Get Updates
Get notified of breaking news, exclusive insights, and must-see stories!

Breaking : ಕಲ್ಲಕುರಿಚಿ ಬಾಲಕಿ ಸಾವು, ಸುಪ್ರೀಂಗೆ ಪೋಷಕರ ಅರ್ಜಿ

ಚೆನ್ನೈ, ಜುಲೈ 19: ತಮಿಳುನಾಡಿನ ಕಲ್ಲಕುರಿಚಿ ಬಾಲಕಿಯ ಸಾವು ಪ್ರಕರಣ ಸುಪ್ರೀಂಕೋರ್ಟ್‌ಗೆ ತಲುಪಿದೆ. ಮರು ಮರಣೋತ್ತರ ಪರೀಕ್ಷೆ ನಡೆಸುವ ಕುರಿತು ಬಾಲಕಿಯ ಪೋಷಕರು ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿಸಿದೆ.

ಮರು ಮರಣೋತ್ತರ ಪರೀಕ್ಷೆ ನಡೆಸುವ ತಂಡದಲ್ಲಿ ತಮ್ಮ ಆಯ್ಕೆಯ ವೈದ್ಯಕೀಯ ತಜ್ಞರನ್ನು ಸೇರಿಸಿಕೊಳ್ಳುವಂತೆ ಕೋರಿ ಕಲ್ಲಕುರಿಚಿ ಬಾಲಕಿಯ ಪೋಷಕರು ಅರ್ಜಿ ಸಲ್ಲಿಸಿದ್ದರು. ಇದನ್ನು ತುರ್ತು ವಿಚಾರಣೆಗೆ ತೆಗೆದುಕೊಳ್ಳುವಂತೆ ಮನವಿ ಮಾಡಲಾಗಿತ್ತು. ಈ ಮನವಿಗೆ ಸುಪ್ರೀಂಕೋರ್ಟ್ ಒಪ್ಪಿದೆ.

ಇದರ ಜೊತೆಗೆ ಮೃತ ಬಾಲಕಿಯ ತಂದೆಯ ಮನವಿಗೆ ಪ್ರತಿಕ್ರಿಯೆಯಾಗಿ, ಮದ್ರಾಸ್ ಹೈಕೋರ್ಟ್ ಆದೇಶದ ಮರು ಮರಣೋತ್ತರ ಪರೀಕ್ಷೆಗೆ ಮಧ್ಯಂತರ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದೆ.

Kallakurichi girl death case: Supreme Court agrees to hear petition by parents

ತಮಿಳುನಾಡಿನ ಕಲ್ಲಕುರಿಚಿ ಬಳಿಯ ಚಿನ್ನ ಸೇಲಂನಲ್ಲಿರುವ ಖಾಸಗಿ ಹೈಯರ್ ಸೆಕೆಂಡರಿ ಶಾಲೆಯ 12 ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಶಿಕ್ಷಕರ ಚಿತ್ರಹಿಂಸೆಗೆ ಒಳಗಾಗಿ ಮಂಗಳವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಪಿಸಲಾಗುತ್ತಿದೆ. ಶವಪರೀಕ್ಷೆಯಲ್ಲಿ ವಿದ್ಯಾರ್ಥಿಯ ಮೈಮೇಲೆ ಗಾಯಗಳು ಮತ್ತು ರಕ್ತಸ್ರಾವ ಕಂಡುಬಂದಿದೆ.

ಶಾಲಾ ಬಾಲಕಿಯ ಸಾವಿಗೆ ನ್ಯಾಯಕ್ಕಾಗಿ ಆಗ್ರಹಿಸಿ ಅನೇಕ ಪ್ರತಿಭಟನೆಗಳು ನಡೆದಿದ್ದವು. ಪ್ರಕರಣದಲ್ಲಿ ಇಬ್ಬರು ಶಿಕ್ಷಕರನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಇದುವರೆಗೆ ಐವರು ಶಿಕ್ಷಕರು ಹಾಗೂ ಅಧಿಕಾರಿಗಳನ್ನು ವಶಕ್ಕೆ ಪಡೆಯಲಾಗಿದೆ. ಬಾಲಕಿ ಸಾವು ಖಂಡಿಸಿ ಭಾನುವಾರ ಪ್ರತಿಭಟನೆ ನಡೆಸುವ ವೇಳೆ ಹಿಂಸಾಚಾರ ನಡೆದಿತ್ತು.

ಕಲ್ಲಕುರಚಿಯಲ್ಲಿ ಭಾನುವಾರ ನಡೆದಿದ್ದ ಪ್ರತಿಭಟನೆ, ಸಾರ್ವಜನಿಕ ಆಸ್ತಿ-ಪಾಸ್ತಿ ನಷ್ಟದ ವಿಚಾರದಲ್ಲಿ ಮದ್ರಾಸ್ ಹೈಕೋರ್ಟ್ ಪೊಲೀಸ್ ಇಲಾಖೆ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿತ್ತು. ಗಲಭೆಕೋರರನ್ನು ಪತ್ತೆ ಮಾಡಲು ಎಸ್‌ಐಟಿ ರಚನೆ ಮಾಡುವಂತೆ ಕೋರ್ಟ್ ಆದೇಶ ನೀಡಿತ್ತು.

ನ್ಯಾಯಮೂರ್ತಿ ಎಸ್. ಸತೀಶ್ ಕುಮಾರ್ ಅವರಿದ್ದ ಪೀಠದ ಮುಂದೆ ಬಾಲಕಿಯ ತಂದೆ ಪಿ. ರಾಮಲಿಂಗಂ ಪ್ರಕರಣದ ತನಿಖೆಯನ್ನು ಸಿಬಿ-ಸಿಐಡಿಗೆ ವಹಿಸುವಂತೆ ಮನವಿ ಮಾಡಿದ್ದರು. ಸರ್ಕಾರ ಪ್ರಕರಣದ ತನಿಖೆಯನ್ನು ಸಿಬಿ-ಸಿಐಡಿಗೆ ವಹಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+