Jharkhand Election: ಭರವಸೆ ಕೊಟ್ಟು ರಾಹುಲ್ ಗಾಂಧಿ ವಿದೇಶಕ್ಕೆ ಹೋಗುತ್ತಾರೆ; ಅಮಿತ್ ಶಾ

ಜಾರ್ಖಂಡ್ ವಿಧಾನಸಭಾ ಚುನಾವಣೆ ಎರಡನೇ ಹಂತದ ಮತದಾನಕ್ಕೆ ಇನ್ನೂ 4 ದಿನಗಳ ಸಮಯವಿದ್ದು ಎಲ್ಲಾ ಪಕ್ಷಗಳು ಭರ್ಜರಿ ಪ್ರಚಾರ ಮಾಡುತ್ತಿವೆ. ಈಗಾಗಲೇ ಮೊದಲ ಹಂತದಲ್ಲಿ 43 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆದಿದ್ದು, ಉಳಿದ 38 ಕ್ಷೇತ್ರಗಳಲ್ಲಿ ನವೆಂಬರ್ 20ರಂದು ಮತದಾನ ನಡೆಯಲಿದೆ. ಎನ್‌ಡಿಎ ಮತ್ತು ಇಂಡಿಯಾ ಒಕ್ಕೂಟ ಭರ್ಜರಿ ಪ್ರಚಾರ ನಡೆಸುತ್ತಿದ್ದು ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ದಿಯೋಘರ್ ಜಿಲ್ಲೆಯ ಮಧುಪುರದಲ್ಲಿ ಬೃಹತ್ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚುನಾವಣೆ ಸಂದರ್ಭದಲ್ಲಿ ಭರವಸೆ ನೀಡುತ್ತಾರೆ, ಬಳಿಕ ವಿದೇಶಕ್ಕೆ ಹಾರುತ್ತಾರೆ. ಆದರೆ ಬಿಜೆಪಿ ಮಾತ್ರ ಚುನಾವಣೆಗೆ ಮೊದಲು ಕೊಟ್ಟ ಭರವಸೆಗಳನ್ನು ಈಡೇರಿಸುತ್ತಿದೆ ಎಂದು ಹೇಳಿದ್ದಾರೆ.

Jharkhand election Amit Shah Criticises Rahul Gandhi BJP Fulfils Promises

ಯುಪಿಎ ಆಡಳಿತದಲ್ಲಿ ಭಯೋತ್ಪಾದಕರು ಭಾರತದ ಮೇಲೆ ದಾಳಿ ಮಾಡಿದ್ದು ಅಷ್ಟೇ ಅಲ್ಲದೆ, ಬಿರಿಯಾನಿ ತಿನ್ನುತ್ತಿದ್ದರು. ಆದರೆ ಪ್ರಧಾನಿ ನರೇಂದ್ರ ಮೋದಿ ಸರ್ಜಿಕಲ್ ಸ್ಟ್ರೈಕ್ ಮತ್ತು ವೈಮಾನಿಕ ದಾಳಿ ಮೂಲಕ ಭಯೋತ್ಪಾದಕರನ್ನು ನಾಶ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಬಿಜೆಪಿ ಮಾತ್ರ ಕೊಟ್ಟ ಭರವಸೆ ಪೂರೈಸುತ್ತದೆ

ರಾಹುಲ್ ಗಾಂಧಿ ಹಲವು ಭರವಸೆಗಳನ್ನು ನೀಡುತ್ತಾರೆ, ಆದರೆ ಭರವಸೆ ನೀಡಿದ ಬಳಿಕ ಅವರು ವಿದೇಶಕ್ಕೆ ಹೋಗುತ್ತಾರೆ. ಮತ್ತೊಂದು ಕಡೆ ಪ್ರಧಾನಿ ನರೇಂದ್ರ ಮೋದಿ ನೀಡಿದ ಭರವಸೆಗಳು ಕಲ್ಲಿನ ಮೇಲೆ ಕೆತ್ತಿದಂತಿದೆ. ಅವರು ಕೊಟ್ಟ ಭರವಸೆಗಳನ್ನು ಈಡೇರಿಸುತ್ತಾರೆ. ನಾವು ಮಾತ್ರ ಜಾರ್ಖಂಡ್ ಅನ್ನು ನಿರ್ಮಾಣ ಮಾಡಲು ಸಾಧ್ಯ, ಕಾಂಗ್ರೆಸ್, ಜೆಎಂಎಂ ಮತ್ತು ಆರ್ ಜೆಡಿ ಎಂದಿಗೂ ರಾಜ್ಯದ ಹಿತಾಸಕ್ತಿಗಾಗಿ ಕೆಲಸ ಮಾಡಲ್ಲ ಎಂದು ಟೀಕಿಸಿದರು.

ಜೆಎಂಎಂ ನೇತೃತ್ವದ ರಾಜ್ಯ ಸರ್ಕಾರವು ಬಾಂಗ್ಲಾದೇಶಿ ನುಸುಳುಕೋರರನ್ನು ತನ್ನ ಮತ ಬ್ಯಾಂಕ್ ಆಗಿ ಮಾಡಿಕೊಂಡಿದೆ ಎಂದು ಆರೋಪ ಮಾಡಿರುವ ಅಮಿತ್ ಶಾ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅಕ್ರಮ ವಲಸಿಗರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಅಕ್ರಮ ನುಸುಳುಕೋರರು ಇಲ್ಲಿನ ಜನರ ಉದ್ಯೋಗ ಕಿತ್ತುಕೊಳ್ಳುವುದು ಮಾತ್ರವಲ್ಲದೆ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಬುಡಕಟ್ಟು ಜನಾಂಗದವರಿಗೆ ಮತ್ತು ರಾಜ್ಯದ ಯುವ ಜನತೆಗೆ ಬೆದರಿಕೆ ಹಾಕುತ್ತಿದ್ದಾರೆ. ಅಕ್ರಮ ವಲಸಿಗರನ್ನು ಗುರುತಿಸಿ ಗಡಿಪಾರು ಮಾಡುವಂತೆ ಜಾರ್ಖಂಡ್ ಹೈಕೋರ್ಟ್ ನಿರ್ದೇಶನ ನೀಡಿತ್ತು, ಇದಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ್ದರೂ ಹೇಮಂತ್ ಸೊರೆನ್ ಅವರ ಸರ್ಕಾರ ಅದನ್ನು ಮಾಡುತ್ತಿಲ್ಲ ಎಂದು ಹೇಳಿದರು.

ಈ ಚುನಾವಣೆ ರಾಜ್ಯದಲ್ಲಿ ಬದಲಾವಣೆ ತರಲು ಜನತೆಗೆ ಸಿಕ್ಕಿರುವ ಅವಕಾಶವಾಗಿದೆ. ಯುವಕರು ಮತ್ತು ಬಡವರ ಭವಿಷ್ಯವನ್ನು ರೂಪಿಸಲು ಮತ್ತು ಭ್ರಷ್ಟಾಚಾರವನ್ನು ತಡೆಯಲು ಬಿಜೆಪಿಗೆ ಮತ ಹಾಕಬೇಕು ಎಂದು ಅಮಿತ್ ಶಾ ಮನವಿ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+