ಭಾರತಕ್ಕೆ ಮತ್ತೊಂದು ಕೊರೊನಾ ಲಸಿಕೆ; J&J ಏಕ ಡೋಸ್ ಲಸಿಕೆಗೆ ಅನುಮತಿ

ನವದೆಹಲಿ, ಆಗಸ್ಟ್‌ 07: ಅಮೆರಿಕ ಮೂಲದ ಜಾನ್ಸನ್ ಅಂಡ್ ಜಾನ್ಸನ್ ಕಂಪನಿ ಅಭಿವೃದ್ಧಿಪಡಿಸಿರುವ ಕೊರೊನಾ ಲಸಿಕೆಗೆ ಭಾರತದಲ್ಲಿ ಶನಿವಾರ ಅನುಮೋದನೆ ನೀಡಲಾಗಿದೆ.

"ಭಾರತ ತನ್ನ ಕೊರೊನಾ ಲಸಿಕೆಯ ಸಂಖ್ಯೆಯನ್ನು ವಿಸ್ತರಿಸಿಕೊಂಡಿದೆ. ಜಾನ್ಸನ್ ಅಂಡ್ ಜಾನ್ಸನ್ ಸಂಸ್ಥೆಯ ಏಕಡೋಸ್ ಕೊರೊನಾ ಲಸಿಕೆಯ ತುರ್ತು ಬಳಕೆಗೆ ಭಾರತದಲ್ಲಿ ಶನಿವಾರ ಅನುಮೋದನೆ ನೀಡಲಾಗಿದೆ. ಈಗ ಭಾರತದಲ್ಲಿ ಐದು ಕೊರೊನಾ ಲಸಿಕೆಗಳು ಲಭ್ಯವಿವೆ. ಇದು ಕೊರೊನಾ ಸೋಂಕಿನ ವಿರುದ್ಧ ಭಾರತದ ಹೋರಾಟವನ್ನು ಇನ್ನಷ್ಟು ಬಲಗೊಳಿಸಲಿದೆ" ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಶನಿವಾರ ಟ್ವೀಟ್ ಮಾಡಿದ್ದಾರೆ.

Johnson & Johnson Get Emergency Use Authorization For Covid Single Dose Vaccine In India

"ಆಗಸ್ಟ್ 7ರಂದು ಭಾರತ ಸರ್ಕಾರ ತುರ್ತು ಬಳಕೆಗೆ ಜಾನ್ಸನ್‌ ಅಂಡ್ ಜಾನ್ಸನ್ ಸಂಸ್ಥೆಯ ಏಕ ಡೋಸ್ ಲಸಿಕೆಗೆ ಅನುಮೋದನೆ ನೀಡಿದೆ. 18 ವರ್ಷ ಹಾಗೂ ಮೇಲ್ಪಟ್ಟವರಿಗೆ ಕೊರೊನಾ ವಿರುದ್ಧ ಈ ಲಸಿಕೆಯನ್ನು ನೀಡಲಾಗುವುದು" ಎಂದು ಜಾನ್ಸನ್ ಅಂಡ್ ಜಾನ್ಸನ್ ಕಂಪನಿ ವಕ್ತಾರರು ಹೇಳಿದ್ದಾರೆ.

ಗುರುವಾರ ಲಸಿಕೆಯ ತುರ್ತು ಬಳಕೆ ಸಂಬಂಧ ಅನುಮತಿ ಕೋರಿ ಜಾನ್ಸನ್ ಅಂಡ್ ಜಾನ್ಸನ್ ಕಂಪನಿ ಕೇಂದ್ರ ಸರ್ಕಾರಕ್ಕೆ ಅರ್ಜಿ ಸಲ್ಲಿಸಿತ್ತು. "ಸಂಸ್ಥೆ ತನ್ನ ಏಕ ಡೋಸ್ ಲಸಿಕೆಯನ್ನು ಭಾರತದಲ್ಲಿ ಶೀಘ್ರವೇ ಬಿಡುಗಡೆಗೊಳಿಸಲು ಬದ್ಧವಾಗಿದೆ. ಭಾರತದಲ್ಲಿ ಸದ್ಯಕ್ಕೆ ಕೊರೊನಾ ಲಸಿಕೆಯ ವೈದ್ಯಕೀಯ ಅಧ್ಯಯನಗಳನ್ನು ನಡೆಸುವ ಅವಶ್ಯಕತೆಯಿಲ್ಲ ಎಂದು ತಿಳಿಸಲಾಗಿದೆ. ನಮ್ಮ ಏಕ ಡೋಸ್ ಲಸಿಕೆಯನ್ನು ಭಾರತಕ್ಕೆ ತಲುಪಿಸುವ ನಮ್ಮ ಸಾಮರ್ಥ್ಯವನ್ನು ಹೇಗೆ ವೃದ್ಧಿಸಿಕೊಳ್ಳಬಹುದು ಎಂಬುದರ ಕುರಿತು ಅನ್ವೇಷಣೆ ನಡೆಸುತ್ತಿದ್ದೇವೆ. ಈ ಕುರಿತು ಭಾರತ ಸರ್ಕಾರದೊಂದಿಗೆ ಚರ್ಚಿಸುತ್ತಿದ್ದೇವೆ" ಎಂದು ವಕ್ತಾರರು ತಿಳಿಸಿದ್ದರು.

