ಜಾರ್ಖಂಡ್: ಆಸ್ಪತ್ರೆಯಲ್ಲಿ ಅಗ್ನಿ ದುರಂತ- ವೈದ್ಯ ದಂಪತಿ ಸೇರಿ 6 ಮಂದಿ ಸಾವು!
ಜಾರ್ಖಂಡ್‌ನ ಧನ್‌ಬಾದ್‌ನ ಪುರಾಣ ಬಜಾರ್‌ನಲ್ಲಿರುವ ಹಜ್ರಾ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಇಬ್ಬರು ವೈದ್ಯರು ಸೇರಿದಂತೆ ಆರು ಜನರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.
ಜಾರ್ಖಂಡ್‌ನ ಧನ್‌ಬಾದ್‌ನ ಪುರಾಣ ಬಜಾರ್‌ನಲ್ಲಿರುವ ಹಜ್ರಾ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಇಬ್ಬರು ವೈದ್ಯರು ಸೇರಿದಂತೆ ಆರು ಜನರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಇದೇ ವೇಳೆ ಸ್ಥಳದಿಂದ ಒಂಬತ್ತು ಮಂದಿಯನ್ನು ರಕ್ಷಿಸಲಾಗಿದೆ.
ಮೃತರನ್ನು ಡಾ ವಿಕಾಸ್ ಹಜ್ರಾ ಮತ್ತು ಅವರ ಪತ್ನಿ ಡಾ ಪ್ರೇಮಾ ಹಜ್ರಾ ಮತ್ತು ಆಸ್ಪತ್ರೆಯ ಇತರ ಉದ್ಯೋಗಿಗಳು ಎಂದು ಗುರುತಿಸಲಾಗಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಆಸ್ಪತ್ರೆಯ 2ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕ್ರಮೇಣ, ಇದು 1 ನೇ ಮಹಡಿಯನ್ನು ಆವರಿಸಿತು ಮತ್ತು ಅಲ್ಲಿ ಮಲಗಿದ್ದ ಜನರು ತಮ್ಮನ್ನು ರಕ್ಷಿಸಿಕೊಳ್ಳಲು ಸಾಧ್ಯವಾಗದೆ ಮೃತಪಟ್ಟಿದ್ದಾರೆ.
ಬೆಂಕಿಯನ್ನು ನಂದಿಸಲು ಯಾವುದೇ ವ್ಯವಸ್ಥೆಗಳಿಲ್ಲದೆ, ಕೊಠಡಿಯು ಶೀಘ್ರದಲ್ಲೇ ಹೊಗೆಯಿಂದ ತುಂಬಿಕೊಂಡಿದೆ. ಇದರಿಂದಾಗಿ ವೈದ್ಯ ದಂಪತಿಗಳು ಸೇರಿದಂತೆ ಆರು ಜನರು ಉಸಿರುಗಟ್ಟಿ ಸಾವನ್ನಪ್ಪಿದರು. ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, 2 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಆಸ್ಪತ್ರೆಯಿಂದ ಒಟ್ಟು 9 ಜನರನ್ನು ರಕ್ಷಿಸಿವೆ. ಇವರೆಲ್ಲರನ್ನು ಸಮೀಪದ ಪಾಟಲಿಪುತ್ರ ನರ್ಸಿಂಗ್ ಹೋಂಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಹೇಳುವಂತೆ ಆಸ್ಪತ್ರೆಯಲ್ಲಿ ಬೆಂಕಿ ಅನಾಹುತ ತಡೆಯಲು ವಿಶೇಷ ಭದ್ರತಾ ವ್ಯವಸ್ಥೆ ಇರಲಿಲ್ಲ. ಆಂಟಿಫೈರ್ ಯಂತ್ರ ಕೂಡ ಸಕ್ರಿಯವಾಗಿರಲಿಲ್ಲ. ಇದು ಭದ್ರತೆಯಲ್ಲಿ ನಿರ್ಲಕ್ಷ್ಯವನ್ನು ಎತ್ತಿ ತೋರಿಸುತ್ತದೆ.












Click it and Unblock the Notifications