ಉಗ್ರರ ಮೇಲೆ ದಾಳಿ, ಭಾರತದ ಬೆನ್ನಿಗೆ ಯುಎಸ್ ನಿಂತಿದೆಯೆ?

ನವದೆಹಲಿ, ಸೆ. 29: ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಹಾಗೂ ಗಡಿ ನಿಯಂತ್ರಣ ರೇಖೆಯ ಬಳಿ ಇದ್ದ ಉಗ್ರರ ಕ್ಯಾಂಪ್ ಮೇಲೆ ನಡೆಸಿದ ದಾಳಿ ಪೂರ್ವನಿಯೋಜಿತವಾಗಿತ್ತು, ಇದಕ್ಕೆ ಅಮೆರಿಕದ ಬೆಂಬಲವೂ ಇತ್ತು ಎಂಬ ಮಾಹಿತಿ ಬಂದಿದೆ.

ನಿಮ್ಮೊಂದಿಗೆ ನಾವಿದ್ದೇವೆ ಎಂದು ಅಮೆರಿಕ ಸಂಪೂರ್ಣ ಬೆಂಬಲ ಘೋಷಿಸಿದ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಇಸ್ಲಾಮಾಬಾದಿನಲ್ಲಿ ನಡೆಯಬೇಕಿದ್ದ ಸಾರ್ಕ್ ಸಮ್ಮೇಳನದಿಂದ ಭಾರತ ಹಿಂದಕ್ಕೆ ಸರಿದಿದ್ದು ತಿಳಿದಿರಬಹುದು. ಇದಾದ ಬಳಿಕ ಕಳೆದ ವಾರದಿಂದ ನಡೆದ ಬೆಳವಣಿಗೆಯನ್ನು ಗಮನಿಸಿದರೆ ಅಮೆರಿಕದ ಬೆಂಬಲ ಇರುವುದಕ್ಕೆ ಪುರಾವೆ ಸಿಗುತ್ತದೆ. [ ಎಷ್ಟು ಉಗ್ರರ ಕ್ಯಾಂಪ್ ಧ್ವಂಸ, ಎಷ್ಟು ಜನ ಉಗ್ರರು ಬಲಿ?]

John Kerry Sushma Swaraj Talk tension between India and Pakistan

ಭಾರತದ ಭದ್ರತಾ ಸಲಹೆಗಾರ ಅಜಿತ್ ಗೋವೆಲ್ ಜತೆ ದೂರವಾಣಿ ಮೂಲಕ ಮಾತನಾಡಿದ ಅಮೆರಿಕ ರಕ್ಷಣಾ ಕಾರ್ಯದರ್ಶಿ ಆಸ್ಟನ್ ಕಾರ್ಟರ್ ಅವರು, ನಿಮ್ಮ ಬೆಂಬಲಕ್ಕೆ ನಾವಿದ್ದೇವೆ. ಭಯೋತ್ಪಾದನೆಯನ್ನು ಮಟ್ಟ ಹಾಕುವುದೇ ನಮ್ಮ ಮುಖ್ಯ ಉದ್ದೇಶ ಎಂದು ಭರವಸೆ ನೀಡಿದ್ದರು.

ಪಾಕಿಸ್ತಾನ ವಿಶ್ವದ ಹಲವು ರಾಷ್ಟ್ರಗಳ ಹಿತವಚನವನ್ನು ಕಡೆಗಣಿಸಿ ಮತ್ತೂ ಕೂಡ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವುದು ಸರಿಯಲ್ಲ ಎಂದು ಅವರು ತಿಳಿಸಿದ್ದರು.

ನಂತರಯುಎಸ್ ಕಾರ್ಯದರ್ಶಿ ಜಾನ್ ಕೆರಿ ಅವರು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರೊಂದಿಗೆ ಮಾತುಕತೆ ನಡೆಸಿ, ಕಾಶ್ಮೀರದ ಬಾರಮುಲ್ಲಾ ಉರಿಯಲ್ಲಿ ಉಗ್ರರು ನಡೆಸಿದ ಕೃತ್ಯವನ್ನು ಖಂಡಿಸಿದರು. ['ಸರ್ಜಿಕಲ್ ಆಪರೇಷನ್' ಅಂದರೆ ಏನು ಗೊತ್ತಾ?]

ಭಯೋತ್ಪಾದನೆ ಹತ್ತಿಕ್ಕುವಲ್ಲಿ ಯುಎಸ್ ಸದಾ ಕಾಲ ಬೆಂಬಲ ನೀಡುತ್ತದೆ ಎಂದು ತಿಳಿಸಿದರು. ಗಡಿ ಭಾಗದಲ್ಲಿ ನಡೆದಿರುವ ಭಯೋತ್ಪಾದನಾ ಚಟುವಟಿಕೆಯನ್ನು ಹತ್ತಿಕ್ಕುವಂತೆ ಸೂಚಿಸಿದರು ಎಂದು ತಿಳಿದು ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+