"ಭಾರತದ ಜನರಿಗೆ ಹಾಗೂ ವಿಶ್ವದ ಇತರೆ ದೇಶಗಳಿಗೆ ಬಯೋಲಾಜಿಕಲ್ ಇ ಲಿಮಿಟೆಡ್ ಸಹಯೋಗದೊಂದಿಗೆ ಏಕ ಡೋಸ್ ಕೊರೊನಾ ಲಸಿಕೆ ಪರಿಚಯಿಸಲು ಈ ಅನುಮೋದನೆ ಒಂದು ಪ್ರಮುಖ ಮೈಲುಗಲ್ಲಾಗಿದೆ" ಎಂದು ಹೇಳಿದೆ. ಬಯೋಲಾಜಿಕಲ್ ಇ ಅನ್ನು ಜಾನ್ಸನ್ ಅಂಡ್ ಜಾನ್ಸನ್ ಜಾಗತಿಕ ಪೂರೈಕೆ ಸರಪಳಿಯ ಪ್ರಮುಖ ಭಾಗವೆಂದು ಪರಿಗಣಿಸಿದ್ದು, ಹಲವು ಸರ್ಕಾರಗಳೊಂದಿಗೆ, ಆರೋಗ್ಯ ಇಲಾಖೆಗಳೊಂದಿಗೆ, ಸಂಸ್ಥೆಗಳೊಂದಿಗೆ ವ್ಯಾಪಕ ಸಹಯೋಗ ಹೊಂದಿರುವುದಾಗಿ ಕಂಪನಿ ತಿಳಿಸಿದೆ.

ಭಾರತದಲ್ಲಿ ಇದೇ ಜನವರಿ 16ರಿಂದ ಬೃಹತ್ ಕೊರೊನಾ ಲಸಿಕೆ ಅಭಿಯಾನ ಆರಂಭಿಸಲಾಗಿದೆ. ಈವರೆಗೂ ಐದು ಕೊರೊನಾ ಲಸಿಕೆಗಳಿಗೆ ಭಾರತದಲ್ಲಿ ಅನುಮೋದನೆ ದೊರೆತಿದೆ. ಸೆರಂ ಇನ್‌ಸ್ಟಿಟ್ಯೂಟ್‌ನ ಕೋವಿಶೀಲ್ಡ್‌, ಭಾರತ್ ಬಯೋಟೆಕ್‌ನ ಕೋವ್ಯಾಕ್ಸಿನ್, ರಷ್ಯಾದ ಸ್ಪುಟ್ನಿಕ್ ಹಾಗೂ ಮಾಡೆರ್ನಾ ಲಸಿಕೆಗಳ ತುರ್ತು ಬಳಕೆಗೆ ಅನುಮೋದನೆ ನೀಡಲಾಗಿತ್ತು. ಇದೀಗ ಐದನೇ ಲಸಿಕೆಯಾಗಿ ಜಾನ್ಸನ್ ಅಂಡ್ ಜಾನ್ಸನ್‌ನ ಲಸಿಕೆ ಸೇರ್ಪಡೆಯಾಗಿದೆ.

ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ದೇಶೀಯ ಲಸಿಕೆಗಳಾಗಿದ್ದು, ಇನ್ನುಳಿದವು ವಿದೇಶಗಳಲ್ಲಿ ಅಭಿವೃದ್ಧಿಯಾಗಿವೆ. ಇವುಗಳ ಸ್ಥಳೀಯ ಉತ್ಪಾದನೆ ಕುರಿತು ಮಾತುಕತೆಗಳು ಮುಂದುವರೆದಿವೆ.

Janssen ಎಂಬ ಲಸಿಕೆಯನ್ನು ಜಾನ್ಸನ್ ಅಂಡ್ ಜಾನ್ಸನ್ ಅಭಿವೃದ್ಧಿಪಡಿಸಿದ್ದು, ಈ ಲಸಿಕೆಗಳ ಕುರಿತು ಇನ್ನಷ್ಟು ಮಾಹಿತಿ ತಿಳಿದುಬರಬೇಕಿದೆ.

ಜಾನ್ಸನ್ & ಜಾನ್ಸನ್ ಸಂಸ್ಥೆಯ ಕೊರೊನಾ ಲಸಿಕೆ ಪಡೆದ ಎಂಟು ತಿಂಗಳ ನಂತರವೂ ಹೆಚ್ಚು ಸಾಂಕ್ರಾಮಿಕವಾಗಿರುವ ಡೆಲ್ಟಾ ರೂಪಾಂತರದ ವಿರುದ್ಧ ಪರಿಣಾಮಕಾರಿ. ಲಸಿಕೆಯು ಕೊರೊನಾ ಸೋಂಕಿನ ರೂಪಾಂತರಗಳ ವಿರುದ್ಧ ಶೇ.85 ರಷ್ಟು ಪರಿಣಾಮಕಾರಿ ಎಂದು ಈಚೆಗೆ ಸಂಸ್ಥೆ ಪ್ರಕಟಿಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+