26/11 ಉಗ್ರ ದಾಳಿ ವೇಳೆ ಎನ್‌ಎಸ್‌ಜಿ ಮುಖ್ಯಸ್ಥರಾಗಿದ್ದ ಜೆಕೆ ದತ್ ಕೊರೊನಾದಿಂದ ನಿಧನ
ನವದೆಹಲಿ, ಮೇ 19: ಮುಂಬೈನಲ್ಲಿ 2008ರಲ್ಲಿ ನಡೆದ ಉಗ್ರ ದಾಳಿ ಸಂದರ್ಭದಲ್ಲಿ ಕಮಾಂಡೋ ಪಡೆಗೆ ಮುಖ್ಯಸ್ಥರಾಗಿದ್ದ ರಾಷ್ಟ್ರೀಯ ಭದ್ರತಾ ಪಡೆ ಸಿಬ್ಬಂದಿ ಮಾಜಿ ಮಹಾನಿರ್ದೇಶಕ ಜೆಕೆ ದತ್(72) ಬುಧವಾರ ಕೊರೊನಾ ಸೋಂಕಿನಿಂದ ನಿಧನರಾದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅವರು ಇಂದು ಮಧ್ಯಾಹ್ನ 3: 30 ಕ್ಕೆ ಹೃದಯ ಸ್ತಂಭನದಿಂದ ನಿಧನರಾದರು" ಎಂದು ಕುಟುಂಬ ಸದಸ್ಯರೊಬ್ಬರು ಹೇಳಿದರು.ದತ್ ಅವರ ಪತ್ನಿ, ಮಗ, ನೋಯ್ಡಾದಲ್ಲಿ ಕೆಲಸ ಮಾಡುತ್ತಿದ್ದಾರೆ ಪುತ್ರಿ ಯುಕೆನಲ್ಲಿ ನೆಲೆಸಿದ್ದಾರೆ.
ನಿವೃತ್ತ ಐಪಿಎಸ್ ಅಧಿಕಾರಿಯನ್ನು ಏಪ್ರಿಲ್ 14 ರಂದು ಗುರುಗ್ರಾಮದ ಮೆದಂತಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆಮ್ಲಜನಕದ ಮಟ್ಟ ಕ್ಷೀಣಿಸಲು ಪ್ರಾರಂಭಿಸಿದ್ದವೆಂದು ಕುಟುಂಬ ಮೂಲಗಳು ಪಿಟಿಐಗೆ ತಿಳಿಸಿವೆ.

ಪಾಕ್ ಮೂಲದ ಲಷ್ಕರೆ ತಯ್ಬಾ ಸಂಘಟನೆಯ 10 ಉಗ್ರರು ಮುಂಬಯಿನ ಹಲವು ಕಡೆ ಸರಣಿ ದಾಳಿ ನಡೆಸಿ 166 ಜನರ ಮಾರಣಹೋಮ ನಡೆಸಿದ್ದರು.
ಪಾಕಿಸ್ತಾನದ ಕರಾಚಿಯಿಂದ ಸಮುದ್ರ ಮಾರ್ಗದ ಮೂಲಕ ಬಂದಿದ್ದ 10 ಮಂದಿ ಲಷ್ಕರ್-ಇ-ತೊಯ್ಬಾ ಉಗ್ರರು 2008ರ ನ.26ರಂದು ಮುಂಬೈನ ತಾಜ್ ಹೋಟೆಲ್, ಶಿವಾಜಿ ಟರ್ಮಿನಲ್ ಸೇರಿದಂತೆ 12 ಸ್ಥಳಗಳ ಮೇಲೆ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ವಿದೇಶಿಗರೂ ಸೇರಿದಂತೆ 174 ಮಂದಿ ನಾಗರೀಕರು ಸಾವನ್ನಪ್ಪಿದ್ದರು.
ಭಾರತದ ಇತಿಹಾಸದಲ್ಲಿಯೇ ಎಂದೂ ಕಂಡಿರದಂತಹ ರೀತಿಯಲ್ಲಿ ದಾಳಿ ನಡೆಸಿದ್ದರು. ಛತ್ರಪತಿ ಶಿವಾಜಿ ಟರ್ಮಿನಲ್, ಲಿಯೋಪೋಲ್ಡ್ ಕೆಫೆ, ಕಾಮಾ ಆಸ್ಪತ್ರೆ ಸೇರಿದಂತೆ ಒಟ್ಟು 7 ಕಡೆಗಳಲ್ಲಿ ಉಗ್ರರು ದಾಳಿ ನಡೆಸಿ 174 ಅಮಾಯಕ ಜನರನ್ನು ಬಲಿಪಡೆದುಕೊಂಡಿದ್ದರು.
ಸುಮಾರು 10 ಉಗ್ರರು ಮುಂಬೈ ಮೇಲೆ ದಾಳಿ ನಡೆಸಿದ್ದರು. 68 ಗಂಟೆಗಳ ಕಾಲ ಭದ್ರತಾ ಸಿಬ್ಬಂದಿಗಳು ಉಗ್ರರೊಡನೆ ಹೋರಾಟ ನಡೆಸಿದ್ದರು. ಉಗ್ರರ ವಿರುದ್ಧ ಹೋರಾಟದಲ್ಲಿ 17 ಜನ ಭಧ್ರತಾ ಸಿಬ್ಬಂದಿಗಳು ಹುತಾತ್ಮರಾಗಿದ್ದರು.












Click it and Unblock the Notifications