'ಪ್ರಣಯ್ಗೆ ನ್ಯಾಯ ದೊರಕಿಸಿ': ಫೇಸ್ಬುಕ್ನಲ್ಲಿ ಬೃಹತ್ ಅಭಿಯಾನ
ಮಿರ್ಯಾಲಗುಡ, ಸೆಪ್ಟೆಂಬರ್ 18: ಮೇಲ್ವರ್ಗದ ಯುವತಿಯನ್ನು ಪ್ರೀತಿಸಿ ಮದುವೆಯಾದ ಕಾರಣಕ್ಕೆ ಜೀವ ಕಳೆದುಕೊಂಡ ತೆಲಂಗಾಣದ ಮಿರ್ಯಾಲಗುಡದ ಕ್ರೈಸ್ತ ದಲಿತ ಪ್ರಣಯ್ಗೆ ನ್ಯಾಯ ದೊರಕಿಸಿಕೊಡುವ ಹೋರಾಟಕ್ಕೆ ಸಾಮಾಜಿಕ ಜಾಲತಾಣದಲ್ಲಿ ಜನರೂ ಕೈಜೋಡಿಸಿದ್ದಾರೆ.
'ಜಸ್ಟೀಸ್ ಫಾರ್ ಪ್ರಣಯ್' ಎಂಬ ಫೇಸ್ಬುಕ್ ಪುಟವನ್ನು ತೆರೆಯಲಾಗಿದ್ದು, ಎರಡು ದಿನದಲ್ಲಿಯೇ 80 ಸಾವಿರಕ್ಕೂ ಹೆಚ್ಚು ಮಂದಿ ಪುಟವನ್ನು ಮೆಚ್ಚಿಕೊಂಡಿದ್ದಾರೆ.
ಜಾತಿಯ ಕಾರಣಕ್ಕೆ ತನ್ನ ಪತಿಯನ್ನು ಸಾಯಿಸಿದ ಘಟನೆಯ ವಿರುದ್ಧ ಹೋರಾಟ ನಡೆಸಲು ಅಮೃತಾ ಸಾಮಾಜಿಕ ಜಾಲತಾಣವನ್ನು ಬಳಸಿಕೊಂಡಿದ್ದಾರೆ. ಅವರ ವೈಯಕ್ತಿಕ ಖಾತೆ ಜತೆ ಸಂಪರ್ಕಹೊಂದಿರುವ ಪುಟಕ್ಕೆ ಬೆಂಬಲ ನೀಡಲು ದೇಶದ ಮೂಲೆ ಮೂಲೆಯ ಜನರು ಮುಂದಾಗುತ್ತಿದ್ದಾರೆ.

ತಮಗೆ ಸಂತಾಪಗಳನ್ನು ತಿಳಿಸುವ ಮತ್ತು ಸ್ಥೈರ್ಯ ತುಂಬುವ ಲೆಕ್ಕವಿಲ್ಲದಷ್ಟು ಸಂದೇಶಗಳು ಫೇಸ್ಬುಕ್ನಲ್ಲಿ ಬರುತ್ತಿರುವುದಾಗಿ ಅಮೃತಾ ತಿಳಿಸಿದ್ದಾರೆ. ಪ್ರಣಯ್ ಜಾತಿಪದ್ಧತಿಯನ್ನು ಯಾವಾಗಲೂ ವಿರೋಧಿಸುತ್ತಿದ್ದರು. ಈ ಆಂದೋಲನದ ಮೂಲಕ ಅದಕ್ಕೆ ಅಂತ್ಯ ಕಾಣಿಸಲು ಬಯಸಿರುವುದಾಗಿ ಹೇಳಿದ್ದಾರೆ.
ಪ್ರಣಯ್ ಅವರಿಗೆ ನ್ಯಾಯ ದೊರಕಿಸಿಕೊಡುವಂತೆ ರಾಜ್ಯದಾದ್ಯಂತ ನಡೆದ ಪ್ರತಿಭಟನೆಗಳ ಫೋಟೊಗಳನ್ನು ಈ ಪುಟದಲ್ಲಿ ಪ್ರಕಟಿಸಲಾಗಿದೆ. ಇದಲ್ಲದೆ 'ಜಸ್ಟೀಸ್ ಫಾರ್ ಪ್ರಣಯ್' ಎಂಬ ಶೀರ್ಷಿಕೆಯ ಇನ್ನೂ ಎರಡು ಪುಟಗಳು ಸೃಷ್ಟಿಯಾಗಿವೆ.

ಪುಟವನ್ನು ಇಷ್ಟಪಡುವ ಬಳಕೆದಾರರು ಪ್ರಣಯ್ ಅವರ ಹತ್ಯೆ ಮಾಡಿಸಿದ ಆರೋಪ ಎದುರಿಸುತ್ತಿರುವ ಅಮೃತಾ ಅವರ ತಂದೆ ಮಾರುತಿ ರಾವ್ಗೆ ಗಲ್ಲುಶಿಕ್ಷೆ ವಿಧಿಸುವಂತೆ ಆಗ್ರಹಿಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications