Bandipur: ಕರ್ನಾಟಕ - ಕೇರಳ ಬಂಡೀಪುರ ಸಂಚಾರ: ಪ್ರಿಯಾಂಕಾ ಗಾಂಧಿ ಸರ್ಕಸ್; ಸಚಿವ ನಿತಿನ್ ಗಡ್ಕರಿ ಸಾಥ್
ಬಂಡೀಪುರ: ಬಂಡೀಪುರ ಮಾರ್ಗದಲ್ಲಿ ರಾತ್ರಿ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಕರ್ನಾಟಕ ಹಾಗೂ ಕೇರಳಕ್ಕೆ ಪ್ರಮುಖ ಸಂಚಾರ ಮಾರ್ಗ ಕಲ್ಪಿಸುವ ಬಂಡೀಪುರ ಮಾರ್ಗದಲ್ಲಿ ರಾತ್ರಿ ವೇಳೆ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಕೇರಳ ಸರ್ಕಾರವು ಪ್ರಯತ್ನ ಮಾಡುತ್ತಲ್ಲೇ ಇದೆ. ಅಷ್ಟು ಮಾತ್ರವಲ್ಲ ಕೇರಳ ವಾಯನಾಡ್‌ನ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಸಹ ಸರ್ಕಸ್ ಮಾಡುತ್ತಿದ್ದಾರೆ.
ವಯನಾಡ್‌ನ ಲೋಕಸಭೆ ಉಪ ಚುನಾವಣೆ ಸಂದರ್ಭದಲ್ಲೂ ಈ ವಿಚಾರ ಭಾರೀ ಚರ್ಚೆಗೆ ಕಾರಣವಾಗಿತ್ತು. ಈ ಮಾರ್ಗದಲ್ಲಿ ರಾತ್ರಿ ವೇಳೆ ಸಂಚಾರಕ್ಕೆ ಕೇರಳ ಭಾರೀ ಒತ್ತಡ ತರುತ್ತಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರವು ರಾತ್ರಿ ಸಂಚಾರದ ವೇಳೆ ಕೆಲವೊಂದು ನಿರ್ಬಂಧಗಳನ್ನು ಸಡಿಲ ಮಾಡುವುದಕ್ಕೆ ಮುಂದಾಗಿತ್ತು. ಆದರೆ ಅದಕ್ಕೆ ಕನ್ನಡಿಗರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು.

ಇದೀಗ ಬಂಡೀಪುರ ಮಾರ್ಗದಲ್ಲಿ ರಾತ್ರಿ ಸಂಚಾರ ನಡೆಸಲು ಸುರಂಗ ಮಾರ್ಗ ಸಾಧ್ಯತೆಯ ಬಗ್ಗೆ ಚರ್ಚೆ ನಡೆದಿದೆ. ಅಧ್ಯಯನ ನಡೆಸಲು ಕೇಂದ್ರದಿಂದ ಸಮಿತಿ ರಚನೆ ಮಾಡಲಾಗಿದೆ. ಈಚೆಗೆ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಭೇಟಿ ಮಾಡಿ ಚರ್ಚೆ ಮಾಡಿದ್ದರು. ಇದರ ಬೆನ್ನಲ್ಲೇ ಬಂಡೀಪುರ ಸುರಂಗ ಮಾರ್ಗದ ಚರ್ಚೆ ಮುನ್ನೆಲೆಗೆ ಬಂದಿದೆ.
ಕರ್ನಾಟಕ - ಕೇರಳ ರಾಜ್ಯಗಳನ್ನು ಸಂಪರ್ಕಿಸುವ ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ಪ್ರಯಾಣ ನಿಷೇಧ ಇದೆ. ಈ ಸಮಸ್ಯೆಯನ್ನು ಪರಿಹರಿಸುವುದಕ್ಕಾಗಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇರಿಸಿದೆ. ಆದರೆ ಇದಕ್ಕೆ ಕನ್ನಡಿಗರಿಂದ ವಿರೋಧ ವ್ಯಕ್ತವಾಗುವ ಸಾಧ್ಯತೆಯೂ ಇದೆ. ಬಂಡೀಪುರ ಅರಣ್ಯ ಮಾರ್ಗಕ್ಕೆ ಪರ್ಯಾಯವಾಗಿ ಸುರಂಗ ಮಾರ್ಗ ನಿರ್ಮಿಸುವ ಕಾರ್ಯಸಾಧ್ಯತೆಯನ್ನು ಅಧ್ಯಯನಮಾಡಲು ತಜ್ಞರ ಸಮಿತಿಯನ್ನು ನೇಮಿಸಲಾಗಿದೆ ಎಂದು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ವಯನಾಡಿನ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರಿಗೆ ಮಾಹಿತಿ ನೀಡಿದ್ದಾರೆ. ಪ್ರಿಯಾಂಕಾ ಗಾಂಧಿ ಅವರು ನಿತಿನ್ ಗಡ್ಕರಿ ಅವರಿಗೆ ಕಳೆದ ವರ್ಷದ ಅಕ್ಟೋಬರ್‌ನಲ್ಲಿ ಲಿಖಿತವಾಗಿ ಈ ಬಗ್ಗೆ ಮನವಿ ಸಲ್ಲಿಸಿದ್ದರು ಎಂದು ಹೇಳಲಾಗಿದೆ.
