ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಇಳಿಕೆ

|
Google Oneindia Kannada News

ನವದೆಹಲಿ, ಅಕ್ಟೋಬರ್ 20: ಸತತ ಏಳೆಂಟು ತಿಂಗಳುಗಳ ಬಳಿಕ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಇಳಿಮುಖವಾಗಿದೆ.

ಕರ್ನಾಟಕ ಸೇರಿದಂತೆ ಕೇರಳ, ಆಂಧ್ರ ಪ್ರದೇಶ, ತಮಿಳುನಾಡು ಮತ್ತು ಮಹಾರಾಷ್ಟ್ರಗಳಲ್ಲಿ ಕೊರೊನಾ ಸಕ್ರಿಯ ಪ್ರಕರಣಗಳ ಪ್ರಮಾಣ ಕಡಿಮೆಯಾಗುತ್ತಿದೆ.

ಭಾರತದಲ್ಲಿ ಹೊಸ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಇಳಿಕೆಭಾರತದಲ್ಲಿ ಹೊಸ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಇಳಿಕೆ

ಅಂದರೆ ಭಾರತದಲ್ಲಿ ಸಕ್ರಿಯ ಕೇಸುಗಳು ಇಳಿಕೆಯಾಗುವ ಲಕ್ಷಣ ಕಾಣುತ್ತಿದ್ದು, ಕಳೆದ ಮೂರು ದಿನಗಳಿಂದ ಸಕ್ರಿಯ ಕೇಸುಗಳು 8 ಲಕ್ಷಕ್ಕಿಂತ ಕಡಿಮೆ ತೋರಿಸುತ್ತಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

Karnataka Among 5 States Shows Declining Trend In Covid-19 Cases

ಭಾರತದಲ್ಲಿ ಕಳೆದೊಂದು ವಾರದಿಂದ ಹೊಸ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಇಳಿಯುತ್ತಿದೆ. ಭಾರತದಲ್ಲಿ ಇಂದು 46,791 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 587 ಮಂದಿ ಮೃತಪಟ್ಟಿದ್ದಾರೆ.

ಒಟ್ಟು 75,97,064 ಪ್ರಕರಣಗಳಿವೆ, ಸಕ್ರಿಯ ಪ್ರಕರಣಗಳು 7,48,538, 67,33,329 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೂ 1,15,197 ಮಂದಿ ಸಾವನ್ನಪ್ಪಿದ್ದಾರೆ. ತೆಲಂಗಾಣದಲ್ಲಿ ಇಂದು 1486 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 7 ಮಂದಿ ಮೃತಪಟ್ಟಿದ್ದಾರೆ, 1891 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.

ಶೇ 50 ಜನಸಂಖ್ಯೆಗೆ ಕೊರೊನಾ ಸೋಂಕು: ಸಮಿತಿ ಹೇಳಿಕೆಯನ್ನು ಪ್ರಶ್ನಿಸಿದ ವಿಜ್ಞಾನಿಗಳುಶೇ 50 ಜನಸಂಖ್ಯೆಗೆ ಕೊರೊನಾ ಸೋಂಕು: ಸಮಿತಿ ಹೇಳಿಕೆಯನ್ನು ಪ್ರಶ್ನಿಸಿದ ವಿಜ್ಞಾನಿಗಳು

Recommended Video

Corona ರೋಗದ ಮೊದಲನೇ ಲಕ್ಷಣ ನೆಗಡಿ | Oneindia Kannada

ಮಹಾರಾಷ್ಟ್ರ, ಕರ್ನಾಟಕ, ಕೇರಳ, ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ಅತಿ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗುತ್ತಿವೆ. ಭಾರತದಲ್ಲಿ ಸಕ್ರಿಯ ಪ್ರಕರಣಗಳು ಕೂಡ ಕಡಿಮೆಯಾಗುತ್ತಿವೆ.

English summary
Covid-19 cases in India have been on a steady decline over the past two-three weeks and the central government is ecstatic about the progress the country has made to contain the highly-contagious virus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X