ದೆಹಲಿಯಲ್ಲಿ ಪತ್ರಕರ್ತನ ಮೇಲೆ ಗುಂಡಿನ ದಾಳಿ: ಸ್ಥಿತಿ ಗಂಭೀರ

ಗಾಜಿಯಾಬಾದ್, ಏಪ್ರಿಲ್ 09: ಹಿಂದಿ ಭಾಷೆಯ ಖಾಸಗಿ ನ್ಯೂಸ್ ಚಾನೆಲ್ ವೊಂದರ ಪತ್ರಕರ್ತರೊಬ್ಬರ ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ ಘಟನೆ ನಿನ್ನೆ(ಏ.9) ರಾತ್ರಿ ದೆಹಲಿ ಸಮೀಪ ಗಾಜಿಯಾಬಾದ್ ನಲ್ಲಿ ನಡೆದಿದೆ.

ಗಂಭೀರ ಸ್ಥಿತಿಯಲ್ಲಿರುವ ಪತ್ರಕರ್ತ ಅನುಜ್ ಚೌಧರಿ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು. ತೀವ್ರ ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ವೈಯಕ್ತಿಕ ದ್ವೇಷದ ಕಾರಣಕ್ಕೆ ಘಟನೆ ನಡೆದಿದೆ ಎಂದು ಅಂದಾಜಿಸಲಾಗಿದ್ದು, ತನಿಖೆ ನಡೆಯುತ್ತಿದೆ. ಪತ್ರಕರ್ತನ ಕುಟುಂಬಸ್ಥರು ಆರೋಪಿಗಳನ್ನು ಗುರುತಿಸಿದ್ದಾರೆ. ಅವರ ಬಂಧನಕ್ಕೆ ಬಲೆಬೀಸಲಾಗಿದೆ.

Journalist who was shot is shifted to ICU

ಚಿಕಿತ್ಸೆ ಪಡೆಯುತ್ತಿರುವ ಪತ್ರಕರ್ತನ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಇತ್ತೀಚೆಗಷ್ಟೆ ಮಧ್ಯಪ್ರದೇಶದಲ್ಲಿ ಮರಳು ಮಾಫಿಯಾ ವರದಿ ತಯಾರಿಸುತ್ತಿದ್ದ ಪತ್ರಕರ್ತರೊಬ್ಬರು ಅಪಘಾತದಲ್ಲಿ ಮೃತರಾದ ಘಟನೆ ನಡೆದಿತ್ತು. ಇದು ಆಕಸ್ಮಿಕ ಅಪಘಾತವಲ್ಲ, ಉದ್ದೇಶಪೂರ್ವಕವಾಗಿ ಮಾಡಿದ್ದು ಎಂಬ ಅನುಮಾನ ಹುಟ್ಟಿತ್ತು. ಈ ಕುರಿತು ತನಿಖೆ ಪ್ರಗತಿಯಲ್ಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+