Delhi: ನ್ಯಾ.ಯಶವಂತ್ ವರ್ಮಾ ನಗದು ಪ್ರಕರಣ: 150 ಕೋಟಿ ರೂ. ಬ್ಯಾಂಕ್ ಸಾಲ ಪಡೆದು ವಂಚನೆ
ದೆಹಲಿ ಮಾರ್ಚ್ 23: ದೆಹಲಿ ಹೈಕೋರ್ಟ್ ನ್ಯಾಯಾಧೀಶ ಯಶವಂತ್ ವರ್ಮಾ ಮನೆಯಲ್ಲಿ ಸಿಕ್ಕ ಅಪಾರ ಪ್ರಮಾಣದ ನಗದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ ಸುಪ್ರೀಂ ಕೋರ್ಟ್ ತನಿಖಾ ತಂಡವನ್ನು ರಚಿಸಿದೆ. ಪ್ರಸ್ತುತ ನ್ಯಾಯಮೂರ್ತಿ ವರ್ಮಾ ಅವರಿಗೆ ಯಾವುದೇ ನ್ಯಾಯಾಂಗ ಕೆಲಸವನ್ನು ನಿಯೋಜಿಸದಂತೆ ತಿಳಿಸಲಾಗಿದೆ.
ವಾಸ್ತವವಾಗಿ ದೆಹಲಿಯಲ್ಲಿರುವ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಮನೆಗೆ ಬೆಂಕಿ ಬಿದ್ದಿತ್ತು. ಬೆಂಕಿಯನ್ನು ನಂದಿಸುವಾಗ ವರ್ಮಾ ಅವರ ಮನೆಯಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿದೆ. ಇದರ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಈ ಪ್ರಕರಣದ ತನಿಖೆಗಾಗಿ ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಆಂತರಿಕ ಸಮಿತಿಯನ್ನು ರಚಿಸಿದ್ದಾರೆ.

ಆದರೀಗ ನ್ಯಾಯಮೂರ್ತಿ ವರ್ಮಾ ಅವರಿಗೆ ಸಂಬಂಧಿಸಿದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ವರ್ಮಾ ಅವರ ಹೆಸರನ್ನು ಸಿಬಿಐ ಎಫ್‌ಐಆರ್‌ನಲ್ಲಿ ನೋಂದಾಯಿಸಿದೆ. ಈ ಪ್ರಕರಣ ಸಿಂಭಾವಲಿ ಸಕ್ಕರೆ ಕಾರ್ಖಾನೆಗೆ ಸಂಬಂಧಿಸಿದ್ದಾಗಿದೆ.
ಹೌದು... ಕೆಲ ವರ್ಷಗಳ ಹಿಂದೆ ಸಿಂಭಾವಲಿ ಶುಗರ್ಸ್ ಲಿಮಿಟೆಡ್ ಎಂಬ ಸಕ್ಕರೆ ಕಾರ್ಖಾನೆಯು ಬ್ಯಾಂಕುಗಳಿಗೆ ವಂಚಿಸಿದ ಆರೋಪ ಮಾಡಲಾಗಿತ್ತು. ಹಾಗಾದರೆ ಸಿಂಭಾವಲಿ ಸಕ್ಕರೆ ಕಾರ್ಖಾನೆಗೂ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರಿಗೂ ಏನು ಸಂಬಂಧ? ಸಕ್ಕರೆ ಕಾರ್ಖಾನೆಗೂ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರಿಗೂ ಇರುವ ನಂಟೇನು?
ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು 2014ರ ಅಕ್ಟೋಬರ್ 13 ರಂದು ಅಲಹಾಬಾದ್ ಹೈಕೋರ್ಟ್‌ನ ನ್ಯಾಯಾಧೀಶರಾಗುವ ಮೊದಲು ಸಿಂಭೋಲಿ ಶುಗರ್ಸ್‌ನಲ್ಲಿ ಕಾರ್ಯನಿರ್ವಾಹಕೇತರ ನಿರ್ದೇಶಕರಾಗಿದ್ದರು. ಈ ಸಿಂಭಾವಲಿ ಶುಗರ್ಸ್‌ನ ಖಾತೆಯನ್ನು 2012 ರಲ್ಲಿ ಎನ್‌ಪಿಎ ಅಂದರೆ ಅನುತ್ಪಾದಕ ಆಸ್ತಿ ಎಂದು ಘೋಷಿಸಲಾಯಿತು. ಆಗ ಸಕ್ಕರೆ ಕಾರ್ಖಾನೆ ರೈತರಿಗೆ ಸಹಾಯ ಮಾಡುವ ಹೆಸರಿನಲ್ಲಿ ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ (ಒಬಿಸಿ)ನಿಂದ 150 ಕೋಟಿ ರೂ. ಸಾಲ ಪಡೆದುಕೊಂಡಿದೆ. ಈ ಅವ್ಯವಹಾರ ತಿಳಿದು ಬ್ಯಾಂಕ್ ಸಿಬಿಐಗೆ ದೂರು ನೀಡಿತ್ತು.

