ಜಾರ್ಖಂಡ್ ಮಾಜಿ ಸಿಎಂ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ
ರಾಂಚಿ, ಅಕ್ಟೋಬರ್, 07: ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಚಂಪೈ ಸೊರೆನ್ ಅವರು ಆರೋಗ್ಯದಲ್ಲಿ ಏರುಪೇರಾಗಿ ಶನಿವಾರ (ಅಕ್ಟೋಬರ್ 05) ಜೆಮ್‌ಶೆಡ್‌ಪುರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಇಂದು (ಅಕ್ಟೋಬರ್ 07) ಪ್ರಧಾನಿ ಮೋದಿ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ.
ಶನಿವಾರ (ಅಕ್ಟೋಬರ್ 05)ರಾತ್ರಿ 9 ಗಂಟೆಗೆ ರಕ್ತದಲ್ಲಿನ ಸಕ್ಕರೆ ಪ್ರಮಾಣ ಕಡಿಮೆಯಾದ ಹಿನ್ನೆಲೆ ಚಂಪೈ ಸೊರೆನ್ ಅವರ ತಲೆಸುತ್ತಿದ ಚಂಪೈ ಸೊರೆನ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗತ್ತು.

ಇನ್ನು ಇಂದು ಆರೋಗ್ಯ ವಿಚಾರಿಸಿದ ಹಿನ್ನೆಲೆ ಚಂಪೈ ಸೊರೆನ್ ಅವರು ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಇದೀಗ ಚಂಪೈ ಅವರು ಆರೋಗ್ಯವಾಗಿದ್ದು, ಶೀಘ್ರದಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಇನ್ನು ತಮ್ಮ ಟ್ವೀಟ್ ಮೂಲಕದ ಪ್ರಧಾನಿ ಮೋದಿ ಅವರು, ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ. "ನಾನು ಚಂಪೈ ಅವರು ಬೇಗ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಅವರ ದೀರ್ಘಾಯುಷ್ಯಕ್ಕಾಗಿ ಪ್ರಾರ್ಥಿಸುತ್ತೇನೆ," ಎಂದು ಹೇಳಿದರು.
ಸದ್ಯ ಚಂಪೈ ಸೊರೆನ್ ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದ್ದು, ಶೀಘ್ರದಲ್ಲಿ ಡಿಸ್ಚಾರ್ಜ್ ಮಾಡಲಾಗುತ್ತದೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು 67 ವರ್ಷದ ಚಂಪೈ ಸೊರೆನ್ ಅವರು ಆಗಸ್ಟ್‌ನಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಫೆಬ್ರವರಿ 2ರಂದು ಇಡಿ ಹೇಮಂತ್ ಸೋರೆನ್ ಅವರನ್ನು ಬಂಧಿಸಿದ ನಂತರ ಮತ್ತು ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು.
ಬಳಿಕ ಚಂಪೈ ಸೋರೆನ್ ಅವರನ್ನು ಜಾರ್ಖಂಡ್ ಮುಖ್ಯಮಂತ್ರಿಯನ್ನಾಗಿ ಮಾಡಲಾಯಿತು. ಆದರೆ, ಹೇಮಂತ್ ಸೋರೆನ್ ಜೈಲಿನಿಂದ ಬಿಡುಗಡೆಯಾದ ನಂತರ ಜುಲೈ 3ರಂದು ಅವರು ಸಿಎಂ ಸ್ಥಾನವನ್ನು ತೊರೆಯಬೇಕಾಯಿತು. ಇನ್ನು ಇದೀಗ ಜಾರ್ಖಂಡ್ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿಲ್ಲ ಆದರೆ, ಇಲ್ಲಿನ ಎಲ್ಲಾ ಪಕ್ಷಗಳ ನಾಯಕರು ಅಬ್ಬರದ ಪ್ರಚಾರವನ್ನು ಮಾಡುತ್ತಿದ್ದಾರೆ.
ಎಷ್ಟು ವಿಧಾನಸಭಾ ಸ್ಥಾನಗಳಿವೆ?: 2019ರಲ್ಲಿ ನವೆಂಬರ್ 30 ಮತ್ತು ಡಿಸೆಂಬರ್ 20ರ ನಡುವೆ 5 ಹಂತಗಳಲ್ಲಿ 81 ವಿಧಾನಸಭಾ ಸ್ಥಾನಗಳಿಗೆ ಚುನಾವಣೆಗಳನ್ನು ನಡೆಸಲಾಗಿದ್ದು, ಡಿಸೆಂಬರ್ 23ರಂದು ಫಲಿತಾಂಶಗಳನ್ನು ಘೋಷಣೆ ಮಾಡಲಾಯಿತು. ಇನ್ನು ಈ ಬಾರಿ ವರ್ಷದ ಕೊನೆಯಲ್ಲಿ ಜಾರ್ಖಂಡ್‌ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. 2-3 ಹಂತಗಳಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಮತದಾರರ ವಿವರ: ಜಾರ್ಖಂಡ್ ವಿಧಾನಸಭೆಯ ಚುನಾವಣೆಯು ಜನವರಿ 5, 2025ರಂದು ಕೊನೆಗೊಳ್ಳಲಿದೆ ಎಂದು ಹೇಳಾಲಾಗುತ್ತಿದೆ. ರಾಜ್ಯದಲ್ಲಿ ಒಟ್ಟು 2.59 ಕೋಟಿ ಮತದಾರರಿದ್ದಾರೆ. ಇವರಲ್ಲಿ 1.31 ಕೋಟಿ ಪುರುಷರು ಮತ್ತು 1.28 ಕೋಟಿ ಮಹಿಳೆಯರಿದ್ದಾರೆ. ರಾಜ್ಯದಲ್ಲಿ ಪ್ರಥಮ ಬಾರಿಗೆ 11.5 ಲಕ್ಷಕ್ಕೂ ಹೆಚ್ಚು ಮಂದಿ ಮತದಾನ ಮಾಡಲಿದ್ದಾರೆ. 1.5 ಲಕ್ಷ ಮತದಾರರು 85 ವರ್ಷ ಮೇಲ್ಪಟ್ಟವರಾಗಿದ್ದು, 3.64 ಲಕ್ಷ ಅಂಗವಿಕಲ ಮತದಾರರಿದ್ದಾರೆ ಎಂದು ತಿಳಿದುಬಂದಿದೆ.











Click it and Unblock the Notifications