ನ್ಯಾಯಾಂಗದ ಆಂತರಿಕ ವಿಷಯದಲ್ಲಿ ಮೂಗು ತೂರಿಸಲ್ಲ; ಕೇಂದ್ರ

ನವದೆಹಲಿ, ಜನವರಿ 12: ಇಡೀ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿ ನ್ಯಾಯಾಂಗ ವ್ಯವಸ್ಥೆ ಬಗ್ಗೆ ಅಸಮಾಧನ ಪಡಿಸಿರುವ ನಾಲ್ವರು ಘಟಾನುಘಟಿ ನ್ಯಾಯಮೂರ್ತಿಗಳ ನಡೆ ಬಗ್ಗೆ ಕೇಂದ್ರ ಸರ್ಕಾರ ತನ್ನ ಮೊದಲ ಪ್ರತಿಕ್ರಿಯೆಯನ್ನು ನೀಡಿದೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ಸುದ್ದಿಗೋಷ್ಠಿ ಇದೊಂದು ನ್ಯಾಯಾಂಗದ ಆಂತರಿಕ ವಿಷಯವಾಗಿದೆ. ಇದರಲ್ಲಿ ಯಾವುದೇ ಕಾರಣಕ್ಕೂ ನಾವು ಪ್ರವೇಶ ಮಾಡಲು ಇಷ್ಟಪಡುವುದಿಲ್ಲ ಎಂದು ಕೇಂದ್ರ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.

ನ್ಯಾಯಮೂರ್ತಿ ಚೆಲಮೇಶ್ವರ್, ರಂಜನ್ ಗೊಗೋಯಿ, ಮದನ್ ಲೋಕೂರ್, ಕುರಿಯನ್ ಜೋಸೆಫ್ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಸುಪ್ರೀಂ ಕೋರ್ಟ್ ಆಡಳಿತದ ಬಗ್ಗೆ ಅಸಮಾಧಾನವನ್ನು ಹೊರಹಾಕಿದರು.

Judges Press Meet, Central government refuses to interfere in Judicial Mutiny

ಸೋಹ್ರಾಬುದ್ದಿನ್ ಎನ್ಕೌಂಟರ್ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಸಿಬಿಐ ನ್ಯಾಯಾಲಯದ ನ್ಯಾಯಾಧೀಶ ನ್ಯಾ.ಬಿ.ಎಚ್.ಲೋಯಾ ಅನುಮಾನಾಸ್ಪದ ಸಾವಿನ ಕುರಿತಂತೆ ಹಲವು ಪ್ರೀಂ ಕೋರ್ಟ್ ಆಡಳಿತದ ಹುಳುಕುಗಳನ್ನು ತೆರೆದಿಟ್ಟರು.

ಈ ಸುದ್ದಿಗೋಷ್ಠಿ ಬೆನ್ನಲ್ಲಿಯೇ ಪ್ರಧಾನಿ ನರೇಂದ್ರ ಮೋದಿ ಅವರು ದಿಢೀರ್ ಸುದ್ದಿಗೋಷ್ಠಿ ಕರೆದು ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರ ಜೊತೆ ಚರ್ಚೆ ನಡೆಸಿದರು. ಬಳಿಕ ಪ್ರತಿಕ್ರಿಯಿಸಿ ಇದೊಂದು ನ್ಯಾಯಾಂಗದ ಆಂತರಿಕ ವಿಷಯವಾಗಿದ್ದರಿಂದ ಇದರ ಮಧ್ಯೆ ಪ್ರವೇಶಿಸುವುದಿಲ್ಲವೆಂದು ಸ್ಪಷ್ಟಪಡಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+