ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುಜರಾತ್: ಅಲ್ಪೇಶ್ ಠಾಕೂರ್, ಜಿಗ್ನೇಶ್ ಮೇವಾನಿಗೆ ಭರ್ಜರಿ ಜಯ

By Sachhidananda Acharya
|
Google Oneindia Kannada News

Recommended Video

ಅಲ್ಪೇಶ್ ಠಾಕೂರ್ ಮತ್ತು ಜಿಗ್ನೇಶ್ ಮೆವಾನಿ ಅವರು ಕಾಂಗ್ರೆಸ್‌ನಲ್ಲಿ ಗೆದ್ದ ಯುವ ನಾಯಕರು | Oneindia Kannada

ಅಹಮದಾಬಾದ್, ಡಿಸೆಂಬರ್ 18: ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಭಾರೀ ಸದ್ದು ಮಾಡಿದ ಮೂವರು ಯುವ ನಾಯಕರಲ್ಲಿ ಅಲ್ಪೇಶ್ ಠಾಕೂರ್ ಮತ್ತು ಜಿಗ್ನೇಶ್ ಮೆವಾನಿ ಭರ್ಜರಿ ಜಯ ದಾಖಲಿಸಿದ್ದಾರೆ. ಇನ್ನೋರ್ವ ಯುವ ನಾಯಕ, ಪಾಟೀದಾರ್ ಹೋರಾಟಗಾರ ಹಾರ್ದಿಕ್ ಪಟೇಲ್ ಚುನಾವಣೆಗೆ ನಿಂತಿರಲಿಲ್ಲ.

ಸೌರಾಷ್ಟ್ರದ ಪ್ರತಿಷ್ಠಿತ ಕ್ಷೇತ್ರ ಗೆದ್ದ ಸಿಎಂ ವಿಜಯ್ ರೂಪಾನಿಸೌರಾಷ್ಟ್ರದ ಪ್ರತಿಷ್ಠಿತ ಕ್ಷೇತ್ರ ಗೆದ್ದ ಸಿಎಂ ವಿಜಯ್ ರೂಪಾನಿ

ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದಿದ್ದ ಒಬಿಸಿ ನಾಯಕ ಅಲ್ಪೇಶ್ ಠಾಕೂರ್ ರಾಧನ್ಪುರ್ ಕ್ಷೇತ್ರದಲ್ಲಿ ಭರ್ಜರಿ ಜಯ ದಾಖಲಿಸಿದ್ದಾರೆ. ಅವರು 55,751 ಮತಗಳನ್ನು ಪಡೆದಿದ್ದು ಹತ್ತಿರದ ಪ್ರತಿ ಸ್ಪರ್ಧಿ ಬಿಜೆಪಿಯ ಲವಿಂಜಿ ಸೋಲಂಕಿಯವರನ್ನು 12,544 ಮತಗಳಿಂದ ಸೋಲಿಸಿದ್ದಾರೆ.

Jignesh Mevani and Alpesh Thakor wins in Gujarat Assembly election 2017

ಕಳೆದ ನವೆಂಬರ್ ನಲ್ಲಿ ಅವರು ಕಾಂಗ್ರೆಸ್ ಗೆ ಸೇರ್ಪಡೆಯಾಗಿ ಚುನಾವಣೆಗೆ ಸ್ಪರ್ಧಿಸಿದ್ದರು. ಈಗ ಭರ್ಜರಿ ಗೆಲುವು ಅವರದಾಗಿದೆ.

ಗುಜರಾತ್ ನಲ್ಲಿ ಬಿಜೆಪಿಗೆ ಮೊದಲ ಗೆಲುವುಗುಜರಾತ್ ನಲ್ಲಿ ಬಿಜೆಪಿಗೆ ಮೊದಲ ಗೆಲುವು

ಇನ್ನೋರ್ವ ಯುವ ನಾಯಕ, ದಲಿತ ಹೋರಾಟಗಾರ ಜಿಗ್ನೇಶ್ ಮೇವಾನಿ ಕೂಡ ಭರ್ಜರಿ ಜಯ ದಾಖಲಿಸಿದ್ದಾರೆ. ಬನಸ್ಕಾಂತ ಜಿಲ್ಲೆಯ ವಡ್ಗಾಮ್ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜಿಗ್ನೇಶ್ ಮೇವಾನಿ 63,471 ಮತಗಳನ್ನು ಪಡೆದಿದ್ದಾರೆ. ಅವರು ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ವಿಜಯಕುಮಾರ್ ಚಕ್ರವರ್ತಿಯವರನ್ನು 21,042 ಮತಗಳ ಅಂತರದಿಂದ ಸೋಲಿಸಿದ್ದಾರೆ.

Jignesh Mevani and Alpesh Thakor wins in Gujarat Assembly election 2017

ಊನಾ ದಲಿತ ದೌರ್ಜನ್ಯದ ನಂತರ ರಾಜ್ಯದಾದ್ಯಂತ ಹುಟ್ಟಿಕೊಂಡ ದಲಿತ ಹೋರಾಟದ ಮೂಲಕ ಜಿಗ್ನೇಶ್ ಮೇವಾನಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದರು. ನಂತರದ ದಿನಗಳಲ್ಲಿ ಬಿಜೆಪಿ ವಿರುದ್ಧ ಕೆಂಡ ಕಾರುತ್ತಾ ಬಂದ ಜಿಗ್ನೇಶ್ ಸ್ವತಂತ್ರವಾಗಿ ಚುನಾವಣೆಗೆ ಸ್ಪರ್ಧಿಸಿದ್ದರು. ಇದೀಗ ಅವರು ಜಯಶಾಲಿಯಾಗಿದ್ದಾರೆ.

English summary
Gujarat Assembly Election Results 2017: Dalit rights campaigner Jignesh Mevani has won from his constituency Vadgam in Banaskantha district by 21,042 votes as an independent candidate. OBC rights campaigner Alpesh Thakor has won from his constituency Radhanpur as Congress candidate.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X