ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಕಿಚ್ಚ ಸುದೀಪ್: ಪತ್ರದಲ್ಲೇನಿದೆ?
ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದೆ. ದೇಶದ ನಾಗರೀಕರು, ರಾಜಕೀಯ ನಾಯಕರು ಹಾಗೂ ಸಿನಿಮಾ ನಟ, ನಟಿಯವರು ಒಗ್ಗಟ್ಟಿನಿಂದ ಭಾರತೀಯ ಸೇನೆಯ ಪರ ನಿಂತಿದ್ದಾರೆ. ಇದೀಗ ನಟ ಸುದೀಪ್, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಕೊಂಡಾಡಿದ್ದಾರೆ. ಮೋದಿ ಅವರು ಈ ಹಿಂದೆ ತಮಗೆ ಬರೆದ ಪತ್ರದ ಬಗ್ಗೆಯೂ ಸುದೀಪ್ ಉಲ್ಲೇಖ ಮಾಡಿದ್ದಾರೆ.
ಏಪ್ರಿಲ್ 22 ರಂದು ಪಹಲ್ಗಾಮ್ ದಾಳಿ ಆಗಿದ್ದಾಗ ಗಟ್ಟಿ ಧ್ವನಿಯಲ್ಲಿ ದಾಳಿಯನ್ನು ಖಂಡಿಸಿದ್ದ ಸುದೀಪ್, ಆ ಬಳಿಕ ಭಾರತ ಸೇನೆ ಮಾಡಿದ್ದ ಆಪರೇಷನ್ ಸಿಂಧೂರ್ ಅನ್ನು ಕೊಂಡಾಡಿದ್ದರು. ನಾವು ಸೈನ್ಯದ ಪರ ಇರುವುದಾಗಿ ಹೇಳಿದ್ದರು. ಇದೀಗ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಪರಿಸ್ಥಿತಿ ನಿರ್ಮಾಣ ಆಗಿರುವ ಸಮಯದಲ್ಲಿ ನಟ ಸುದೀಪ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ನನ್ನ ತಾಯಿ ಸರೋಜಾ ಸಂಜೀವ್ ಅವರು ನಿಧನರಾದಾಗ ನೀವು ಬರೆದ ಪತ್ರ, ವೈಯಕ್ತಿಕ ನಷ್ಟದ ಆ ಕಠಿಣ ಸಮಯದಲ್ಲಿ ನನಗೆ ಶಕ್ತಿ, ಧೈರ್ಯವನ್ನು ತುಂಬಿತ್ತು. ಅದು ನನಗೆ ಜೀವನ ಪರ್ಯಂತ ನೆನಪು ಉಳಿಯಲಿವೆ. ಇಂದು ನಾನು ಈ ಪತ್ರವನ್ನು ಕೇವಲ ಒಬ್ಬ ಮಗನಾಗಿ ಬರೆಯುತ್ತಿಲ್ಲ ಬದಲಿಗೆ ದೇಶದ ನಾಗರೀಕನಾಗಿ ಬರೆಯುತ್ತಿದ್ದೇನೆ ಎಂದು ಹೇಳಿದ್ದಾರೆ.

ಪಾಕಿಸ್ತಾನಕ್ಕೆ ತಕ್ಕ ಉತ್ತರವನ್ನ ಭಾರತ ನೀಡಿದ್ದು, ಆಪರೇಷನ್ ಸಿಂಧೂರ್‌ನ ವಿಜಯೋತ್ಸವಕ್ಕೆ ರಾಷ್ಟ್ರವೇ ನಮಿಸಿದೆ. ನಾನು ನಿಮಗೆ ಆಳವಾದ ಅಭಿಮಾನದಿಂದ ಬರೆಯುತ್ತೇನೆ. ಆಪರೇಷನ್ ಸಿಂಧೂರ್ ಕೇವಲ ಪ್ರತಿಕ್ರಿಯೆಯಾಗಿರಲಿಲ್ಲ, ಅದೊಂದು ಹೇಳಿಕೆಯಾಗಿತ್ತು. ಭಾರತವು ಅಲುಗಾಡುವುದಿಲ್ಲ, ಭಾರತವು ಮರೆಯುವುದಿಲ್ಲ ಮತ್ತು ಭಾರತವು ಯಾವಾಗಲೂ ಉದಯಿಸುತ್ತದೆ ಎಂಬ ದಿಟ್ಟ, ನಿರ್ಣಾಯಕ ಸಂದೇಶವನ್ನು ಜಗತ್ತಿಗೆ ನೀಡಿದೆ ಎಂದು ಸುದೀಪ್ ಅವರು ಹೇಳಿದ್ದಾರೆ.