ರೈತರಿಗೆ ಸಹಾಯ ಮಾಡುವ ನೆಪದಲ್ಲಿ ಸಾಲ
ಫೆಬ್ರವರಿ 22, 2018 ರಂದು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಸಿಬಿಐ ಎಫ್‌ಐಆರ್ ದಾಖಲಿಸಿತ್ತು. ಐದು ದಿನಗಳ ನಂತರ ಜಾರಿ ನಿರ್ದೇಶನಾಲಯವು ಫೆಬ್ರವರಿ 27, 2018 ರಂದು ಹಣ ಅಕ್ರಮ ವರ್ಗಾವಣೆ ಕಾಯ್ದೆಯಡಿ ECIR ಅನ್ನು ಸಲ್ಲಿಸಿತ್ತು. ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ (ಒಬಿಸಿ) ನೀಡಿದ ದೂರಿನ ಮೇರೆಗೆ ಈ ಎಫ್‌ಐಆರ್ ದಾಖಲಿಸಲಾಗಿದೆ.
ಸಿಬಿಐನ ಎಫ್‌ಐಆರ್ ರದ್ದುಗೊಳಿಸಲು ಅರ್ಜಿ
ಈ ಪ್ರಕರಣದ ಬಗ್ಗೆ ವಾದ ವಿವಾದ ಆಲಿಸಿದ್ದ ಅಲಹಾಬಾದ್ ಹೈಕೋರ್ಟ್ ಸಿಬಿಐ ದಾಖಲಿಸಿದ್ದ ಎಫ್‌ಐಆರ್ ಅನ್ನು ರದ್ದುಗೊಳಿಸಿತ್ತು. ಎಸ್‌ಬಿಐ ನೇತೃತ್ವದ ಬ್ಯಾಂಕುಗಳ ಒಕ್ಕೂಟವು ಸಿಂಭಾವಲಿ ಶುಗರ್ಸ್‌ಗೆ ನೀಡಿದ ಸಾಲದ ಬಗ್ಗೆ ಅಲಹಾಬಾದ್ ಹೈಕೋರ್ಟ್ ಮತ್ತೊಮ್ಮೆ ಸಿಬಿಐ ತನಿಖೆಗೆ ಆದೇಶಿಸಿತ್ತು. ಆದರೆ ಕಳೆದ ವರ್ಷ ಮಾರ್ಚ್‌ನಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್‌ನ ತೀರ್ಪನ್ನು ರದ್ದುಗೊಳಿಸಿತ್ತು. ಈ ಪ್ರಕರಣದಲ್ಲಿ ತನಿಖೆಯ ಅಗತ್ಯವಿಲ್ಲ ಎಂದು ಸುಪ್ರೀಂ ಹೇಳಿತ್ತು. ವಂಚನೆ ಪ್ರಕರಣದಲ್ಲಿ ಅಧಿಕಾರಿಗಳ ವಿರುದ್ಧ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.
ಬ್ಯಾಂಕಿನ ನಿರ್ಧಾರದಲ್ಲಿ ಯಾವುದೇ ತಪ್ಪಿಲ್ಲ ಎಂದ ಸುಪ್ರೀಂ
ವಿಚಾರಣೆಯ ಸಮಯದಲ್ಲಿ ಸಿಂಭಾವಲಿ ಶುಗರ್ಸ್ ವಿರುದ್ಧದ ಪ್ರಕ್ರಿಯೆಯನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು. ಸಿಂಭಾವಲಿ ಮಾಡಿದ ಇತ್ಯರ್ಥ ಪ್ರಸ್ತಾಪವನ್ನು ತಿರಸ್ಕರಿಸಿದ ಸಿಬಿಐ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿತ್ತು. ಬ್ಯಾಂಕಿನ ನಿರ್ಧಾರದಲ್ಲಿ ಯಾವುದೇ ದೋಷ ಕಂಡುಬರುವುದಿಲ್ಲ ಎಂದು ಎಸ್‌ಸಿ ಹೇಳಿತ್ತು.
ಈ ವಿಷಯ ಬೆಳಕಿಗೆ ಬಂದ ನಂತರ, ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಹೆಸರು ಈಗಾಗಲೇ ಸಕ್ಕರೆ ಕಾರ್ಖಾನೆಗೆ ಸಂಬಂಧಿಸಿದ ವಿವಾದದಲ್ಲಿ ಕೇಳಿಬಂದಿತ್ತು ಮತ್ತು ಈಗ ಅವರ ಮನೆಯಿಂದ ನಗದು ವಶಪಡಿಸಿಕೊಳ್ಳುವ ವಿಷಯ ಬೆಳಕಿಗೆ ಬಂದಿದೆ. ಸಿಬಿಐ ಎಫ್‌ಐಆರ್‌ನಲ್ಲಿ ನ್ಯಾಯಾಧೀಶರ ಹೆಸರನ್ನು ಸೇರಿಸಿರುವುದನ್ನು ಈಗ ಗಂಭೀರವಾಗಿ ಪರಿಗಣಿಸಲಾಗುತ್ತಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications