Jharkhand Election 2024: ಬಿಜೆಪಿ ಗೆದ್ದರೆ ನುಸುಳುಕೋರರನ್ನು ಓಡಿಸಲಾಗುತ್ತೆ- ಹಿಮಂತ ಬಿಸ್ವಾ ಪ್ರತಿಜ್ಞೆ
ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಮತಯಾಚನೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಮತದಾರರನ್ನು ಸೆಳೆಯಲು ಪ್ರಬಲ ಪಕ್ಷಗಳು ನಾನಾ ಭರವಸೆಗಳನ್ನು ನೀಡುತ್ತಿವೆ. ಈ ನಡುವೆ ಬಿಜೆಪಿ ನಡೆಸಿದ ರ್‍ಯಾಲಿಯಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಜಾರ್ಖಂಡ್ ಜನರಿಗೆ ದಿಟ್ಟ ಭರವಸೆಯೊಂದನ್ನು ನೀಡಿದ್ದಾರೆ.
ಬಿಜೆಪಿಯ ಪರಿವರ್ತನ್ ಯಾತ್ರೆಯಲ್ಲಿ ಮಾತನಾಡಿದ ಹಿಮಂತ ಬಿಸ್ವಾ ಅವರು, ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಗಳಿಸಿದರೆ ನುಸುಳುಕೋರರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಭರವಸೆಯನ್ನು ನೀಡಿದರು. ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಗಮನಾರ್ಹ ಬದಲಾವಣೆಯನ್ನು ತರಲಾಗುತ್ತದೆ. ಅಲ್ಲದೆ ಅಕ್ರಮ ವಲಸಿಗರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು. ಇದೇ ವೇಳೆ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಅಡಿಯಲ್ಲಿ ಪ್ರಸ್ತುತ ಆಡಳಿತ ಸರ್ಕಾರ ಜಾರ್ಖಂಡ್ ಜನರಿಗೆ ಬೇಕಾದ ಮೂಲ ಸೌಲಭ್ಯಗಳನ್ನು ಒದಗಿಸುವಲ್ಲಿ ವಿಫಲವಾಗಿದೆ ಎಂದು ಅವರು ಟೀಕಿಸಿದರು.

ಬಿಜೆಪಿಯ ಪರಿವರ್ತನ್ ಯಾತ್ರೆಯಲ್ಲಿ ಮಾತನಾಡಿದ ಹಿಮಂತ ಬಿಸ್ವಾ ಶರ್ಮಾ ಅವರು, "ಬಿಜೆಪಿ ಅಧಿಕಾರಕ್ಕೆ ಬಂದರೆ ನಾವು ಜಾರ್ಖಂಡ್‌ನಿಂದ ನುಸುಳುಕೋರರನ್ನು ಓಡಿಸುತ್ತೇವೆ ಎಂದು ನಾವು ಭರವಸೆ ನೀಡುತ್ತೇವೆ. ರಾಜ್ಯದಲ್ಲಿ ಅಕ್ರಮ ವಲಸಿಗರನ್ನು ಮಾತ್ರ ಗೌರವಿಸಲಾಗುತ್ತದೆ. ನಾವು ನುಸುಳುಕೋರರನ್ನು ಹೊರಹಾಕುತ್ತೇವೆ" ಎಂದು ಭರವಸೆಯನ್ನು ನೀಡಿದರು.
ಈ ಹೇಳಿಕೆಯು ರಾಷ್ಟ್ರೀಯ ಭದ್ರತೆ ಮತ್ತು ವಲಸೆಯ ಮೇಲೆ ಬಲವಾದ ನಿಲುವನ್ನು ಪ್ರತಿಬಿಂಬಿಸುತ್ತದೆ. ಜಾರ್ಖಂಡ್‌ನಲ್ಲಿ ಸಂಭಾವ್ಯ ಬದಲಾವಣೆಯನ್ನು ಸೂಚಿಸುತ್ತದೆ. ಶರ್ಮಾ ಅವರು ಧ್ವನಿಗೂಡಿಸಿದಂತೆ ಬಿಜೆಪಿಯ ಉದ್ದೇಶ ಅಕ್ರಮ ವಲಸಿಗರನ್ನು ರಾಜ್ಯದಿಂದ ಹೊರಹಾಕುವುದನ್ನು ಖಚಿತಪಡಿಸಿಕೊಳ್ಳುವುದಾಗಿದೆ.