ಸುದೀಪ್ ಬರೆದ ಪತ್ರದಲ್ಲೇನಿದೆ?
ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರೇ, ನಮಸ್ಕಾರ ಮೊದಲಿಗೆ, ನನ್ನ ತಾಯಿ ಶ್ರೀಮತಿ ಸರೋಜಾ ಸಂಜೀವ್ ಅವರ ನಿಧನಕ್ಕೆ ನೀವು ಕಳುಹಿಸಿದ ಪತ್ರ, ವೈಯಕ್ತಿಕ ನಷ್ಟದ ಆ ಕಠಿಣ ಸಮಯದಲ್ಲಿ ನನಗೆ ಶಕ್ತಿ, ಧೈರ್ಯವನ್ನು ತುಂಬಿತ್ತು. ಜೀವನಪರ್ಯಂತ ನಾನು ಅದನ್ನು ಮರೆಯಲಾರೆ. ಇಂದು ನಾನು ಈ ಪತ್ರವನ್ನು ಕೇವಲ ಒಬ್ಬ ಮಗನಾಗಿ ಬರೆಯುತ್ತಿಲ್ಲ ಬದಲಿಗೆ ಈ ದೇಶದ ಹೆಮ್ಮೆಯ ನಾಗರೀಕನಾಗಿ ಬರೆಯುತ್ತಿದ್ದೇನೆ, ಇಡೀ ದೇಶ ನಿಮಗೆ ಆಪರೇಷನ್ ಸಿಂದೂರದ ಯಶಸ್ಸಿಗೆ ಅಭಿನಂದನೆಗಳನ್ನು ಹೇಳುತ್ತಿದೆ. ಆ ಪೈಕಿ ನಾನು ಕೂಡ ನಿಮ್ಮ ಈ ಕಾರ್ಯವನ್ನು ಮೆಚ್ಚಿಕೊಂಡಿದ್ದು ಇದು ಕೇವಲ ಪ್ರತಿಕ್ರಿಯೆಯಾಗಿರಲಿಲ್ಲ ಬದಲಿಗೆ ಇದೊಂದು ಹೇಳಿಕೆಯಾಗಿತ್ತು ಎಂದು ಭಾವಿಸುತ್ತೇನೆ.
ಭಾರತವು ಹಿಂಜರಿಯುವುದಿಲ್ಲ, ಭಾರತವು ಮರೆಯುವುದಿಲ್ಲ ಮತ್ತು ಭಾರತವು ಯಾವಾಗಲೂ ಮೇಲಿರುತ್ತದೆ. ಕೇವಲ ಪದಗಳಿಂದ ಮಾರ್ಗದರ್ಶನ ಮಾಡದೆ, ದೃಢ ನಿಶ್ಚಯದಿಂದ ಮಾರ್ಗದರ್ಶನ ಮಾಡುವ ನಾಯಕನನ್ನು ನಾವು ನೋಡುತ್ತಿದ್ದೇವೆ. ಪ್ರತಿಯೊಬ್ಬ ಕನ್ನಡಿಗ ಮತ್ತು ಇಡೀ ಕನ್ನಡ ಚಲನಚಿತ್ರೋದ್ಯಮವು ನಿಮ್ಮೊಂದಿಗೆ ದೃಢವಾಗಿ ನಿಂತಿದೆ. ನಿಮ್ಮ ಧೈರ್ಯದಿಂದ ಸ್ಫೂರ್ತಿ ಪಡೆಯುತ್ತೇವೆ. ನಿಮ್ಮ ನಾಯಕತ್ವದಲ್ಲಿ, ನಮ್ಮ ರಕ್ಷಣಾ ಪಡೆಗಳು ಅಪ್ರತಿಮ ನಿಖರತೆ, ಶಿಸ್ತು ಮತ್ತು ಶೌರ್ಯವನ್ನು ಪ್ರದರ್ಶಿಸಿವೆ. ಅವರ ಯಶಸ್ಸು ನಮ್ಮ ಹೆಮ್ಮೆ. ನಾವೆಲ್ಲರೂ ಒಂದೇ, ಧ್ವನಿಯೂ ಒಂದೇ, ಒಂದೇ ರಾಷ್ಟ್ರವಾಗಿ ಒಗ್ಗಟ್ಟಿನಿಂದ ನಿಂತಿದ್ದೇವೆ ಎಂದು ನಟ ಸುದೀಪ್ ಅವರು ತಿಳಿಸಿದ್ದಾರೆ.
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ












Click it and Unblock the Notifications