ಜಾರ್ಖಂಡ್: ವಿದ್ಯಾರ್ಥಿಯ ಬ್ಯಾಗ್‌ನಲ್ಲಿ ಪಿಸ್ತೂಲ್ ಪತ್ತೆ: ಇಬ್ಬರ ಬಂಧನ
ಜಾರ್ಖಂಡ್ ಡಿಸೆಂಬರ್ 21: ಜಾರ್ಖಂಡ್‌ನ ರಾಮಗಢ ಜಿಲ್ಲೆಯಲ್ಲಿ ಆಂಗ್ಲ ಮಾಧ್ಯಮ ಕಾನ್ವೆಂಟ್ ಶಾಲೆಯ ಇಬ್ಬರು ವಿದ್ಯಾರ್ಥಿಗಳು ತರಗತಿಗೆ ಪಿಸ್ತೂಲ್ ಕೊಂಡೊಯ್ಯುತ್ತಿರುವುದು ಕಂಡುಬಂದಿದೆ. ಇದರ ಬೆನ್ನಲ್ಲೆ ಪೊಲೀಸರು ಇಬ್ಬರು ಶಾಲಾ ವಿದ್ಯಾರ್ಥಿಗಳನ್ನು ಬುಧವಾರ ಬಂಧಿಸಿದ್ದಾರೆ. ಭುರ್ಕುಂದ ಪೊಲೀಸ್ ಠಾಣೆ ವ್ಯಾಪ್ತಿಯ ಸಿಬಿಎಸ್‌ಇ-ಸಂಯೋಜಿತ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಯ ಬ್ಯಾಗ್‌ನಲ್ಲಿ ಶಿಕ್ಷಕರೊಬ್ಬರಿಗೆ ಪಿಸ್ತೂಲ್ ಮಂಗಳವಾರ ಪತ್ತೆಯಾಗಿದೆ.
ನಂತರ ಶಾಲೆಯ ಅಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರು ಶಾಲೆಗೆ ಧಾವಿಸಿ ಬಂದೂಕನ್ನು ವಶಪಡಿಸಿಕೊಂಡಿದ್ದಾರೆ. ತರಗತಿಯಲ್ಲಿ ವಿದ್ಯಾರ್ಥಿಯೊಬ್ಬನ ಅನುಮಾನಾಸ್ಪದ ವರ್ತನೆಯು ಶಿಕ್ಷಕರ ಗಮನ ಸೆಳೆದಿದ್ದು, ನಂತರ ಪಿಸ್ತೂಲ್ ಪತ್ತೆಯಾಗಿದೆ ಎಂದು ಪತ್ರಾಟು ಉಪವಿಭಾಗದ ಪೊಲೀಸ್ ಅಧಿಕಾರಿ ಬೀರೇಂದ್ರ ಕುಮಾರ್ ಚೌಧರಿ ಅವರು ಹೇಳಿದರು.

8ನೇ ತರಗತಿಯ ಬಾಲಕನಿಗೆ ಪಿಸ್ತೂಲ್ ನೀಡಲು ಶಾಲೆಗೆ ತಂದಿದ್ದಾಗಿ ವಿದ್ಯಾರ್ಥಿ ಪೊಲೀಸರಿಗೆ ತಿಳಿಸಿದ್ದಾನೆ. ಸದ್ಯ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲು ಪೊಲೀಸರು ನಿರಾಕರಿಸಿದರು. ಈ ಕುರಿತು ಎಲ್ಲಾ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.












Click it and Unblock the Notifications