"ಜಾರ್ಖಂಡ್ ಸಿಎಂ ಹೇಮಂತ್ ಸೋರೆನ್ ಜನಸಾಮಾನ್ಯರಿಗೆ ದ್ರೋಹ ಮಾಡಿದ್ದಾರೆ. ಆದರೆ ಮುಂದೆ ಹೀಗಾಗುವುದಿಲ್ಲ. ಜನರು ನಮ್ಮ ಮೇಲೆ ನಂಬಿಕೆ ಇಟ್ಟು ಗೆಲ್ಲಿಸುತ್ತಾರೆ ಎನ್ನುವ ಭರವಸೆ ಇದೆ. ಬಿಜೆಪಿ ಇಲ್ಲಿ ಮುಂದಿನ ಸರ್ಕಾರವನ್ನು ರಚಿಸುತ್ತದೆ ಎಂದು ನಾವು ಭರವಸೆ ನೀಡುತ್ತೇವೆ" ಎಂದು ಅವರು ಹೇಳಿದರು.
ಉದ್ಯೋಗ ಭರವಸೆ
ಇನ್ನೂ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಮತದಾರರನ್ನು ಸೆಳೆಯಲು ಪ್ರಮುಖ ಭರವಸೆಯನ್ನು ನೀಡಿದ್ದಾರೆ. ಜಾರ್ಖಂಡ್‌ನ ಬಹರಗೋರಾದಲ್ಲಿ ಪರಿವರ್ತನ್ ಯಾತ್ರೆಯ ವೇಳೆ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಜನರನ್ನುದ್ದೇಶಿಸಿ ಮಾತನಾಡಿದರು.
ಈ ವೇಳೆ ಅವರು ಮುಂಬರುವ ರಾಜ್ಯ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿದರೆ ಸರ್ಕಾರಿ ವಲಯದಲ್ಲಿ ಖಾಲಿ ಇರುವ 2.87 ಲಕ್ಷಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಭರವಸೆ ನೀಡಿದರು. ಜಾರ್ಖಂಡ್‌ನಲ್ಲಿ ಉದ್ಯೋಗ ಸಮಸ್ಯೆಗಳನ್ನು ಪರಿಹರಿಸಲು ಪಕ್ಷದ ಬದ್ಧತೆಯನ್ನು ಎತ್ತಿ ತೋರಿಸಲು ಬಿಜೆಪಿ ಈ ಭರವಸೆಯನ್ನು ನೀಡಿದೆ.
ಈ ವೇಳೆ ಪ್ರಸ್ತುತ ಹೇಮಂತ್ ಸೊರೆನ್ ಸರ್ಕಾರ ಉದ್ಯೋಗ ಸೃಷ್ಟಿಯಲ್ಲಿ ವಿಫಲವಾಗಿದೆ ಎಂದು ಚೌಹಾಣ್ ಟೀಕಿಸಿದರು. ಹೇಮಂತ್ ಸೊರೆನ್ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ನಿರುದ್ಯೋಗವನ್ನು ನಿಭಾಯಿಸುತ್ತಿಲ್ಲ ಎಂದು ಅವರು ದೂರಿದರು. ಆದರೆ ನಿರುದ್ಯೋಗವನ್ನು ದೂರ ಮಾಡಲು ಬಿಜೆಪಿ ಬೇಕಿರುವ ಎಲ್ಲಾ ಪ್ರಯತ್ನವನ್ನು ಮಾಡಲಿದೆ ಎಂದು ಅವರು ಹೇಳಿದರು.












Click it and Unblock the Notifications