪಡೆದಿದ್ದಾರೆ.
ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ ಸ್ಥಾನ ಹೊಂದಾಣಿಕೆ ಒಪ್ಪಂದವನ್ನು ಎಸ್‌ಜೆಯು-ಪಿ, ಜೆಡಿಯು ಮತ್ತು ಎಲ್‌ಜೆಪಿ (ರಾಮ್ ವಿಲಾಸ್) ಜೊತೆ ಒಪ್ಪಂದ ಅಂತಿಮಗೊಂಡ ಬೆನ್ನಲ್ಲೇ ಬಿಜೆಪಿ ಶನಿವಾರ 68 ವಿಧಾನಸಭಾ ಕ್ಷೇತ್ರಗಳ ಪೈಕಿ 66 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ.
ಸಿಎಂ ಹೇಮಂತ್ ಸೊರೇನ್ ಸ್ಪರ್ಧಿಸಲಿರುವ ಬರ್ಹೈತ್ (ಎಸ್ಟಿ) ಕ್ಷೇತ್ರಕ್ಕೆ ಅಭ್ಯರ್ಥಿಯನ್ನು ಇದುವರೆಗೆ ಘೋಷಣೆ ಮಾಡಿಲ್ಲ. ಹಾಗೆಯೇ ತುಂಡಿ ಕ್ಷೇತ್ರವನ್ನು ಸಗ ಖಾಲಿ ಉಳಿಸಿಕೊಂಡಿದೆ. ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ನೇತೃತ್ವದ ಬಿಜೆಪಿಯ ಕೇಂದ್ರೀಯ ಚುನಾವಣಾ ಸಮಿತಿಯಲ್ಲಿ ಈ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಸಹ ಈ ಸಭೆಯಲ್ಲಿ ಭಾಗವಹಿಸಿದ್ದರು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೇಳಿದ್ದಾರೆ.
ರಾಂಚಿ ಕ್ಷೇತ್ರದಿಂದ ಹಿರಿಯ ಮುತ್ಸದ್ಧಿ ಸಿ.ಪಿ.ಸಿಂಗ್ ಅವರನ್ನು 7ನೇ ಬಾರಿಗೆ ಕಣಕ್ಕಿಳಿಸಲಾಗಿದೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಅಮರ್ ಕುಮಾರ್ ಬೌರಿ ಬೊಕಾರೊ ಜಿಲ್ಲೆಯ ಸ್ವಕ್ಷೇತ್ರ ಚಂದನಕ್ಯಾರಿ (ಎಸ್ಸಿ)ಯಿಂದ ಕಣಕ್ಕಿಳಿಯಲಿದ್ದಾರೆ.
ರಾಜ್ಯ ಘಟಕದ ಅಧ್ಯಕ್ಷ ಬಾಬುಲಾಲ್ ಮುರಂಡಿ ಅವರು ಗಿರಧ್ ಜಿಲ್ಲೆಯ ಸ್ವಕ್ಷೇತ್ರ ಧನ್ವರ್‌ನಿಂದ ಸ್ಪರ್ಧೆಗಿಳಿಯಲಿದ್ದಾರೆ. ಮಾಜಿ ಆರೋಗ್ಯ ಸಚಿವ ರಾಮಚಂದ್ರ ಚಂದ್ರವಂಶಿ ಬಿಶ್ರಾಮಪುರದಿಂದ, ಮಾಜಿ ಸಿಎಂ ಹಾಗೂ ಜೆಎಂಎಂ ಮಾಜಿ ಮುಖಂಡ ಚಂಪೈ ಸೊರೇನ್ ಅವರನ್ನು ಸೆರಿಯಾಕೇಲಾ (ಎಸ್ಸಿ) ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಚಂಪೈ ಸೊರೇನ್ ಪುತ್ರ ಬಾಬುಲಾಲ್ ಅವರು ಘಟಶಿಲಾ (ಎಸ್ಟಿ) ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಮಾಜಿ ಸಿಎಂ ಮತ್ತು ಒಡಿಶಾ ರಾಜ್ಯಪಾಲ ರಘುಬರ ದಾಸ್ ಅವರ ಸೊಸೆ ಪೂರ್ಣಿಮಾ ದಾಸ್ ಸಾಹು ಅವರನ್ನು ಜೆಮ್ಶೆಡ್ಪುರ (ಪೂರ್ವ) ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಈ ಕ್ಷೇತ್ರದಿಂದ 5 ಬಾರಿ ಆಯ್ಕೆಯಾಗಿದ್ದ ರಘುಬರ ದಾಸ್ 2019ರಲ್ಲಿ ಸೋಲನುಭವಿಸಿದ್ದರು. ಮಾಜಿ ಸಿಎಂ ಅರ್ಜುನ್ ಮುಂಡಾ ಅವರ ಪತ್ನಿ ಮೀರಾ ಮುಂಡಾ ಅವರು ಪೋಕ್ಟಾ (ಎಸ್ಟಿ) ಮತ್ತು ಮಾಜಿ ಸಿಎಂ ಮಧು ಕೋಡಾ ಅವರ ಪತ್ನಿ ಗೀತಾ ಕೋಡಾ ಅವರನ್ನು ಜಗನ್ನಾಥಪುರ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ.












Click it and Unblock the Notifications