Get Updates
Get notified of breaking news, exclusive insights, and must-see stories!

Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್‌ಗೆ ಕಮಲ್ ಹಾಸನ್ ತಿರುಗೇಟು

Kamal Haasan: ನಟ, ರಾಜ್ಯಸಭಾ ಸದಸ್ಯ ಕಮಲ್ ಹಾಸನ್ ಅವರು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ತಿರುಗೇಟು ನೀಡಿದ್ದು, ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ ಎಂದು ಸೂಕ್ಷ್ಮವಾಗಿ ಹೇಳಿದ್ದಾರೆ. ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಡೊನಾಲ್ಡ್‌ ಟ್ರಂಪ್ ಬಗ್ಗೆ ಕಮಲ್ ಹಾಸನ್ ಅವರು ಬರೆದಿರುವ ಬರಹವು ವೈರಲ್ ಆಗುತ್ತಿದೆ.

ಭಾರತವು ತೈಲ ಖರೀದಿ ಮಾಡುವ ವಿಚಾರವಾಗಿ ಅಮೆರಿಕ ನೀಡುತ್ತಿರುವ ಹೇಳಿಕೆಗಳು ಭಾರೀ ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ರಷ್ಯಾದಿಂದ ತೈಲ ಖರೀದಿ ಮಾಡುವುದಕ್ಕೆ ಭಾರತಕ್ಕೆ 30 ದಿನಗಳ ವಿನಾಯಿತಿ ನೀಡಲಾಗಿದೆ ಎನ್ನುವ ವಿಚಾರವು ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ರಷ್ಯಾದಿಂದ ತೈಲ ಖರೀದಿ ಮಾಡಲು ಅಮೆರಿಕವು ಭಾರತದ ಮೇಲೆ ಹೇರಿದ್ದ ನಿರ್ಬಂಧ ತೆಗೆದುಹಾಕಲಾಗಿದ್ದು, ಖರೀದಿಗೆ 30 ದಿನಗಳ ತಾತ್ಕಾಲಿಕ ವಿನಾಯಿತಿ ನೀಡಿರುವ ವಿಚಾರದ ಬಗ್ಗೆ ನಟ, ರಾಜಕಾರಣಿ ಕಮಲ್‌ ಹಾಸನ್ ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

Kamal Haasan

ಈ ಸಂಬಂಧ ಸೋಷಿಯಲ್ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕಮಲ್ ಹಾಸನ್ ಅವರು, ಆತ್ಮೀಯ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರೇ, ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟನ್ನು ಮಾತ್ರ ನೋಡಿಕೊಳ್ಳಿ. ನಿಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಸ್ವಂತ ವ್ಯವಹಾರಗಳ ಕಡೆ ಗಮನಹರಿಸಿ. ನಾವು ಭಾರತೀಯರು, ಸ್ವತಂತ್ರ ಮತ್ತು ಸಾರ್ವಭೌಮ ರಾಷ್ಟ್ರಕ್ಕೆ ಸೇರಿದವರಾಗಿದ್ದೇವೆ. ನಾವು ಇನ್ಮುಂದೆ ದೂರ ತೀರದ ವಿದೇಶಿ ರಾಷ್ಟ್ರಗಳ ಆದೇಶಗಳನ್ನು ಪಾಲನೆ ಮಾಡುವುದಿಲ್ಲ. ಸಾರ್ವಭೌಮ ರಾಷ್ಟ್ರಗಳ ನಡುವಿನ ಪರಸ್ಪರ ಗೌರವದಿಂದ ಮಾತ್ರ ವಿಶ್ವದಲ್ಲಿ ಶಾಂತಿ ನೆಲಸಲು ಸಾಧ್ಯವಾಗುತ್ತದೆ ಎಂದು ಕಮಲ್ ಹಾಸನ್ ಅವರು ಹೇಳಿದ್ದಾರೆ.

ನಿಮ್ಮ ದೇಶ (ಅಮೆರಿಕ) ಮತ್ತು ಅಲ್ಲಿನ ಜನರ ಶಾಂತಿ ಮತ್ತು ಸಮೃದ್ಧಿಯನ್ನು ನಾವು ಬಯಸುತ್ತೇವೆ ಎಂದೂ ಕಮಲ್ ಪೋಸ್ಟ್‌ನಲ್ಲಿ ಬರೆದಿದ್ದಾರೆ. ಈ ಪೋಸ್ಟ್‌ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಅವರು ಈ ವಿಷಯಕ್ಕೆ ಪ್ರತಿಕ್ರಿಯೆ ನೀಡಬೇಕು ಎಂದು ಹಲವರು ಆಗ್ರಹಿಸಿದ್ದಾರೆ.

Kamal Haasan ಏನಿದು ಅಮೆರಿಕ ಹೇಳಿಕೆ ಚರ್ಚೆ

ಇನ್ನು ಅಮೆರಿಕ ಸರ್ಕಾರದ ಭಾಗವಾಗಿರುವವರು ನೀಡಿರುವ ಹೇಳಿಕೆಗಳು ಈಚೆಗೆ ಭಾರೀ ಚರ್ಚೆಗೆ ಕಾರಣವಾಗುತ್ತಿದೆ. ಅಮೆರಿಕ, ಇಸ್ರೇಲ್ Vs ಇರಾನ್ ದೇಶದ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯಾದಲ್ಲಿ ಸಂಕಷ್ಟ ಎದುರಾಗಿದೆ. ಇದರ ಪರಿಣಾಮವು ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳ ಮೇಲಾಗಿದೆ. ಪಶ್ಚಿಮ ಏಷ್ಯಾ ಯುದ್ಧ ಮುಂದುವರಿಯುತ್ತಿರುವುದರಿಂದ ತೈಲದ ಕೊರತೆ ಎದುರಾಗುವ ಆತಂಕ ಎದುರಾಗಿದೆ.

ಇದನ್ನು ತಪ್ಪಿಸುವ ಉದ್ದೇಶದಿಂದ ಭಾರತದ ತೈಲ ಸಂಸ್ಕರಣ ಕಂಪನಿಗಳು ರಷ್ಯಾದಿಂದ ಕಚ್ಚಾ ತೈಲ ಮತ್ತು ಪೆಟ್ರೋಲಿಯಂ ಉತ್ಪನ್ನಗಳನ್ನು ಮಾರ್ಚ್‌ 5ರಿಂದ ಅನ್ವಯವಾಗುವಂತೆ ಮುಂದಿನ ಒಂದು ತಿಂಗಳ ಅವಧಿಗೆ ಖರೀದಿಸಬಹುದು. ಇದಕ್ಕೆ ಅನುಮತಿ ನೀಡಲಾಗಿದೆ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್‌ ಬೆಸೆಂಟ್‌ ಹೇಳಿದ್ದರು. ಈ ವಿಷಯವು ಇದೀಗ ಭಾರತದಲ್ಲಿ ಭಾರೀ ರಾಜಕೀಯ ಚರ್ಚೆಗೂ ಕಾರಣವಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+