ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲೋಯಾ ಸಾವಿಗೆ ಸಂಬಂಧಿಸಿದ ಪ್ರಕರಣಗಳು ಸುಪ್ರೀಂ ಕೋರ್ಟ್ ಗೆ ವರ್ಗ

By Sachhidananda Acharya
|
Google Oneindia Kannada News

ನವದೆಹಲಿ, ಜನವರಿ 22: ನ್ಯಾಯಮೂರ್ತಿ ಎಚ್.ಬಿ ಲೋಯಾ ಅನುಮಾನಾಸ್ಪದ ಸಾವಿನ ಪ್ರಕರಣವನ್ನು ಬಾಂಬೆ ಹೈಕೋರ್ಟ್ ನಿಂದ ಸುಪ್ರೀಂ ಕೋರ್ಟ್ ಗೆ ವರ್ಗ ಮಾಡಲಾಗಿದೆ.

ಬಾಂಬೆ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದ್ದ ಎರಡು ಪ್ರಕರಣಗಳನ್ನು ಸುಪ್ರೀಂ ಕೋರ್ಟ್ ಗೆ ವರ್ಗಾವಣೆ ಮಾಡಲು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರಿದ್ದ ತ್ರಿಸದಸ್ಯ ನ್ಯಾಯಪೀಠ ಇಂದು ನಿರ್ಧರಿಸಿದೆ.

ನ್ಯಾಯಾಧೀಶ ಲೋಯಾ ಸಾವು 'ಅತ್ಯಂತ ಗಂಭೀರ' ಪ್ರಕರಣ : ಸುಪ್ರಿಂ ಕೋರ್ಟ್ನ್ಯಾಯಾಧೀಶ ಲೋಯಾ ಸಾವು 'ಅತ್ಯಂತ ಗಂಭೀರ' ಪ್ರಕರಣ : ಸುಪ್ರಿಂ ಕೋರ್ಟ್

ಇಂದು ವಿಶೇಷ ಸಿಬಿಐ ನ್ಯಾಯಾಲಯದ ನ್ಯಾಯಾಧೀಶರಾಗಿದ್ದ ಎಚ್.ಬಿ ಲೋಯಾ ಸಾವಿನ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಂದಿನ ವಿಚಾರಣೆಯನ್ನು ಫೆಬ್ರವರಿ ಮೊದಲ ವಾರಕ್ಕೆ ಮುಂದೂಡಿದೆ.

Justice Loya case: Two cases of Bombay HC transferred to Supreme Court, next hearing in February

ಸಾವಿನ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ತಾನು ಪರಿಶೀಲಿಸುವುದಾಗಿ ಸುಪ್ರೀಂ ಕೋರ್ಟ್ ಈ ಸಂದರ್ಭ ಹೇಳಿದೆ.

ವಿಚಾರಣೆ ವೇಳೆ ಹಾಜರಾಗಿದ್ದ ಮಹಾರಾಷ್ಟ್ರ ಪರ ವಕೀಲರು, ಲೋಯಾ ಪ್ರಕರಣವನ್ನು ಎಚ್ಚರಿಕೆಯಿಂದ ತನಿಖೆ ಮಾಡಲಾಗಿದೆ ಎಂದು ಹೇಳಿದ್ದಾರೆ. ಇನ್ನು ಮೂವರು ನ್ಯಾಯಾಧೀಶ ನ್ಯಾಯಪೀಠ ಲೋಯಾ 'ಕಾರ್ಡಿಯಿಕ್ ಅರೆಸ್ಟ್'ನಿಂದ ಸಾವನ್ನಪ್ಪಿದ್ದಾರೆ ಎಂಬ ವಕೀಲರ ಹೇಳಿಕೆಯನ್ನು ದಾಖಲು ಮಾಡಿಕೊಂಡಿದೆ.

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆರೋಪಿಯಾಗಿದ್ದ ಸೊಹ್ರಾಬುದ್ದೀನ್ ಶೇಖ್ ನಕಲಿ ಎನ್ಕೌಂಟರ್ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ವೇಳೆ 48 ವರ್ಷದ ವಿಶೇಷ ಸಿಬಿಐ ನ್ಯಾಯಾಲಯದ ನ್ಯಾಯಾಧೀಶ ಬಿ.ಎಚ್ ಲೋಯಾ 2014ರ ಡಿಸೆಂಬರ್ 1ರಂದು ಸಂಸಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದರು.

ಈ ಸಾವು ಅಸಹಜ ಎಂದು ಅವರ ಕುಟುಂಬಸ್ಥರು ಆರೋಪಿಸಿದ್ದರು. ಮತ್ತು ಲೋಯಾ ಅವರಿಗೆ ದೊಡ್ಡ ಮೊತ್ತದ ಲಂಚದ ಆಮಿಷ ಒಡ್ಡಲಾಗಿತ್ತು ಎಂದು ಅವರ ಸಹೋದರಿ ಆರೋಪಿಸಿದ್ದರು.

English summary
Two cases of Bombay High Court related to Justice Loya's death have been transferred to the Supreme Court. The court directed that no other high court should entertain petitions on the issue.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X