ಫ್ಲೈ ಬಸ್‌ಗಾಗಿ ಕಣ್ಣೂರು ಏರ್‌ಪೋರ್ಟ್‌ನಿಂದ ಕೆಎಸ್ಆರ್‌ಟಿಸಿಗೆ ಪತ್ರ
ಬೆಂಗಳೂರು, ಜೂನ್ 04 : 2018ರ ಡಿಸೆಂಬರ್‌ನಲ್ಲಿ ಆರಂಭವಾಗ ಕೇರಳದ ಕಣ್ಣೂರು ವಿಮಾನ ನಿಲ್ದಾಣ ಪ್ರಯಾಣಿಕರ ಮೆಚ್ಚುಗೆಗೆ ಪಾತ್ರವಾಗಿದೆ. ವಿಮಾನ ನಿಲ್ದಾಣಕ್ಕೆ ಫ್ಲೈ ಬಸ್ ಆರಂಭಿಸಬೇಕು ಎಂದು ವಿಮಾನ ನಿಲ್ದಾಣ ಕೆಎಸ್ಆರ್‌ಟಿಸಿಗೆ ಪತ್ರ ಬರೆದಿದೆ.
ಕರ್ನಾಟಕದ ಮೈಸೂರು, ಕೊಡಗು ಜಿಲ್ಲೆಗಳಿಂದ ಕಣ್ಣೂರು ವಿಮಾನ ನಿಲ್ದಾಣವನ್ನು ಸಂಪರ್ಕಿಸಲು ಫ್ಲೈ ಬಸ್ ಸೇವೆ ಆರಂಭಿಸಿ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್‌ಟಿಸಿ) ಗೆ ಕೇರಳದ ಕಣ್ಣೂರು ವಿಮಾನ ನಿಲ್ದಾಣ ಮನವಿ ಮಾಡಿದೆ.
2018ರಲ್ಲಿ ಕಣ್ಣೂರು ವಿಮಾನ ನಿಲ್ದಾಣ ಆರಂಭವಾಗಿದ್ದು ಕೇರಳ ಮತ್ತು ಕರ್ನಾಟಕ-ಕೇರಳ ಗಡಿ ಭಾಗದ ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ಸಿಕ್ಕಿದೆ. ಕಣ್ಣೂರು, ಕಾಸರಗೋಡು, ವಯನಾಡು, ಕೋಯಿಕ್ಕೋಡ್, ಕೊಡಗು, ಮೈಸೂರು ಭಾಗದ ಪ್ರಯಾಣಿಕರಿಗೆ ವಿಮಾನ ನಿಲ್ದಾಣದಿಂದ ಅನುಕೂಲವಾಗಿದೆ.
ಕೆಎಸ್ಆರ್‌ಟಿಸಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನೇರವಾಗಿ ಸಂಪರ್ಕ ಕಲ್ಪಿಸಲು ಫ್ಲೈ ಬಸ್ ಸೇವೆಯನ್ನು ಆರಂಭಿಸಿದೆ. ಮೈಸೂರು, ಮಣಿಪಾಲ್, ಮಂಗಳೂರು ಸೇರಿದಂತೆ ವಿವಿಧ ನಗರಗಳಿಂದ ನೇರವಾಗಿ ಜನರ ವಿಮಾನ ನಿಲ್ದಾಣ ತಲುಪಬಹುದಾಗಿದೆ.

ಪತ್ರದಲ್ಲಿ ಏನಿದೆ?
ಕಣ್ಣೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮೈಸೂರು, ಕೊಡಗು ಪ್ರಯಾಣಿಕರಿಗೆ ಅನುಕೂಲವಾಗುವಂತೆ ಫ್ಲೈ ಬಸ್ ಸೇವೆಯನ್ನು ಆರಂಭಿಸಬೇಕು ಎಂದು ಕಣ್ಣೂರು ವಿಮಾನ ನಿಲ್ದಾಣ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್‌ಟಿಸಿ)ಗೆ ಪತ್ರ ಬರೆದಿದೆ.

ಕರ್ನಾಟಕ-ಕೇರಳ ಗಡಿಯಲ್ಲಿದೆ
ಕಣ್ಣೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕರ್ನಾಟಕದ ವಿವಿಧ ನಗರಗಳಿಗೂ ಹತ್ತಿರದಲ್ಲಿದೆ. ವಿರಾಜಪೇಟೆಯಿಂದ 58 ಕಿ.ಮೀ., ಮಡಿಕೇರಿಯಿಂದ 90 ಕಿ.ಮೀ. ಮತ್ತು ಮೈಸೂರಿನಿಂದ 158 ಕಿ.ಮೀ.ದೂರದಲ್ಲಿದೆ.

ಬೆಂಗಳೂರು ನಿಲ್ದಾಣ ಬಳಸುತ್ತಿದ್ದರು
ಕಣ್ಣೂರು ವಿಮಾನ ನಿಲ್ದಾಣ ಆರಂಭವಾಗುವ ಮೊದಲು ಮೈಸೂರು, ಮಡಿಕೇರಿ ಭಾಗದ ಪ್ರಯಾಣಿಕರು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬಳಸುತ್ತಿದ್ದರು. ಈಗ ಅವರು ಕಣ್ಣೂರು ವಿಮಾನ ನಿಲ್ದಾಣ ಬಳಸುತ್ತಿದ್ದಾರೆ.

2018ರಲ್ಲಿ ಏರ್ ಪೋರ್ಟ್ ಆರಂಭ
1,900 ಎಕರೆ ಪ್ರದೇಶದಲ್ಲಿ ಕಣ್ಣೂರು ವಿಮಾನ ನಿಲ್ದಾಣವನ್ನು ನಿರ್ಮಾಣ ಮಾಡಲಾಗಿದೆ. 2018ರ ಡಿಸೆಂಬರ್‌ನಲ್ಲಿ ನಿಲ್ದಾಣ ಕಾರ್ಯಾರಂಭ ಮಾಡಿದ್ದು, ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
-
ಏಪ್ರಿಲ್ 9ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್ -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ












Click it and Unblock the Notifications