ಜಾರ್ಖಂಡ್: ಸಾಫ್ಟ್‌ವೇರ್ ಎಂಜಿನಿಯರ್ ಥಳಿಸಿ, ಸಾಮೂಹಿಕ ಅತ್ಯಾಚಾರ- 10 ಮಂದಿ ವಿರುದ್ಧ ಪ್ರಕರಣ
ಚೈಬಾಸಾ ಅಕ್ಟೋಬರ್ 22: ಜಾರ್ಖಂಡ್‌ನ ಚೈಬಾಸಾದಲ್ಲಿ ಬುಡಕಟ್ಟು ಸಮುದಾಯಕ್ಕೆ ಸೇರಿದ ಸಾಫ್ಟ್‌ವೇರ್ ಇಂಜಿನಿಯರ್‌ಗೆ ಥಳಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೊಲೀಸರು 10 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣದಲ್ಲಿ ಸಂತ್ರಸ್ತೆಯ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ. ಆಕೆಯ ಹೇಳಿಕೆಯ ಪ್ರಕಾರ, ಅಕ್ಟೋಬರ್ 20 ರಂದು ಅವಳು ತನ್ನ ಸ್ನೇಹಿತನೊಂದಿಗೆ ಹೊರಗೆ ಹೋಗಿದ್ದಾಗ ಈ ಘಟನೆ ನಡೆದಿದೆ.
ಸಂತ್ರಸ್ತೆಯ ಹೇಳಿಕೆಯನ್ನು ಉಲ್ಲೇಖಿಸಿದ ಪೊಲೀಸರು, ಮಹಿಳೆ ರಸ್ತೆಬದಿಯಲ್ಲಿ ತನ್ನ ಸ್ನೇಹಿತನೊಂದಿಗೆ ಮಾತನಾಡುತ್ತಿದ್ದಾಗ, ಎಂಟರಿಂದ ಹತ್ತು ಜನರು ಬಂದು ಅವರನ್ನು ಹೊಡೆದರು. ಪುರುಷರ ಗುಂಪು ಮಹಿಳೆಯನ್ನು ಏಕಾಂತ ಸ್ಥಳಕ್ಕೆ ಬಲವಂತವಾಗಿ ಕರೆದೊಯ್ದು ಅತ್ಯಾಚಾರವೆಸಗಿದೆ ಎಂದು ಅವರು ತಿಳಿಸಿದ್ದಾರೆ. ಪೊಲೀಸರು ಪ್ರಥಮ ಮಾಹಿತಿ ವರದಿಯನ್ನು ದಾಖಲಿಸಿಕೊಂಡಿದ್ದು, ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದ್ದಾರೆ. ಮಹಿಳೆ ಸದರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಅಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
ಈ ಹಿಂದೆ ಜಾರ್ಖಂಡ್‌ನಲ್ಲಿ ನಡೆದ ಘಟನೆ
ಜಾರ್ಖಂಡ್‌ನಲ್ಲಿ ಹೆಣ್ಣು ಮಕ್ಕಳ ಮೇಲಿನ ದ್ವೇಷದ ಪ್ರಕರಣಗಳು ಹೆಚ್ಚಾಗುತ್ತಿದೆ. ಅಕ್ಟೋಬರ್ ತಿಂಗಳ ಆರಂಭದಲ್ಲಿ 19 ವರ್ಷದ ಯುವತಿಯನ್ನು ವಿವಾಹಿತ ವ್ಯಕ್ತಿಯೊಬ್ಬ ಪೆಟ್ರೋಲ್ ಸುರಿದು ಸಜೀವವಾಗಿ ಸುಟ್ಟುಹಾಕಿದ್ದನು. ಯುವತಿಯನ್ನು ಗಂಭೀರ ಸ್ಥಿತಿಯಲ್ಲಿ ರಾಂಚಿಯ ಆಸ್ಪತ್ರೆಯಲ್ಲಿ ದಾಖಲಿಸಲಾಯಿತು. ಆದರೆ ಆಕೆ ತೀವ್ರ ಸುಟ್ಟ ಗಾಯಗಳಿಂದ ಸಾವನ್ನಪ್ಪಿದಳು.

ದುಮ್ಕಾ ಜಿಲ್ಲೆಯ ಜರ್ಮುಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ಭರತ್‌ಪುರ ಭಾಲ್ಕಿ ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಘಟನೆಯ ಬಗ್ಗೆ ಮಾಹಿತಿ ನೀಡಿದ ಜರ್ಮುಂಡಿ ಡಿಎಸ್ಪಿ ಶಿವೇಂದ್ರ, ದುಮ್ಕಾದಲ್ಲಿ ಯುವತಿಗೆ ಬೆಂಕಿ ಹಚ್ಚಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಹುಡುಗನಿಗೆ ಹುಡುಗಿ ತಿಳಿದಿದ್ದಳು. ಆರೋಪಿಯು ಈಗಾಗಲೇ ಮದುವೆಯಾಗಿದ್ದು, ತನ್ನನ್ನು ಮದುವೆಯಾಗುವಂತೆ ಸಂತ್ರಸ್ತೆಗೆ ಒತ್ತಡ ಹೇರುತ್ತಿದ್ದ. ಹುಡುಗಿಯ ಪೋಷಕರು ಮದುವೆಗೆ ಸಿದ್ಧರಿರಲಿಲ್ಲ' ಎಂದಿದ್ದಾರೆ.
ರಾಜೇಶ್ ರಾವುತ್ ಎಂಬ ವ್ಯಕ್ತಿ ಸಂತ್ರಸ್ತೆ ಮನೆಗೆ ಪ್ರವೇಶಿಸಿ ಸಜೀವ ದಹನ ಮಾಡಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಆಗಸ್ಟ್ 23 ರಂದು ದುಮ್ಕಾ ನಗರದಲ್ಲಿ 16 ವರ್ಷದ ಬಾಲಕಿಯನ್ನು ಇಬ್ಬರು ಯುವಕರು ಪೆಟ್ರೋಲ್ ಸುರಿದು ಇದೇ ರೀತಿ ಕೊಂದು ಕ್ರೌರ್ಯ ಮೆರೆದಿದ್ದರು.












Click it and Unblock the Notifications