Jharkhand Election 2024: ಈ ಬಾರಿ 33 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧೆ- ಹೈಕಮಾಂಡ್‌ ಜೊತೆ ಸೊರೆನ್ ಮಹತ್ವದ ಸಭೆ

ಹರಿಯಾಣ ಅಸೆಂಬ್ಲಿ ಚುನಾವಣೆ 2024ರಲ್ಲಿ ಕಾಂಗ್ರೆಸ್ ಬಿಜೆಪಿಯೊಂದಿಗೆ ತೀವ್ರ ಪೈಪೋಟಿ ನೀಡಿ ಸೋಲನ್ನು ಅನುಭವಿಸಿದೆ. ಆದರೀಗ ಕಾಂಗ್ರೆಸ್‌ನ ಸಂಪೂರ್ಣ ಗಮನ ಜಾರ್ಖಂಡ್ ವಿಧಾನಸಭಾ ಚುನಾವಣೆಯ ಮೇಲೆ ಕೇಂದ್ರೀಕೃತವಾಗಿದೆ. ವರ್ಷಾಂತ್ಯದಲ್ಲಿ ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು ಶತಾಯಗತಾಯ ಜಾರ್ಖಂಡ್‌ನಲ್ಲಿ ಗೆಲುವು ಸಾಧಿಸಲು ಕಾಂಗ್ರೆಸ್ ಯೋಜಿಸಿದೆ.

ಕಳೆದ ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ 31 ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್ ಈಗ ಮುಂಬರುವ ಚುನಾವಣೆಯಲ್ಲಿ 33 ಸ್ಥಾನಗಳಲ್ಲಿ ಸ್ಪರ್ಧಿಸಲು ಪ್ರಯತ್ನಿಸುತ್ತಿದೆ. ಹೀಗಾಗಿ ಜಾರ್ಖಂಡ್‌ನಲ್ಲಿ ಸೀಟು ಹಂಚಿಕೆಗೆ ಸಂಬಂಧಿಸಿದ ಚರ್ಚೆಗಳು ಕಾಂಗ್ರೆಸ್‌ನಲ್ಲಿ ತೀವ್ರಗೊಂಡಿವೆ. ಸೀಟು ಹಂಚಿಕೆಯ ಕುರಿತು ಚರ್ಚೆಗಳು ವೇಗ ಪಡೆದುಕೊಂಡಿದ್ದು ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಲು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ದೆಹಲಿಗೆ ತೆರಳಿದ್ದಾರೆ.

Jharkhand Election 2024 Congress contest in 33 seats- Soren meeting with High Command

ಹೇಮಂತ್ ಸೊರೆನ್ ಇತ್ತೀಚೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಮಾಜಿ ಮುಖ್ಯಸ್ಥ ರಾಹುಲ್ ಗಾಂಧಿ ಅವರೊಂದಿಗೆ ಚುನಾವಣಾ ಕಾರ್ಯತಂತ್ರಗಳನ್ನು ಬಲಪಡಿಸಲು ಮತ್ತು ಕಾಂಗ್ರೆಸ್ ಹಾಗೂ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಡುವಿನ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಲು ಮಹತ್ವದ ಸಭೆ ನಡೆಸಿದರು. ಈ ಸಭೆಯಲ್ಲಿ ಚುನಾವಣೆಗೆ ಸಂಬಂಧಿಸಿದಂತೆ ಮಹತ್ವದ ಚರ್ಚೆಗಳು ನಡೆದಿವೆ.

ಜಾರ್ಖಂಡ್‌ನಲ್ಲಿ ಅಧಿಕಾರ ಉಳಿಸಿಕೊಳ್ಳಲು ಇಂಡಿಯಾ ಮೈತ್ರಿಕೂಟ ಯತ್ನ

ಕಾಂಗ್ರೆಸ್, ಜೆಎಂಎಂ, ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮತ್ತು ಎಡಪಕ್ಷಗಳನ್ನು ಒಳಗೊಂಡಿರುವ ಇಂಡಿಯಾ ಮೈತ್ರಿಕೂಟವು ಹರಿಯಾಣದಲ್ಲಿನ ಸೋಲಿನ ನಂತರ ಜಾರ್ಖಂಡ್‌ನಲ್ಲಿ ಅಧಿಕಾರವನ್ನು ಉಳಿಸಿಕೊಳ್ಳುವತ್ತ ಗಮನಹರಿಸಿದೆ. ಇದರಿಂದಾಗಿ ದೆಹಲಿಯಲ್ಲಿ ಮಹತ್ವದ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಹೇಮಂತ್ ಸೋರೆನ್ ಅವರ ಪತ್ನಿ ಕಲ್ಪನಾ ಸೊರೆನ್ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಭಾಗವಹಿಸಿದ್ದರು. ಹರಿಯಾಣದಂತಹ ಸಂಭವನೀಯ ಆಘಾತಗಳನ್ನು ತಪ್ಪಿಸಲು ಮೈತ್ರಿಕೂಟದೊಳಗೆ ಏಕತೆಯನ್ನು ಬಲಪಡಿಸುವ ಬಗ್ಗೆ ಸಭೆ ನಡೆಸಲಾಯಿತು.

