ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಇಳಿಕೆ

ನವದೆಹಲಿ, ಅಕ್ಟೋಬರ್ 20: ಸತತ ಏಳೆಂಟು ತಿಂಗಳುಗಳ ಬಳಿಕ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಇಳಿಮುಖವಾಗಿದೆ.

ಕರ್ನಾಟಕ ಸೇರಿದಂತೆ ಕೇರಳ, ಆಂಧ್ರ ಪ್ರದೇಶ, ತಮಿಳುನಾಡು ಮತ್ತು ಮಹಾರಾಷ್ಟ್ರಗಳಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಪ್ರಮಾಣ ಕಡಿಮೆಯಾಗುತ್ತಿದೆ.

ಅಂದರೆ ಭಾರತದಲ್ಲಿ ಸಕ್ರಿಯ ಕೇಸುಗಳು ಇಳಿಕೆಯಾಗುವ ಲಕ್ಷಣ ಕಾಣುತ್ತಿದ್ದು, ಕಳೆದ ಮೂರು ದಿನಗಳಿಂದ ಸಕ್ರಿಯ ಕೇಸುಗಳು 8 ಲಕ್ಷಕ್ಕಿಂತ ಕಡಿಮೆ ತೋರಿಸುತ್ತಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

Karnataka Among 5 States Shows Declining Trend In Covid-19 Cases

ಭಾರತದಲ್ಲಿ ಕಳೆದೊಂದು ವಾರದಿಂದ ಹೊಸ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಯುತ್ತಿದೆ. ಭಾರತದಲ್ಲಿ ಇಂದು 46,791 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 587 ಮಂದಿ ಮೃತಪಟ್ಟಿದ್ದಾರೆ.

ಒಟ್ಟು 75,97,064 ಪ್ರಕರಣಗಳಿವೆ, ಸಕ್ರಿಯ ಪ್ರಕರಣಗಳು 7,48,538, 67,33,329 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೂ 1,15,197 ಮಂದಿ ಸಾವನ್ನಪ್ಪಿದ್ದಾರೆ. ತೆಲಂಗಾಣದಲ್ಲಿ ಇಂದು 1486 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 7 ಮಂದಿ ಮೃತಪಟ್ಟಿದ್ದಾರೆ, 1891 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

ಮಹಾರಾಷ್ಟ್ರ, ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ಅತಿ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಭಾರತದಲ್ಲಿ ಸಕ್ರಿಯ ಪ್ರಕರಣಗಳು ಕೂಡ ಕಡಿಮೆಯಾಗುತ್ತಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+