ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೆಕೆ, ಸೆಕೆ: ಕರ್ನಾಟಕ, ದೆಹಲಿಯಲ್ಲಿ 45 ಡಿಗ್ರಿ ಸೆಲ್ಸಿಯಸ್ ತಲುಪಿದ ಉಷ್ಣಾಂಶ

|
Google Oneindia Kannada News

ನವದೆಹಲಿ, ಮೇ 24: ಕರ್ನಾಟಕ ಹಾಗೂ ದೆಹಲಿಯಲ್ಲಿ ದಿನದಿಂದ ದಿನಕ್ಕೆ ಬಿಸಿಲು ಹೆಚ್ಚಾಗುತ್ತಿದ್ದು, ಕೆಲವೇ ದಿನಗಳಲ್ಲಿ ಗರಿಷ್ಠ ಉಷ್ಣಾಂಶ 46 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆಯಾಗಲಿದೆ.

ಬಿಸಿ ಗಾಳಿ ಬೀಸುತ್ತಿದೆ. ಇದೇ ಮೇ 29ರಷ್ಟೊತ್ತಿಗೆ ಉಷ್ಣಾಂಶ ಮತ್ತಷ್ಟು ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.ಹವಾಮಾನ ಇಲಾಖೆಯ ಮಾಹಿತಿಯಂತೆ ಗನಿಷ್ಠ ಉಷ್ಣಾಂಶ 26 ಹಾಗೂ ಗರಿಷ್ಠ ಉಷ್ಣಾಂಶ 45 ಡಿಗ್ರಿ ಸೆಲ್ಸಿಯಸ್ ಇದೆ.

ಅಂಫಾನ್: ಬಂಗಾಳದಲ್ಲಿ ಮೋದಿ ವೈಮಾನಿಕ ಸಮೀಕ್ಷೆ, 1000 ಕೋಟಿ ನೆರವುಅಂಫಾನ್: ಬಂಗಾಳದಲ್ಲಿ ಮೋದಿ ವೈಮಾನಿಕ ಸಮೀಕ್ಷೆ, 1000 ಕೋಟಿ ನೆರವು

ಮುಂದಿನ 4 ದಿನಗಳಲ್ಲಿ ದೆಹಲಿಯ ಗರಿಷ್ಠ ಉಷ್ಣಾಂಶ 46 ಡಿಗ್ರಿ ಸೆಲ್ಸಿಯಸ್ ಆಗಲಿದೆ. ಜೊತೆಗೆ ಗುಡುಗು, ಸಿಡಿಲಿನಿಂದ ಕೂಡಿದ ಮಳೆಯೂ ಬರುವ ಸಾಧ್ಯತೆ ಇದೆ.

Karnataka And Delhi Temperature Likely To Exceed 45 Degree

ದೆಹಲಿಯಲ್ಲಿ ವಾಯು ಮಾಲಿನ್ಯ ಕೂಡ ಏರಿಕೆಯಾಗುತ್ತಿದೆ. ಇನ್ನು ಪಶ್ಚಿಮ ಬಂಗಾಳದಲ್ಲಿ ಅಂಫಾನ್ ಚಂಡಮಾರುತ ಅಪ್ಪಳಿಸಿದ್ದರೂ ಪಶ್ಚಿಮ ಬಂಗಾಳ, ಬಾಂಗ್ಲಾದೇಶ, ಕೊಲ್ಕತ್ತ ಇತರೆ ಪ್ರದೇಶಗಳನ್ನು ಹೊರತುಪಡಿಸಿ ಮತ್ತೆಲ್ಲೂ ಅದರ ಪರಿಣಾಮ ಗೋಚರಿಸಿಲ್ಲ. ಕರ್ನಾಟಕದ ಹಲವೆಡೆ ಮೋಡಕವಿದ ವಾತಾವರಣ ನಿರ್ಮಾಣವಾಗುತ್ತ ಮಳೆಯಾಗುವ ಮುನ್ಸೂಚನೆ ಇದೆ.

ಕಲಬುರಗಿಯಲ್ಲಿ 44.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, , ಕೊಪ್ಪಳ, ರಾಯಚೂರು, ವಿಜಯಪುರ, ಶಿವಮೊಗ್ಗ, ಬಳ್ಳಾರಿ, ತುಮಕೂರು, ಮಂಡ್ಯ, ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ , ಗರಿಷ್ಠ 35 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.

English summary
Karnataka, Delhi and its adjoining regions will not get relief from the scorching heat till May 29 as the temperature is likely to be above 45 degrees Celsius for the next few days, predicted India Meteorological Department (IMD).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X