ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಸೆಂಬರ್ 10ರಂದು ಬೃಹತ್ ರೈತ ಸಮಾವೇಶ : ಬಿಜೆಪಿ

|
Google Oneindia Kannada News

ಬೆಂಗಳೂರು, ಡಿಸೆಂಬರ್ 02: ಜೆಡಿಎಸ್ -ಕಾಂಗ್ರೆಸ್ ಸರ್ಕಾರದ ವೈಫಲ್ಯ ಖಂಡಿಸಿ ಡಿಸೆಂಬರ್ 10ರಂದು ಬೃಹತ್ ರೈತ ಸಮಾವೇಶ ನಡೆಸಲು ರಾಜ್ಯ ಬಿಜೆಪಿ ತೀರ್ಮಾನಿಸಿದೆ.

ಪಕ್ಷದ ಶಾಸಕಾಂಗ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಕೃಷಿ ಸಾಲ ಮನ್ನಾ, ಕಬ್ಬು ಬೆಳೆಗಾರರ ಬಾಕಿ ಪಾವತಿ, ಭತ್ತ ಸೇರಿದಂತೆ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ನಿಗದಿ ಪಡಿಸದಿರುವುದನ್ನು ವಿರೋಧಿಸಿ ಬೆಳಗಾವಿಯಲ್ಲಿ ಸಮಾವೇಶ ನಡೆಸಲಾಗುವುದು ಎಂದರು.

ಮೈತ್ರಿ ಸರ್ಕಾರದಲ್ಲಿ ಭಾಗಿಯಾಗಿರುವ ಜೆಡಿಎಸ್ ಮತ್ತು ಕಾಂಗ್ರೆಸ್ ವಿಧಾನಸಭಾ ಚುನಾವಣಾ ಪೂರ್ವ ನೀಡಿದ ಭರವಸೆಗಳನ್ನು ಅಧಿಕಾರಕ್ಕೆ ಬಂದ ನಂತರ ಈಡೇರಿಸಿಲ್ಲ.

Karnataka BJP to organise Farmers Rally on Dec 10

ಸಾಲ ಮನ್ನಾ ಬಗ್ಗೆ ದಿನನಿತ್ಯ ಮುಖ್ಯಮಂತ್ರಿ ಅವರು ರೈತರ ಕಿವಿಗೆ ಹೂವಿಡುವ ಕೆಲಸ ಮಾಡುತ್ತಿದ್ದಾರೆ. ಅಧಿಕಾರಕ್ಕೆ ಬಂದು 6 ತಿಂಗಳು ಕಳೆದರೂ ಕೃಷಿ ಸಾಲ ಮನ್ನಾ ಮಾಡಿಲ್ಲ, ಕಬ್ಬು ಬೆಳೆಗಾರರ ಸಮಸ್ಯೆ ಪರಿಹರಿಸುವಲ್ಲಿ ಸರ್ಕಾರ ವಿಫಲವಾಗಿದೆ. ಇವೆಲ್ಲವೂ ಸೇರಿದಂತೆ ಸರ್ಕಾರದ ಗಮನ ಸೆಳೆಯಲು ರೈತ ಸಮಾವೇಶ ಹಮ್ಮಿಕೊಳ್ಳಲಾಗಿದೆ, ಸಭೆಯಲ್ಲಿ ಒಂದು ಲಕ್ಷ ರೈತರು ಭಾಗವಹಿಸಲಿದ್ದಾರೆ ಎಂದರು.

ಪಕ್ಷದ ವಕ್ತಾರ ಅರವಿಂದ ಲಿಂಬಾವಳಿ ಮಾತನಾಡಿ, ಡಿಸೆಂಬರ್ 3, 4 ಮತ್ತು 5ರಂದು ಬಿಜೆಪಿಯ ಆರು ತಂಡಗಳು ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಕೊಡಗು ಜಿಲ್ಲೆಯಲ್ಲಿ ಉಂಟಾದ ಅತಿವೃಷ್ಟಿ ಹಾನಿಗೆ ಕೇಂದ್ರ ಬಿಡುಗಡೆ ಮಾಡಿದ ಆರ್ಥಿಕ ನೆರವಿನ ಬಳಕೆ ಕುರಿತು ಅಧ್ಯಯನ ನಡೆಸಲಿದೆ ಎಂದರು.

ಒಂದೊಂದು ತಂಡಗಳ ನೇತೃತ್ವವನ್ನು ಜಗದೀಶ್ ಶೆಟ್ಟರ್, ಕೆ.ಎಸ್. ಈಶ್ವರಪ್ಪ, ಆರ್.ಅಶೋಕ್, ಶ್ರಿನಿವಾಸ ಪೂಜಾರ್, ಕೇಂದ್ರ ಸಚಿವರಾದ ರಮೇಶ್ ಜಿಗಜಿಣಗಿ, ಸದಾನಂದ ಗೌಡ ಅವರುಗಳು ವಹಿಸಲಿದ್ದಾರೆ.

English summary
Karnataka BJP to organise statewide Farmers Rally on Dec 10 to condemn the JDS-Congress alliance government policies towards agriculture. BJP demanded HD Kumaraswamy to implement the assurance given to the farmers.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X