ಜಾರ್ಖಂಡ್‌ನಲ್ಲಿ ಭಾರತ ಮೈತ್ರಿಕೂಟ ಪ್ರಬಲ

ಸಭೆಯ ನಂತರ ಹೇಮಂತ್ ಸೋರೆನ್ ಅವರು ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರೊಂದಿಗಿನ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಸಭೆಯಲ್ಲಿ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಹೇಳಿದರು. ಹರಿಯಾಣದಲ್ಲಿನ ಸೋಲಿನ ಹಿನ್ನೆಲೆಯಲ್ಲಿ ಇಂಡಿಯಾ ಮಿತ್ರಪಕ್ಷಗಳು ಕಾಂಗ್ರೆಸ್‌ನ ಹಿಂದಿನ ವಿಧಾನಗಳ ಬಗ್ಗೆ ಕಳವಳ ವ್ಯಕ್ತಪಡಿಸಿವೆ. ಆದರೆ ಸಭೆಯಲ್ಲಿ ಇದೆಲ್ಲದಕ್ಕೂ ರಣತಂತ್ರ ಹೆಣೆಯಲಾಗಿದ್ದು ಒಗ್ಗಟ್ಟಿನ ಬಲ ಪ್ರದರ್ಶಿಸಲು ಸೂಚಿಸಲಾಗಿದೆ. ಹೀಗಾಗಿ ಈ ಬಾರಿ ಜಾರ್ಖಂಡ್‌ನಲ್ಲಿ ಇಂಡಿಯಾ ಮೈತ್ರಿಕೂಟ ಗೆಲುವು ಖಚಿತ ಎನ್ನಲಾಗುತ್ತಿದೆ.

ಕಾಂಗ್ರೆಸ್ 30-40 ಸ್ಥಾನಗಳನ್ನು ಗೆದ್ದರೆ, ಮುಖ್ಯಮಂತ್ರಿ ಸ್ಥಾನ ಗಟ್ಟಿ

ಆರ್‌ಜೆಡಿ ಮತ್ತು ಸಿಪಿಐ-ಎಂಎಲ್ ಸೇರಿದಂತೆ ಇತರ ಮೈತ್ರಿ ಪಾಲುದಾರರು ಹೆಚ್ಚಿನ ಸ್ಥಾನಗಳನ್ನು ಹಂಚಿಕೆ ಮಾಡಲು ಒತ್ತಾಯಿಸುತ್ತಿದ್ದಾರೆ. ನಾಯಕತ್ವದ ಬಗ್ಗೆಯೂ ಉದ್ವಿಗ್ನತೆ ಮುನ್ನೆಲೆಗೆ ಬಂದಿದೆ, ಕಾಂಗ್ರೆಸ್ನ ಜಾರ್ಖಂಡ್ ಉಸ್ತುವಾರಿ ಗುಲಾಮ್ ಅಹ್ಮದ್ ಮಿರ್ ಅವರು ಕಾಂಗ್ರೆಸ್ 30-40 ಸ್ಥಾನಗಳನ್ನು ಗೆದ್ದರೆ ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳುತ್ತೇವೆ ಎಂದು ಸಲಹೆ ನೀಡಿದ್ದಾರೆ. ಹೀಗಾಗಿ ಯಾವ ಪಕ್ಷ ಯಾವ ಪ್ರದೇಶದಲ್ಲಿ ಬಲವಾಗಿದೆ ಎನ್ನುವುದನ್ನು ಹೈಕಮಾಂಡ್ ಅತ್ಯಂತ ಸೂಕ್ಷ್ಮಿವಾಗಿ ಅವಲೋಕಿಸುತ್ತಿದೆ. ಇನ್ನೂ ಜೆಎಂಎಂ ಸೊರೆನ್ ಅವರ ನಾಯಕತ್ವಕ್ಕೆ ತನ್ನ ಬದ್ಧತೆಯನ್ನು ಪುನರುಚ್ಚರಿಸಿದೆ.

ಇಂಡಿಯಾ ಬ್ಲಾಕ್‌ನಲ್ಲಿ ಪ್ರಸ್ತುತ ಸ್ಥಾನ ಹಂಚಿಕೆಗೆ ಸಂಬಂಧಿಸಿದಂತೆ, ಜೆಎಂಎಂ 43ಕ್ಕೂ ಹೆಚ್ಚು ಸ್ಥಾನಗಳನ್ನು ಬಯಸುತ್ತಿದೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ 33 ಮತ್ತು ಆರ್‌ಜೆಡಿ ಕನಿಷ್ಠ 14 ಸ್ಥಾನಗಳನ್ನು ಬಯಸುತ್ತಿದೆ. 2019 ರ ಚುನಾವಣೆಯಲ್ಲಿ ಜೆಎಂಎಂ 43 ಸ್ಥಾನಗಳಲ್ಲಿ ಸ್ಪರ್ಧಿಸಿತು (30 ಗೆಲುವು), ಕಾಂಗ್ರೆಸ್ 31 ಸ್ಥಾನಗಳಲ್ಲಿ ಸ್ಪರ್ಧಿಸಿತು (16 ಗೆದ್ದಿತು), ಆರ್‌ಜೆಡಿ ಏಳು ಸ್ಥಾನಗಳಲ್ಲಿ ಸ್ಪರ್ಧಿಸಿ ಒಂದನ್ನು ಗೆದ್ದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+