Jharkhand Election: ಎರಡನೇ ಹಂತದ ಮತದಾನ ಮುಕ್ತಾಯ; ಫಲಿತಾಂಶದತ್ತ ಎಲ್ಲರ ಚಿತ್ತ!

ಜಾರ್ಖಂಡ್ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನ ಮುಕ್ತಾಯವಾಗಿದೆ. 38 ಕ್ಷೇತ್ರಗಳಲ್ಲಿ ಮತದಾನ ನಡೆದಿದ್ದು ಬಹುತೇಕ ಶಾಂತಿಯುತವಾಗಿ ಮತದಾನ ನಡೆದಿದೆ. 38 ಸ್ಥಾನಗಳಿಗೆ ಒಟ್ಟು 528 ಅಭ್ಯರ್ಥಿಗಳು ಸ್ಪರ್ಧಿಸಿದ್ದು ಎಲ್ಲರ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ. 528 ಅಭ್ಯರ್ಥಿಗಳಲ್ಲಿ 472 ಪುರುಷ ಅಭ್ಯರ್ಥಿಗಳು, 55 ಮಹಿಳೆಯರು ಮತ್ತು ಒಬ್ಬರು ತೃತೀಯಲಿಂಗಿ ಅಭ್ಯರ್ಥಿ ಇದ್ದಾರೆ.

38 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯವರೆಗೆ ಶೇ.67.59ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ಮಧ್ಯಾಹ್ನ 3 ಗಂಟೆಯವರೆಗೆ 38 ವಿಧಾನಸಭಾ ಕ್ಷೇತ್ರಗಳಲ್ಲಿ 61.47 ರಷ್ಟು ಮತದಾನವಾಗಿತ್ತು.

Jharkhand Election Concludes Results on November 23

ಬೆಳಿಗ್ಗೆ 7 ಗಂಟೆಗೆ ಪ್ರಾರಂಭವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯಗೊಂಡಿದೆ, ಸೂಕ್ಷ್ಮ ಮತಗಟ್ಟೆಗಳನ್ನು ಹೊರತುಪಡಿಸಿ ಸಂಜೆ 4 ಗಂಟೆಗೆ ಮತದಾನ ಕೊನೆಗೊಳ್ಳುತ್ತದೆ. ಈ ಹಂತದಲ್ಲಿ 61 ಲಕ್ಷ ಮಹಿಳೆಯರು ಸೇರಿದಂತೆ 1.23 ಕೋಟಿ ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದರು. ಎಷ್ಟು ಮಂದಿ ಮತದಾನ ಮಾಡಿದ್ದಾರೆ ಎನ್ನುವ ಅಂಕಿಅಂಶ ಚುನಾವಣಾ ಆಯೋಗ ಇನ್ನೂ ಬಿಡುಗಡೆ ಮಾಡಬೇಕಿದೆ.

ಜಾರ್ಖಂಡ್ ರಾಜ್ಯ ವಿಧಾನಸಭಾ ಚುನಾವಣೆಯು ಎರಡು ಹಂತಗಳಲ್ಲಿ ನಡೆದಿದೆ. ಒಟ್ಟು 81 ಕ್ಷೇತ್ರಗಳನ್ನು ಹೊಂದಿದ್ದು, ಮೊದಲ ಹಂತದಲ್ಲಿ 43 ಸ್ಥಾನಗಳಿಗೆ ನವೆಂಬರ್ 13ರಂದು ಮತದಾನ ನಡೆದಿತ್ತು. ಇಂದು ಎರಡನೇ ಹಂತದಲ್ಲಿ 38 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ.

ಪ್ರಮುಖ ಅಭ್ಯರ್ಥಿಗಳು

ಜಾರ್ಖಂಡ್‌ ಮುಕ್ತಿ ಮೋರ್ಚಾ ಪಕ್ಷದ ಮುಖ್ಯಮಂತ್ರಿ ಹೇಮಂತ್ ಸೊರೆನ್, ಅವರ ಪತ್ನಿ ಕಲ್ಪನಾ ಸೊರೆನ್ ಮತ್ತು ಅವರ ಸೊಸೆ ಸೀತಾ ಸೊರೆನ್ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ. ಎರಡನೇ ಹಂತದ ಮತದಾನದಲ್ಲಿ ಗಮನ ಸೆಳೆದಿರುವ ಅಭ್ಯರ್ಥಿಗಳಲ್ಲಿ ಬಿಜೆಪಿಯ ಮಾಜಿ ಸಿಎಂ ಬಾಬುಲಾಲ್ ಮರಾಂಡಿ, ಜೆಎಂಎಂ ಪಕ್ಷದ ಅಸೆಂಬ್ಲಿ ಸ್ಪೀಕರ್ ರವೀಂದ್ರ ನಾಥ್ ಮಹ್ತೋ, ಎಸ್‌ಜೆಯು ಪಕ್ಷದ ಮುಖ್ಯಸ್ಥ ಸುದೇಶ್ ಮಹ್ತೋ ಮತ್ತು ವಿಪಕ್ಷ ನಾಯಕ ಅಮರ್ ಕುಮಾರ್ ಬೌರಿ ಪ್ರಮುಖರಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+