ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ಗುಜರಾತ್‌ನಲ್ಲಿ ಜೂನಿಯರ್ ಕ್ಲರ್ಕ್ ನೇಮಕಾತಿ ಪರೀಕ್ಷೆ ರದ್ದು, ಓರ್ವನ ಬಂಧನ

ಜೂನಿಯರ್ ಕ್ಲರ್ಕ್‌ಗಳ ನೇಮಕಾತಿಗಾಗಿ ಗುಜರಾತ್ ಸರ್ಕಾರದ ಸ್ಪರ್ಧಾತ್ಮಕ ಪರೀಕ್ಷೆಯು ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ ಪರೀಕ್ಷೆ ಆರಂಭದ ಕೆಲವೇ ಗಂಟೆಗಳ ಮೊದಲು ರದ್ದುಗೊಂಡಿದೆ.

|
Google Oneindia Kannada News

ಅಹಮದಾಬಾದ್, ಜನವರಿ. 29: ಇನ್ನೇನು ಜೂನಿಯರ್ ಕ್ಲರ್ಕ್‌ಗಳ ಪರೀಕ್ಷೆ ಬರೆಯಲು ತಯಾರಾಗಿ ಹೊರಟ್ಟಿದ್ದ ಉದ್ಯೋಗಾಕಾಂಕ್ಷಿಗಳಿಗೆ ಗುಜರಾತ್ ಸರ್ಕಾರ ಶಾಕ್ ನೀಡಿದ್ದು, ಪರೀಕ್ಷೆ ಆರಂಭವಾಗುವ ಕೆಲವೇ ಗಂಟೆಗಳ ಮೊದಲು ಪರೀಕ್ಷೆಯನ್ನು ರದ್ದುಗೊಳಿಸಿದೆ.

ಜೂನಿಯರ್ ಕ್ಲರ್ಕ್‌ಗಳ ನೇಮಕಾತಿಗಾಗಿ ಗುಜರಾತ್ ಸರ್ಕಾರದ ಸ್ಪರ್ಧಾತ್ಮಕ ಪರೀಕ್ಷೆಯು ಭಾನುವಾರ ನಡೆಯಬೇಕಿತ್ತು. ಆದರೆ, ಪ್ರಶ್ನೆಪತ್ರಿಕೆ ಸೋರಿಕೆಯಿಂದಾಗಿ ಭಾನುವಾರ ನಿಗದಿಯಾದ ಗಂಟೆಗಳ ಮೊದಲು ಪಂಚಾಯತ್ ಪರೀಕ್ಷಾ ಮಂಡಳಿ ಪರೀಕ್ಷೆ ರದ್ದುಗೊಳಿಸಿದೆ. ಘಟನೆ ಸಂಬಂಧ ಶಂಕಿತನನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮಾಹಿತಿ ನೀಡಿದೆ.

ರಾಮಮಂದಿರವಿದೆ. ಆದರೆ, ರಾಮರಾಜ್ಯ ಕಾಣುತ್ತಿಲ್ಲ: ಹಿಂದೂ ಮುಖಂಡ ಪ್ರವೀಣ್ ತೊಗಾಡಿಯಾ ಹೇಳಿದ್ದೇನು?ರಾಮಮಂದಿರವಿದೆ. ಆದರೆ, ರಾಮರಾಜ್ಯ ಕಾಣುತ್ತಿಲ್ಲ: ಹಿಂದೂ ಮುಖಂಡ ಪ್ರವೀಣ್ ತೊಗಾಡಿಯಾ ಹೇಳಿದ್ದೇನು?

ಖಾಲಿಯಿರುವ 1,181 ಹುದ್ದೆಗಳ ಪರೀಕ್ಷೆಗೆ 9.5 ಲಕ್ಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ರಾಜ್ಯಾದ್ಯಂತ 2,995 ಕೇಂದ್ರಗಳಲ್ಲಿ ಭಾನುವಾರ ಪರೀಕ್ಷೆ ನಡೆಯಬೇಕಿತ್ತು.

