Video: ಸ್ಲಿಪ್ಪರ್‌ನಿಂದ ವಯಸ್ಸಾದ ಪೋಷಕರನ್ನು ಕ್ರೂರವಾಗಿ ಥಳಿಸಿದ ವ್ಯಕ್ತಿ- ವಿಡಿಯೋ
ಶ್ರೀನಗರ ಸೆಪ್ಟೆಂಬರ್ 8: ಯುವಕನೊಬ್ಬ ತನ್ನ ವೃದ್ಧ ಪೋಷಕರ ಮೇಲೆ ಬೀದಿಯಲ್ಲಿ ಅಮಾನುಷವಾಗಿ ಹಲ್ಲೆ ನಡೆಸಿರುವ ಭೀಕರ ಘಟನೆ ಶ್ರೀನಗರದಲ್ಲಿ ನಡೆದಿದೆ. ಈ ಆಘಾತಕಾರಿ ಕೃತ್ಯ ಸಾರ್ವಜನಿಕರನ್ನು ದಿಗ್ಭ್ರಮೆಗೊಳಿಸಿದೆ. ಮಾತ್ರವಲ್ಲದೆ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ವೈರಲ್ ಆದ ನಂತರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ವರದಿಗಳ ಪ್ರಕಾರ, ಮಗ ಮತ್ತು ಅವನ ಹೆತ್ತವರ ನಡುವೆ ಹೆಚ್ಚಿದ ವೈಯಕ್ತಿಕ ವಿವಾದದಿಂದ ಈ ದಾಳಿ ನಡೆದಿದೆ. ಕೋಪದ ಭರದಲ್ಲಿ ಮಗ ಅಸಹಾಯಕ ಮತ್ತು ತಮ್ಮನ್ನು ರಕ್ಷಿಸಿಕೊಳ್ಳಲು ಆಗದ ತನ್ನ ಹೆತ್ತವರ ಮೇಲೆ ಹಲ್ಲೆ ಮಾಡಿದ್ದಾನೆ. ರಸ್ತೆಯಲ್ಲಿ ನೆರೆದಿದ್ದವರು ಘಟನೆಯನ್ನು ನೋಡುತ್ತಿದ್ದರಾದರೂ ಯಾರೂ ಕೂಡ ಮಧ್ಯಪ್ರವೇಶಿಸಲಿಲ್ಲ. ಹಲ್ಲೆಯಿಂದ ಪೋಷಕರನ್ನು ರಕ್ಷಿಸಲಿಲ್ಲ.

ವಯಸ್ಸಾದ ಪೋಷಕರು ನೆಲದ ಮೇಲೆ ಬಿದ್ದ ಬಳಿಕ ಕೆಲ ಜನ ಮಧ್ಯಪ್ರವೇಶ ಮಾಡಿ ರಕ್ಷಣೆ ಮಾಡುತ್ತಾರೆ. ಆದರೆ ಮಗ ಮಾತ್ರ ಕ್ರೂರತೆಯಿಂದ ಹಲ್ಲೆ ಮಾಡುತ್ತಾನೆ. ಆತ ಪೋಷಕರನ್ನು ಒದೆಯುವುದು ಮತ್ತು ಹೊಡೆಯುವುದು ಮಾತ್ರ ಎಂಥವರ ಎದೆ ನಡಿಗಿಸುವಂತಿದೆ. ನೋಡುಗರು ಭಯದಿಂದ ಬೇರಗಾಗಿ ನಿಂತಿರುವುದು ಕಂಡು ಬಂದಿದೆ.
ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬಳಿಕ ಪೊಲೀಸರು ವ್ಯಕ್ತಿಯನ್ನು ಪತ್ತೆ ಹಚ್ಚಿದ್ದಾರೆ. ಮಗನನ್ನು ಬಂಧಿಸಿ ದಾಳಿಯ ಹಿಂದಿನ ಕಾರಣಗಳನ್ನು ಕಂಡುಹಿಡಿಯಲು ತನಿಖೆಯನ್ನು ಪ್ರಾರಂಭಿಸಿದ್ದಾರೆ.
ಈ ಘಟನೆಯು ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಅನೇಕರು ಈತನ ಅಮಾನವೀಯ ಕೃತ್ಯವನ್ನು ಖಂಡಿಸಿದ್ದಾರೆ ಮತ್ತು ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಸಾಮಾಜಿಕ ಮೌಲ್ಯಗಳು ಮತ್ತು ಕೌಟುಂಬಿಕ ಸಂಬಂಧಗಳ ಸವೆತದ ಬಗ್ಗೆ ನೆಟ್ಟಿಗರು ಆತಂಕ ವ್ಯಕ್ತಪಡಿಸಿದ್ದಾರೆ. ಮಕ್ಕಳು ತಮ್ಮ ಪೋಷಕರ ಮೇಲೆ ದೈಹಿಕವಾಗಿ ಹಲ್ಲೆ ಮಾಡುವ ಮಟ್ಟಕ್ಕೆ ಸಮಾಜವು ಹದಗೆಟ್ಟಿದೆಯೇ ಎಂದು ಪ್ರಶ್ನಿಸಿದ್ದಾರೆ.
ಘಟನೆಯ ಬಳಿಕ ವಯಸ್ಸಾದ ಪೋಷಕರನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅವರ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ. ಈ ಘಟನೆಯು ಸಾಮಾಜಿಕ ಮತ್ತು ಕೌಟುಂಬಿಕ ಮೌಲ್ಯಗಳ ಸ್ಥಿತಿಯ ಬಗ್ಗೆ ಕಳವಳವನ್ನು ಉಂಟುಮಾಡಿದೆ.
How is this possible?
— Iram Beigh (@Irambeigh) September 7, 2024
A man from Srinagar beating his parents.Look at mother, how does one beat mother and father.
Literally shocking video pic.twitter.com/GgwvC78K3g
ತಾಯಿ ಮೇಲೆ ಬಿದ್ದ ಆಟೋವನ್ನು ಎತ್ತಿದ ಬಾಲಕಿ
ಅಪಘಾತದಲ್ಲಿ ತಾಯಿ ಮೇಲೆ ಬಿದ್ದ ಆಟೋವನ್ನು ಪುಟ್ಟ ಬಾಲಕಿಯೊಬ್ಬಳು ಎತ್ತಿ ಹಾಕಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಕಿನ್ನಿಗೋಳಿಯ ರಾಮನಗರದಲ್ಲಿ ಈ ಘಟನೆ ನಡೆದಿದ್ದು, ರಸ್ತೆ ದಾಟುತ್ತಿರುವ ವೇಳೆ ಮಹಿಳೆಯೊಬ್ಬರಿಗೆ ಏಕಾಏಕಿ ಆಟೋ ರಿಕ್ಷಾ ಡಿಕ್ಕಿ ಹೊಡೆದಿದ್ದು, ಪರಿಣಾಮ ರಭಸದಿಂದ ಬಂದ ಆಟೋ ಮಹಿಳೆಯ ಮೇಲೆ ಮಗುಚಿ ಬಿದ್ದಿದೆ.
ಇದನ್ನು ಕಂಡ ಬಾಲಕಿ ಓಡಿ ಬಂದಿದ್ದು, ತಕ್ಷಣ ಆಟೋವನ್ನೇ ಮೇಲೆಕ್ಕೆ ಎತ್ತಿ ಹಾಕಿದ್ದಾಳೆ. ಇವಿಷ್ಟೂ ದೃಶ್ಯವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications