ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

CJI DY Chandrachud : ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ಡಿ.ವೈ.ಚಂದ್ರಚೂಡ್ ಪ್ರಮಾಣ ವಚನ

|
Google Oneindia Kannada News

ನವದೆಹಲಿ, ನವೆಂಬರ್ 9: ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರು ಭಾರತದ 50 ನೇ ಮುಖ್ಯ ನ್ಯಾಯಮೂರ್ತಿಯಾಗಿ ಬುಧವಾರ ಅಧಿಕಾರ ವಹಿಸಿಕೊಂಡರು. ಸುಪ್ರೀಂ ಕೋರ್ಟ್‌ನ ಅತ್ಯಂತ ಹಿರಿಯ ನ್ಯಾಯಾಧೀಶರಾದ ನ್ಯಾಯಮೂರ್ತಿ ಚಂದ್ರಚೂಡ್ ಅವರು ಉದಯ್ ಉಮೇಶ್ ಲಲಿತ್ ಅವರ ಉತ್ತರಾಧಿಕಾರಿಯಾಗಿ ಎರಡು ವರ್ಷಗಳ ಅವಧಿಗೆ ಸಿಜೆಐ ಆಗಿ ಸೇವೆ ಸಲ್ಲಿಸಲಿದ್ದಾರೆ.

ನ್ಯಾಯಮೂರ್ತಿ ಚಂದ್ರಚೂಡ್ - ಭಾರತದ ಸುದೀರ್ಘ ಸೇವೆ ಸಲ್ಲಿಸಿದ ಮುಖ್ಯ ನ್ಯಾಯಮೂರ್ತಿ ವೈ ವಿ ಚಂದ್ರಚೂಡ್ ಅವರ ಪುತ್ರ. ಇಂದು ಬೆಳಿಗ್ಗೆ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಮ್ಮುಖದಲ್ಲಿ ಅವರು ಪ್ರಮಾಣ ವಚನ ಬೋಧಿಸಿದರು. ನ್ಯಾಯಮೂರ್ತಿ ಚಂದ್ರಚೂಡ್ ಅವರನ್ನು ಅಕ್ಟೋಬರ್ 11 ರಂದು ಮಾಜಿ ಸಿಜೆಐ ಯುಯು ಲಲಿತ್ ಅವರು ಉನ್ನತ ಹುದ್ದೆಗೆ ಶಿಫಾರಸು ಮಾಡಿದ್ದರು.

Breaking: ನ.9ರಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಆಗಿ ಡಿವೈ ಚಂದ್ರಚೂಡ್Breaking: ನ.9ರಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಆಗಿ ಡಿವೈ ಚಂದ್ರಚೂಡ್

Justice DY Chandrachud takes oath as the new Chief Justice of India

ನ್ಯಾಯಮೂರ್ತಿ ಲಲಿತ್ ಅವರು 74 ದಿನಗಳ ಸಂಕ್ಷಿಪ್ತ ಅವಧಿಯನ್ನು ಹೊಂದಿದ್ದರೆ, ಚಂದ್ರಚೂಡ್ ಅವರು ನವೆಂಬರ್ 10, 2024 ರವರೆಗೆ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.

ನವೆಂಬರ್ 11, 1959 ರಂದು ಜನಿಸಿದ ನ್ಯಾಯಮೂರ್ತಿ ಚಂದ್ರಚೂಡ್ ಅವರು ಮೇ 13, 2016 ರಂದು ಉನ್ನತ ನ್ಯಾಯಾಲಯಕ್ಕೆ ಏರಿದರು. ಅವರು ಅಯೋಧ್ಯೆ ಭೂ ವಿವಾದ, ಖಾಸಗಿತನದ ಹಕ್ಕು ಸೇರಿದಂತೆ ಹಲವು ಸಂವಿಧಾನ ಪೀಠಗಳು ಮತ್ತು ಉನ್ನತ ನ್ಯಾಯಾಲಯದ ಮಹತ್ವದ ತೀರ್ಪುಗಳ ಭಾಗವಾಗಿದ್ದಾರೆ.

Justice DY Chandrachud takes oath as the new Chief Justice of India

ಪ್ರಮಾಣ ವಚನ ಸ್ವೀಕಾರ ಮಾಡುವ ಮುನ್ನ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ನೀಡಿದ ಸಂದರ್ಶನದಲ್ಲಿ, ನ್ಯಾಯಮೂರ್ತಿ ಚಂದ್ರಚೂಡ್ ಅವರು ನ್ಯಾಯಾಂಗ ವ್ಯವಸ್ಥೆಯನ್ನು "ಹೆಚ್ಚು ಸರಳ, ಹೆಚ್ಚು ಪಾರದರ್ಶಕ, ಹೆಚ್ಚು ಪರಿಣಾಮಕಾರಿಯಾಗಿ ಮಾಡುವುದು ತಮ್ಮ ಧ್ಯೇಯವಾಗಿದೆ, ಇದರಿಂದಾಗಿ ನ್ಯಾಯಾಂಗದೊಂದಿಗೆ ಸಾಮಾನ್ಯ ನಾಗರಿಕರ ಸಂಪರ್ಕವು ಸುಲಭ, ಸರಳವಾಗುತ್ತದೆ" ಎಂದಿದ್ದಾರೆ.

English summary
Justice DY Chandrachud takes oath as the 50th Chief Justice of India on Wednesday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X