ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಮುಖ್ಯಮಂತ್ರಿಗಳ ಸಭೆ ಕರೆದ ಪಕ್ಷದ ಅಧ್ಯಕ್ಷ ಜೆ. ಪಿ. ನಡ್ಡಾ

|
Google Oneindia Kannada News

ನವದೆಹಲಿ, ಜುಲೈ 28 : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಪಕ್ಷದ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯನ್ನು ಕರೆದಿದ್ದಾರೆ. ಕೊರೊನಾ ವೈರಸ್ ನಿಯಂತ್ರಣ ಸೇರಿದಂತೆ ವಿವಿಧ ವಿಚಾರಗಳ ಕುರಿತು ರಾಷ್ಟ್ರೀಯ ಅಧ್ಯಕ್ಷರು ಮಾತುಕತೆ ನಡೆಸುವ ನಿರೀಕ್ಷೆ ಇದೆ.

ಬುಧವಾರ ಜೆ. ಪಿ. ನಡ್ಡಾ ಮುಖ್ಯಮಂತ್ರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಮೋದಿ ಸರ್ಕಾರ 2.0: ಪ್ರಧಾನಿಗೆ ಶುಭ ಕೋರಿದ ಜೆಪಿ ನಡ್ಡಾಮೋದಿ ಸರ್ಕಾರ 2.0: ಪ್ರಧಾನಿಗೆ ಶುಭ ಕೋರಿದ ಜೆಪಿ ನಡ್ಡಾ

ರಾಜ್ಯಗಳಲ್ಲಿನ ಕೊರೊನಾ ವೈರಸ್ ನಿಯಂತ್ರಣದ ಕುರಿತು ಬಿಜೆಪಿ ಅಧ್ಯಕ್ಷರು ಮಾಹಿತಿ ಸಂಗ್ರಹ ಮಾಡುವ ನಿರೀಕ್ಷೆ ಇದೆ. ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಶಂಕು ಸ್ಥಾಪನೆ ಮಾಡಲಾಗುತ್ತದೆ. ಈ ಕುರಿತು ಚರ್ಚೆ ನಡೆಸಲಿದ್ದಾರೆ.

ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಜೆಪಿ ನಡ್ಡಾ ಅವಿರೋಧ ಆಯ್ಕೆಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಜೆಪಿ ನಡ್ಡಾ ಅವಿರೋಧ ಆಯ್ಕೆ

JP Nadda Discussions With CM Of All BJP Ruled States On July 29

ಯಡಿಯೂರಪ್ಪ, ಯೋಗಿ ಆದಿತ್ಯನಾಥ್, ಶಿವರಾಜ್ ಸಿಂಗ್ ಚೌವ್ಹಾಣ್, ಪ್ರಮೋದ್ ಸಾವಂತ್ ಸೇರಿದಂತೆ ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬುಧವಾರ ಸಭೆ ನಡೆಯುವ ಸಮಯವನ್ನು ಇನ್ನೂ ನಿಗದಿ ಮಾಡಿಲ್ಲ.

ಬಿಜೆಪಿ ಸರ್ಕಾರ ವರ್ಷ ತುಂಬಿಸಿದ್ದೇ ಒಂದು ಸಾಧನೆ: ಕಾಂಗ್ರೆಸ್ ವ್ಯಂಗ್ಯಬಿಜೆಪಿ ಸರ್ಕಾರ ವರ್ಷ ತುಂಬಿಸಿದ್ದೇ ಒಂದು ಸಾಧನೆ: ಕಾಂಗ್ರೆಸ್ ವ್ಯಂಗ್ಯ

ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯಲು ಜಾರಿಗೊಳಿಸಿರುವ ಅನ್ ಲಾಕ್ 2.0 ಜುಲೈ 30ರಂದು ಅಂತ್ಯಗೊಳ್ಳಲಿದೆ. ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ತೆಗೆದುಕೊಂಡಿರುವ ಕ್ರಮಗಳು, ಮುಂದಿನ ಯೋಜನೆಗಳ ಕುರಿತು ಜೆ. ಪಿ. ನಡ್ಡಾ ಮಾಹಿತಿ ಸಂಗ್ರಹಿಸುವ ಸಾಧ್ಯತೆ ಇದೆ.

English summary
BJP national president J. P. Nadda to hold discussions with chief ministers of all the BJP ruled states on July 29, 2020 via video-conferencing.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X