ರಾಹುಲ್ ಗಾಂಧಿ ಮದುವೆ ಯಾಕೆ ಆಗಿಲ್ಲ ಗೊತ್ತಾ? ನಾಲಗೆ ಹರಿಬಿಟ್ಟ ನಳಿನ್ ಕುಮಾರ್ ಕಟೀಲ್

ಕೋವಿಡ್ 19 ಲಸಿಕೆ ಹಾಕಿಸಿಕೊಳ್ಳಬೇಡಿ ಎಂದ ವಿಪಕ್ಷ ನಾಯಕರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕೊರೊನಾ ಲಸಿಕೆ ತೆಗೆದುಕೊಂಡರೆ ಮಕ್ಕಳಾಗುವುದಿಲ್ಲ ಎಂದು ಹೇಳಿಕೆ ನೀಡಿದ್ದ ವಿಪಕ್ಷ ನಾಯಕರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟಾಂಗ್ ಕೊಟ್ಟಿದ್ದಾರೆ. ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಅವರನ್ನು ಟೀಕಿಸಿದ್ದಾರೆ.

ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ ಕೋವಿಡ್ 19 ಲಸಿಕೆ ಹಾಕಿಸಿಕೊಳ್ಳಬೇಡಿ ಹಾಕಿಸಿಕೊಂಡರೆ ಮಕ್ಕಳಾಗುವುದಿಲ್ಲ ಎಂದು ಜನರಿಗೆ ಹೇಳಿದರು. ಅದು ಬಂಜೆತನಕ್ಕೆ ಕಾರಣವಾಗುತ್ತದೆ ಎಂದು ಹೇಳಿದರು. ಆದರೆ ಅವರೇ ಅದನ್ನು ರಹಸ್ಯವಾಗಿ ತೆಗೆದುಕೊಂಡರು. ಹೀಗಾಗಿ ನಮ್ಮ ಎಂಎಲ್‌ಸಿ ಮಂಜುನಾಥ್ ಅವರು ಹೇಳಿದರು, ಲಸಿಕೆ ತೆಗೆದುಕೊಂಡಿದ್ದರಿಂದ ರಾಹುಲ್ ಗಾಂಧಿ ಮದುವೆಯಾಗುತ್ತಿಲ್ಲ. ಏಕೆಂದರೆ ಅವರಿಗೆ ಮಕ್ಕಳಾಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

 Karnataka BJP President Nalin Kumar Kateel makes controversial Comments on Rahul Gandhi and Congress

ಕಳೆದ ತಿಂಗಳು ಇಟಲಿಯ ದಿನಪತ್ರಿಕೆ 'ಕೊರಿಯರ್ ಡೆಲ್ಲಾ ಸೆರಾ'ಕ್ಕೆ ನೀಡಿದ ಸಂದರ್ಶನದಲ್ಲಿ ರಾಹುಲ್ ಗಾಂಧಿ ಅವರು ತಮ್ಮ ಮದುವೆ ಕುರಿತಂತೆ ಪ್ರಶ್ನೆ ಎದುರಿಸಿದ್ದರು. ಮದುವೆ ಬಗ್ಗೆ ಸ್ಪಷ್ಟವಾಗಿ ಹೇಳದೆ ಹೋದರೂ ಅವರು ತಮಗೆ ಮಕ್ಕಳನ್ನು ಹೊಂದುವ ಬಯಕೆ ಇದೆ ಎಂದು ಹೇಳಿಕೊಂಡಿದ್ದಾರೆ.

ನೀವು ಇದುವರೆಗೂ ಏಕೆ ಮದುವೆಯಾಗಿಲ್ಲ ಎಂಬ ಪ್ರಶ್ನೆಗೆ ರಾಹುಲ್, "ಇದು ಬಹಳ ವಿಚಿತ್ರ... ನನಗೂ ಗೊತ್ತಿಲ್ಲ. ಅನೇಕ ಕೆಲಸಗಳನ್ನು ಮಾಡಬೇಕಿದೆ. ಆದರೆ ನನಗೆ ಮಕ್ಕಳನ್ನು ಪಡೆಯುವ ಬಯಕೆ ಇದೆ" ಎಂದು ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+