ವಯನಾಡ್‌ನ ಸಂಸದೆಯಾಗಿ ಆಯ್ಕೆಯಾದ ಮೊದಲ ವಾರವೇ ಕರ್ನಾಟಕ - ಕೇರಳ ರಸ್ತೆ ಮಾರ್ಗ ಸಂಚಾರ ಹಾಗೂ ಬಂಡೀಪುರ ರಾತ್ರಿ ಸಂಚಾರದ ವಿಚಾರಗಳ ಬಗ್ಗೆ ಪ್ರಿಯಾಂಕಾ ಗಾಂಧಿ ಅವರು ಕರ್ನಾಟಕ ಕಾಂಗ್ರೆಸ್ ಸರ್ಕಾರದೊಂದಿಗೆ ಮಾತನಾಡಿದ್ದಾರೆ ಎಂದು ಹೇಳಲಾಗಿತ್ತು. ಇನ್ನು ಕೆಲವೇ ದಿನಗಳಲ್ಲಿ ಕೇರಳ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಬಾರಿ ಕೇರಳದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವ ಸಾಧ್ಯತೆಗಳು ದಟ್ಟವಾಗಿವೆ. ಈ ರೀತಿ ಇರುವಾಗಲೇ ಕೇರಳದಲ್ಲಿ ಸಮಸ್ಯೆ ಆಗಿರುವ ಹಾಗೂ ಕೇರಳಿಗರ ಬಹುದಿನಗಳ ಬೇಡಿಕೆಯಾಗಿರುವ ಬಂಡೀಪುರ ಅರಣ್ಯ ಪ್ರದೇಶದ ಸಂಚಾರ ಸಮಸ್ಯೆಗೆ ಪರಿಹಾರ ವಿಚಾರಗಳು ಚರ್ಚೆ ಆಗುತ್ತಿವೆ.
ಬಂಡೀಪುರ ಸಂಚಾರ ಮಾರ್ಗ ಸದ್ಯ ಇರುವ ಪರಿಸ್ಥಿತಿ ಏನು
1. ವನ್ಯಜೀವಿಗಳ ರಕ್ಷಣೆ ಉದ್ದೇಶದಿಂದ ಬಂಡೀಪುರ ಅಭಯಾರಣ್ಯ ಪ್ರದೇಶದಲ್ಲಿ ಕರ್ನಾಟಕ ಸರ್ಕಾರವು ರಾತ್ರಿ ವೇಳೆ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿದೆ.
2. ಕೇರಳಕ್ಕೆ ಬರುವವರು ಹಾಗೂ ಕೇರಳದಿಂದ ಹೋಗುವವರಿಗೆ ಸಮಸ್ಯೆ ಎಂದು ಕೇರಳ ಸರ್ಕಾರ ಆಕ್ಷೇಪ ವ್ಯಕ್ತಪಡಿಸುತ್ತಿದೆ.
3. ಒಂದೊಮ್ಮೆ ಈ ಪ್ರದೇಶದಲ್ಲಿ ವಾಹನಗಳಿಗೆ ಅವಕಾಶ ಕೊಟ್ಟರೆ ಪ್ರಾಣಿಗಳ ಸಾವು ಮತ್ತೆ ಹೆಚ್ಚಾಗಲಿದೆ ಎನ್ನುವುದು ಕರ್ನಾಟಕ ಸರ್ಕಾರದ ವಾದವಾಗಿದೆ.
4. ಪ್ರಿಯಾಂಕಾ ಗಾಂಧಿ ನಿರಂತರ ಪ್ರಯತ್ನ, ಇದೀಗ ಕೇಂದ್ರ ಸರ್ಕಾರದಿಂದಲೂ ಸಹಕಾರ.
5. ಕೇರಳ ವಿಧಾನಸಭೆ ಚುನಾವಣೆ - ಯೋಜನೆ ವೇಗ ಪಡೆದುಕೊಳ್ಳುವ ಸಾಧ್ಯತೆ.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ









Click it and Unblock the Notifications