ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Kaali Poster Row: ಫಿಲಂ ಮೇಕರ್ ಲೀನಾ ಮಣಿಮೇಕಲೈಗೆ ತಾತ್ಕಾಲಿಕ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್‌ !

|
Google Oneindia Kannada News

ನವದೆಹಲಿ, ಜನವರಿ.20: ಕಾಳಿ ದೇವಿಯ ವೇಷ ಧರಿಸಿ ಧೂಮಪಾನ ಮಾಡುತ್ತಿರುವ ಪೋಸ್ಟರ್ ಬಿಡುಗಡೆ ಮಾಡಿ ವಿವಾದಕ್ಕೆ ಸಿಲುಕಿದ್ದ ಫಿಲಂ ಮೇಕರ್ ಲೀನಾ ಮಣಿಮೇಕಲೈ ಅವರಿಗೆ ಸುಪ್ರೀಂ ಕೋರ್ಟ್‌ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಶುಕ್ರವಾರದಂದು ಮಧ್ಯಂತರ ಜಾಮೀನು ಮಂಜೂರು ಮಾಡಿರುವ ಸುಪ್ರೀಂ ಕೋರ್ಟ್‌, ಲೀನಾ ವಿರುದ್ದ ಯಾವುದೇ ಬಲವಂತದ ಕ್ರಮಗಳನ್ನು ಜರುಗಿಸದಂತೆ ಪೋಲಿಸರಿಗೆ ನ್ಯಾಯಾಲಯ ಆದೇಶಿಸಿದೆ ಎಂದು indiatoday.in ವರದಿ ಮಾಡಿದೆ.

 ವಿಕಿಪೀಡಿಯಾದಂತಹ ಆನ್‌ಲೈನ್ ಮೂಲಗಳು ನಂಬಿಕೆಗೆ ಅರ್ಹವಲ್ಲ: ಸುಪ್ರೀಂ ಕೋರ್ಟ್‌ ಹೇಳಿದ್ದೇನು? ವಿಕಿಪೀಡಿಯಾದಂತಹ ಆನ್‌ಲೈನ್ ಮೂಲಗಳು ನಂಬಿಕೆಗೆ ಅರ್ಹವಲ್ಲ: ಸುಪ್ರೀಂ ಕೋರ್ಟ್‌ ಹೇಳಿದ್ದೇನು?

ಮಣಿಮೇಕಲೈ ಅವರು ಕಳೆದ ವಾರವಷ್ಟೇ ತಮ್ಮ ವಿರುದ್ಧ ವಿವಿಧ ರಾಜ್ಯಗಳಲ್ಲಿ ದಾಖಲಾಗಿರುವ ಹಲವಾರು ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಮತ್ತು ಈ ಎಫ್‌ಐಆರ್‌ಗಳಿಂದ ಉಂಟಾಗುವ ಕ್ರಿಮಿನಲ್ ಪ್ರಕ್ರಿಯೆಗಳಿಗೆ ತಡೆ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು.

Kali poster row: Supreme Court has given a temporary relive to filmmaker Leena Manimekalai

ಈಗಾಗಲೇ ದಾಖಲಾಗಿರುವ ಎಫ್‌ಐಆರ್‌ಗಳ ಆಧಾರದ ಮೇಲೆ ಅಥವಾ ಅದೇ ವಿಷಯಕ್ಕೆ ಸಂಬಂಧಿಸಿದಂತೆ ದಾಖಲಿಸಬಹುದಾದ ಯಾವುದೇ ಎಫ್‌ಐಆರ್‌ಗೆ ಅನುಗುಣವಾಗಿ ಲೀನಾ ವಿರುದ್ಧ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.

ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶದಿಂದ ಪೋಸ್ಟರ್ ಬಿಡುಗಡೆ ಮಾಡಲಾಗಿಲ್ಲ. ಈ ಘಟನೆಯಿಂದ ಲೀನಾ ಮತ್ತು ಕುಟುಂಬಸ್ಥರಿಗೆ ಬೆದರಿಕೆ ಕರೆಗಳು ಬರಲಾರಂಭಿಸಿದ್ದು, ಅವರಿಗೆ ಕಾನೂನಿನ ಚೌಕಟ್ಟಿನಲ್ಲಿ ಸೂಕ್ತ ರಕ್ಷಣೆ ನೀಡುವಂತೆ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ.ಎಸ್ ನರಸಿಂಹ ಅವರ ನೇತೃತ್ವದ ಪೀಠವು ಆದೇಶ ಹೊರಡಿಸಿದೆ.

ದೆಹಲಿ, ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಮಧ್ಯಪ್ರದೇಶ ರಾಜ್ಯಗಳು ಸೇರಿದಂತೆ ವಿವಿಧೆಡೆ ದಾಖಲಾಗಿರುವ ಎಫ್‌ಐಆರ್‌ಗಳನ್ನು ಒಂದೇ ಸ್ಥಳದಲ್ಲಿ ಕ್ರೋಢೀಕರಿಸುವಂತೆ ನ್ಯಾಯಾಲಯವು ನೋಟಿಸ್ ಜಾರಿಗೊಳಿಸಿತು. ಚಿತ್ರ ನಿರ್ಮಾಪಕಿ ಲೀನಾ ಮಣಿಮೇಕಲೈ ಪರ ವಕೀಲ ಕಾಮಿನಿ ಜೈಸ್ವಾಲ್ ವಾದ ಮಂಡಿಸಿದರು.

ಟ್ವಿಟರ್ ಈ ಪೋಸ್ಟ್ ಅನ್ನು ಹಿಂತೆಗೆದುಕೊಂಡಾಗ, ಲೀನಾ ವಿರುದ್ಧ ಸೆಕ್ಷನ್ 153A (ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು ಮತ್ತು ಸಾಮರಸ್ಯವನ್ನು ಕಾಪಾಡಿಕೊಳ್ಳಲು ಪೂರ್ವಾಗ್ರಹ ಪೀಡಿತ ಕೃತ್ಯಗಳನ್ನು ಮಾಡುವುದು) ಮತ್ತು 295A (ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ವಿರುದ್ಧ ಎಫ್‌ಐಆರ್‌ಗಳನ್ನು ದಾಖಲಿಸಲಾಗಿತ್ತು.

English summary
The Supreme Court has granted interim bail to film maker Leena Manimekalai, who was embroiled in controversy after releasing a poster in which she dressed as Goddess Kali and was smoking.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X