Junior Clerk Exam Cancelled In Gujarat After Paper Leak

ಭಾನುವಾರ ಬೆಳಗ್ಗೆ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಬಗ್ಗೆ ಪೊಲಿಸರು ಮಾಹಿತಿ ನೀಡಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವ ಸುಳಿವಿನ ಆಧಾರದ ಮೇಲೆ, ಪೊಲೀಸರು ಶಂಕಿತನನ್ನು ಬಂಧಿಸಿ, ಪ್ರಶ್ನೆಪತ್ರಿಕೆ ಪ್ರತಿಯನ್ನು ವಶಪಡಿಸಿಕೊಂಡಿದ್ದಾರೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಹೀಗಾಗಿ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಯನ್ನು "ಮುಂದೂಡಲು" ನಿರ್ಧರಿಸಿರುವುದಾಗಿ ಗುಜರಾತ್ ಪಂಚಾಯತ್ ಸೇವಾ ಆಯ್ಕೆ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಜೂನಿಯರ್ ಕ್ಲರ್ಕ್ (ಆಡಳಿತ / ಲೆಕ್ಕಪತ್ರ) ಪರೀಕ್ಷೆಯನ್ನು ಜನವರಿ 29 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 12 ರವರೆಗೆ ವಿವಿಧ ಜಿಲ್ಲೆಗಳಲ್ಲಿ ನಡೆಸಬೇಕಾಗಿತ್ತು. ಅಭ್ಯರ್ಥಿಗಳಿಗೆ ಆಗಿರುವ ಅನಾನುಕೂಲತೆಗೆ ಮಂಡಳಿ ವಿಷಾದ ವ್ಯಕ್ತಪಡಿಸಿದ್ದು, ಪರೀಕ್ಷಾ ಕೇಂದ್ರಗಳಿಗೆ ಹೋಗದಂತೆ ಸೂಚನೆ ನೀಡಿದೆ. ಜೊತೆಗೆ ಶೀಘ್ರದಲ್ಲೇ ಪರೀಕ್ಷೆಯನ್ನು ನಡೆಸಲಾಗುವುದು, ಇದಕ್ಕಾಗಿ ಮಂಡಳಿಯು ಹೊಸ ದಿನಾಂಕವನ್ನು ಘೋಷಿಸುವುದಾಗಿ ತಿಳಿಸಿದೆ.

"ಕಳೆದ 12 ವರ್ಷಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ಪರೀಕ್ಷೆಯನ್ನು ರದ್ದುಗೊಳಿಸಿರುವ 15 ನೇ ಸರ್ಕಾರಿ ಸ್ಪರ್ಧಾತ್ಮಕ ಪರೀಕ್ಷೆಯಿದು. ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಹೇಳುತ್ತಿದ್ದರೂ ಪ್ರಮುಖ ಆರೋಪಿಗಳನ್ನು ಬಂಧಿಸಿಲ್ಲ. ರಾಜ್ಯದ ಯುವಕರ ಭವಿಷ್ಯದ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ" ಎಂದು ಗುಜರಾತ್ ಕಾಂಗ್ರೆಸ್ ವಕ್ತಾರ ಮನೀಶ್ ದೋಷಿ ಆರೋಪಿಸಿದ್ದಾರೆ.

Junior Clerk Exam Cancelled In Gujarat After Paper Leak

ಗುಜರಾತ್ ಆಮ್ ಆದ್ಮಿ ಪಕ್ಷದ (ಎಎಪಿ) ಅಧ್ಯಕ್ಷ ಇಸುದನ್ ಗಧ್ವಿ ಟ್ವಿಟರ್‌ನಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸರ್ಕಾರವನ್ನು ಗುರಿಯಾಗಿಸಿ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯದಲ್ಲಿ ಕಳೆದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ, ಎಎಪಿಯ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಪರೀಕ್ಷಾ ಪತ್ರಿಕೆಗಳ ಸೋರಿಕೆಯ ವಿರುದ್ಧ ಹತ್ತು ವರ್ಷಗಳ ಜೈಲು ಶಿಕ್ಷೆಯೊಂದಿಗೆ ಕಠಿಣ ಕಾನೂನು ತರುವುದಾಗಿ ಭರವಸೆ ನೀಡಿದ್ದರು.

English summary
Exam Paper Leak: Gujarat government's junior clerks examination was cancelled after its question paper leak and police detained a suspect. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X