ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ಕನ್ಹಯ್ಯಾ ಕುಮಾರ್ ದೇಶ ವಿರೋಧಿ ಘೋಷಣೆ ಕೂಗಿಲ್ಲ'

By ವಿಕಾಸ್ ನಂಜಪ್ಪ
|
Google Oneindia Kannada News

ನವದೆಹಲಿ, ಮಾರ್ಚ್ 01 : ಜೆಎನ್‌ಯು ವಿದ್ಯಾರ್ಥಿ ಸಂಘದ ನಾಯಕ ಕನ್ಹಯ್ಯಾ ಕುಮಾರ್, ರಾಷ್ಟ್ರ ವಿರೋಧಿ ಘೋಷಣೆ ಕೂಗಿರುವ ಬಗ್ಗೆ ವಿಡಿಯೋದಲ್ಲಿ ಸಾಕ್ಷಿಗಳಿಲ್ಲ ಎಂದು ದೆಹಲಿ ಪೊಲೀಸರು ಹೈಕೋರ್ಟ್‌ಗೆ ಹೇಳಿಕೆ ನೀಡಿದ್ದಾರೆ. ಕನ್ಹಯ್ಯಾ ಕುಮಾರ್ ಜಾಮೀನು ಅರ್ಜಿಯ ತೀರ್ಪನ್ನು ಕೋರ್ಟ್ ಕಾಯ್ದಿರಿಸಿದೆ.

ದೆಹಲಿ ಹೈಕೋರ್ಟ್‌ನಲ್ಲಿ ಸೋಮವಾರ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಸಂಘದ ನಾಯಕ ಕನ್ಹಯ್ಯಾ ಕುಮಾರ್ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ಈ ಸಂದರ್ಭದಲ್ಲಿ ದೆಹಲಿ ಪೊಲೀಸರು ಜಾಮೀನು ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿದರು. [ಬೇಲ್ ಕೇಳಿದ ಕನ್ಹಯ್ಯಾನನ್ನು ವಾಪಸ್ ಕಳಿಸಿದ ಸುಪ್ರೀಂಕೋರ್ಟ್]

kanaihya kumar

ಜೆಎನ್‌ಯುನಲ್ಲಿ ನಡೆದ ಕಾರ್ಯಕ್ರಮದ ವಿಡಿಯೋದಲ್ಲಿ ಕನ್ಹಯ್ಯಾ ಕುಮಾರ್ ರಾಷ್ಟ್ರ ವಿರೋಧಿ ಘೋಷಣೆ ಕೂಗಿರುವ ಬಗ್ಗೆ ಸಾಕ್ಷಿಗಳು ಲಭ್ಯವಾಗಿಲ್ಲ. ಆದರೆ, ಕಾರ್ಯಕ್ರಮದಲ್ಲಿರುವ ಅವರು ಘೋಷಣೆ ಕೂಗಿರುವ ಬಗ್ಗೆ ಕೆಲವರು ಸಾಕ್ಷಿಗಳನ್ನು ಹೇಳಿದ್ದಾರೆ ಎಂದು ಪೊಲೀಸರು ಹೈಕೋರ್ಟ್‌ಗೆ ತಿಳಿಸಿದರು. [JNU ವಿವಾದ : ರಾಹುಲ್, ಕೇಜ್ರಿವಾಲ್ ವಿರುದ್ಧ ಎಫ್ ಐಆರ್]

'ರಾಜದ್ರೋದ ಎಂದರೇನು ಎಂದು ನಿಮಗೆ ತಿಳಿದಿದೆಯೇ?' ಎಂದು ಪೊಲೀಸರನ್ನು ಪ್ರಶ್ನಿಸಿದ ಹೈಕೋರ್ಟ್, ಕನ್ಹಯ್ಯಾ ಕುಮಾರ್ ಜಾಮೀನು ಅರ್ಜಿಯ ತೀರ್ಪನ್ನು ಕಾಯ್ದಿರಿಸಿತು. ಫೆ.9ರಂದು ಜೆಎನ್‌ಯು ವಿವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ಹಯ್ಯಾ ಕುಮಾರ್ ರಾಷ್ಟ್ರ ವಿರೋಧಿ ಘೋಷಣೆ ಕೂಗಿದ್ದಾರೆ ಎಂಬ ಆರೋಪದ ಮೇಲೆ ದೆಹಲಿ ಪೊಲೀಸರು ಅವರನ್ನು ಬಂಧಿಸಿದ್ದಾರೆ. [ಅಫ್ಜಲ್ ಗುರು ಈತನ ಹೃದಯಕ್ಕೆ ಹತ್ತಿರವಾಗಿದ್ದನಂತೆ!]

ಮಾರ್ಚ್‌ 2ರಂದು ತೀರ್ಪು : ಕನ್ಹಯ್ಯಾ ಕುಮಾರ್ ಜಾಮೀನು ಅರ್ಜಿಯ ತೀರ್ಪನ್ನು ಮಾರ್ಚ್ 2ರಂದು ದೆಹಲಿ ಹೈಕೋರ್ಟ್ ಪ್ರಕಟಿಸಲಿದೆ. ಪ್ರಕರಣದಲ್ಲಿ ದೆಹಲಿ ಸರ್ಕಾರವೂ ಪ್ರತಿವಾದಿಯಾಗಿದ್ದು, ಜಾಮೀನು ಅರ್ಜಿಗೆ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿಲ್ಲ.

'ಕನ್ಹಯ್ಯ ಕುಮಾರ್ ಪರವಾಗಿ ವಾದ ಮಂಡನೆ ಮಾಡಿದ ಹಿರಿಯ ವಕೀಲ ಕಪಿಲ್ ಸಿಬಲ್ ಅವರು, ದೆಹಲಿ ಪೊಲೀಸರು ಕನ್ಹಯ್ಯ ವಿರುದ್ಧದ ರಾಜದ್ರೋಹದ ಆರೋಪವನ್ನು ಸಾಬೀತು ಮಾಡಲು ವಿಫಲರಾಗಿದ್ದಾರೆ. ಕನ್ಹಯ್ಯ ಕುಮಾರ್ ರಾಷ್ಟ್ರ ವಿರೋಧಿ ಘೋಷಣೆ ಕೂಗಿದ್ದಾರೆ ಎಂಬುದಕ್ಕೆ ಯಾವುದೇ ಸಾಕ್ಷಿಗಳಿಲ್ಲ' ಕೋರ್ಟ್‌ಗೆ ತಿಳಿಸಿದ್ದರು.

English summary
The Delhi police told the High Court that in the video of the JNU event, Kanaihya Kumar cannot be seen raising anti national slogans. The submission was made to the Delhi high court which is hearing the bail plea of Kumar, the JNU student leader. The Delhi High Court reserved its order on the bail plea while asking the Delhi police, " do you even know what sedition is?"
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X