Stories Of Strength : ನೆಗೆಟಿವ್ ಬಂತೆಂದು ಎಚ್ಚರ ತಪ್ಪದಿರಿ ಎಂದ ಕಂಗನಾ
ಬಾಲಿವುಡ್ ನಟಿ ಕಂಗನಾ ರನೌತ್ ಇನ್‌ಸ್ಟಾಗ್ರಾಂನಲ್ಲಿ ಅಭಿಮಾನಿಗಳೊಂದಿಗೆ ಕೊರೊನಾವೈರಸ್ ವಿರುದ್ಧದ ತಮ್ಮ ಹೋರಾಟದ ಹಾದಿಯ ಬಗ್ಗೆ ಹಂಚಿಕೊಂಡಿದ್ದಾರೆ. ಈ ವಿಡಿಯೋ ಜೊತೆಗೆ ಅಭಿಮಾನಿಗಳಲ್ಲಿಯೂ ತಮ್ಮ ಅನುಭವವನ್ನು ಹಂಚಿಕೊಳ್ಳುವಂತೆ ಕಂಗನಾ ಮನವಿ ಮಾಡಿದ್ದಾರೆ.
ಕಳೆದ ತಿಂಗಳು ಕೊರೊನಾ ವೈರಸ್‌ಗೆ ತುತ್ತಾಗಿದ್ದ ಕಂಗನಾ ಕೊರೊನಾವೈರಸ್‌ನಿಂದ ಚೇತರಿಸಿಕೊಂಡ ನಂತರ ಉಂಟಾದ ಅನುಭವವನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಕೊರೊನಾವೈರಸ್ ನೆಗೆಟಿವ್ ವರದಿ ಬಂದ ಬಳಿಕ ಎಚ್ಚರ ತಪ್ಪದಂತೆಯೂ ಮನವಿ ಮಾಡಿದ್ದಾರೆ.
ತನ್ನ ಇತ್ತೀಚಿನ ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಕಂಗನಾ ಈ ಬಗ್ಗೆ ಸಂಪೂರ್ಣವಾಗಿ ವಿವರಿಸಿದ್ದಾರೆ. "ನಾನು ಕೊರೊನಾ ವೈರಸ್‌ನಿಂದ ಚೇತರಿಸಿಕೊಂಡ ನಂತರ ಉಂಟಾದ ಅನುಭವವಗಳ ಬಗ್ಗೆ ಇಲ್ಲಿ ಮಾತನಾಡುತ್ತೇನೆ. ಈ ಅವಧಿಯಲ್ಲಿ ನಾನು ಆಘಾತಕಾರಿ ಸನ್ನಿವೇಶಗಳನ್ನು ಎದುರಿಸಿದೆ. ಬೇರೆ ಯಾವುದೇ ಅನಾರೋಗ್ಯಕ್ಕೆ ಒಳಗಾಗಿ ಚೇತರಿಸಲು ಆರಂಭಿಸಿದರೆ ನಂತರ ಅದು ನಿರಂತರವಾಗಿ ಚೇತರಿಕೆ ಕಾಣುತ್ತಾ ಸಾಗುವುದನ್ನು ನಾನು ಕಂಡಿದ್ದೇನೆ. ಆದರೆ ಕೊರೊನಾವೈರಸ್ ವಿಚಾರದಲ್ಲಿ ಅದು ನಕಲಿ ಚೇತರಿಕೆ" ಎಂದಿದ್ದಾರೆ.

"ಕೊರೊನಾ ನೆಗೆಟಿವ್ ವರದಿ ಬಂದ ಬಳಿಕ ನಾನು ಹಿಂದಿನ ರೀತಿ ಚಟುವಟಿಕೆ ಆರಂಭಿಸಬಹುದು, ವರ್ಕ್‌ಔಟ್, ಶೂಟಿಂಗ್‌ನಲ್ಲಿ ಭಾಗಿಯಾಗಬಹುದು ಎಂದು ಭಾವಿಸಿದೆ. ಆದರೆ ಈ ಚಟುವಟಿಕೆಗಳಲ್ಲಿ ನಾನು ಭಾಗಿಯಾಗಲು ಆರಂಭಿಸಿದ ನಂತರ ನನ್ನ ಆರೋಗ್ಯ ಉತ್ತಮವಾಗಿಲ್ಲ ಎಂಬ ಅರಿವಾಯಿತು. ಈ ಸಂದರ್ಭದಲ್ಲಿ ನಾನು ಹಾಸಿಗೆಯನ್ನೂ ಹಿಡಿಯಬೇಕಾಯಿತು" ಎಂದು ಹೇಳಿದ್ದಾರೆ ಕಂಗನಾ.
"ಇದು ಕೇವಲ ಒಂದು ಬಾರಿಯಲ್ಲ ಈ ಅವಧಿಯಲ್ಲಿ ನಾನು ನಾಲ್ಕರಿಂದ ಐದು ಬಾರಿ ಈ ರೀತಿಯ ಅನುಭವಕ್ಕೆ ಒಳಗಾಗಿದ್ದೇನೆ. ನಾನು ಕೊರೊನಾ ವೈರಸ್ ಪರೀಕ್ಷೆ ನೆಗೆಟಿವ್ ಬಂದು ನಾಳೆಗೆ 14 ದಿನಗಳು ಆಗಲಿದೆ" ಎಂದು ಹೇಳಿರುವ ಕಂಗನಾ ಈ ಕೊರೊನಾವೈರಸ್‌ನಿಂದ ಚೇತರಿಕೆ ಕಂಡ ನಂತರವೂ ವಿಶ್ರಾಂತಿಯ ಅಗತ್ಯವಿದೆ ಎಂದು ವಿವರಿಸಿದ್ದಾರೆ.
ಕೊರೊನಾವೈರಸ್‌ನ ಪರಿಣಾಮಗಳು ಚೇತರಿಕೆ ಕಂಡ ನಂತರವೂ ಬಾಧಿಸಬಹುದು. ಉಸಿರಾಟದ ಸಮಸ್ಯೆ, ಹೃದಯಾಘಾತ, ಅಂಗಾಂಗಗಳ ವೈಫಲ್ಯ ಸೇರಿದಂತೆ ಇನ್ನೂ ಹಲವು ಸಮಸ್ಯೆಗಳು ಕಾಡಬಹುದು ಎಂದು ಹೇಳಿರುವ ಕಂಗನಾ ರನೌತ್ ಈ ವೈರಸ್‌ಅನ್ನು ಹಗುರವಾಗಿ ಪರಿಗಣಿಸಬೇಡಿ ಎಂದು ಹೇಳಿದ್ದಾರೆ. ಅಗತ್ಯ ಪ್ರಮಾಣದಲ್ಲಿ ವಿಶ್ರಾಂತಿಯನ್ನು ಪಡೆಯಿರಿ. ಇಲ್ಲವಾದರೆ ಪರಿಸ್ಥಿತಿ ಕೆಟ್ಟದಾಗಬಹುದು ಎಂದು ಅಭಿಮಾನಿಗಳಿಗೆ ಕಂಗನಾ ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ









Click it and Unblock the Notifications