Karnataka Cabinet Expansion: ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್: ಇವರಿಗೆ ಸಚಿವ ಸ್ಥಾನ ಸಿಗುವುದು ಕನ್ಫರ್ಮ್!
Karnataka Cabinet Expansion: ಕರ್ನಾಟಕದಲ್ಲಿ ಶೀಘ್ರವೇ ಸಚಿವ ಸಂಪುಟ ವಿಸ್ತರಣೆ ಆಗುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದರೂ ಸಹ ಬಾಕಿ 20 ಸಚಿವ ಸ್ಥಾನಗಳಿಗೆ ಯಾರನ್ನೂ ಆಯ್ಕೆ ಮಾಡಿಲ್ಲ. 20ಕ್ಕೂ ಇಲಾಖೆಗಳನ್ನು ಇದೀಗ ಸಚಿವ ಡಿ.ಕೆ ಶಿವಕುಮಾರ್ ಅವರೇ ನೋಡಿಕೊಳ್ಳುವಂತೆ ಆಗಿದೆ. ಇದರಿಂದ ವಿವಿಧ ಇಲಾಖೆಗಳ ಕೆಲಸಗಳು ಬಾಕಿ ಉಳಿದಿವೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಭಾನುವಾರ ಸಂಜೆ ತಮ್ಮ ವಿದೇಶ ಪ್ರವಾಸದಿಂದ ಭಾರತಕ್ಕೆ ಮರಳುವ ನಿರೀಕ್ಷೆಯಿ ಇದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಹಿರಿಯ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಶೀಘ್ರದಲ್ಲೇ ನವದೆಹಲಿಗೆ ಕರೆಸಿಕೊಳ್ಳುವ ಸಾಧ್ಯತೆ ಇದೆ. ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಈ ಸಂದರ್ಭದಲ್ಲಿ ಚರ್ಚಿಸುವ ಸಾಧ್ಯತೆ ಇದೆ.
ಜೂನ್ 3 ರಂದು ಡಿ.ಕೆ ಶಿವಕುಮಾರ್ ಅವರು 13 ಸಚಿವರೊಂದಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಸಂಪುಟದಲ್ಲಿ 20 ಹುದ್ದೆಗಳು ಇನ್ನೂ ಖಾಲಿ ಇವೆ. ಶಿವಕುಮಾರ್, ಸಿದ್ದರಾಮಯ್ಯ ಮತ್ತು ಹರಿಪ್ರಸಾದ್ ಅವರು ಸಚಿವ ಸಂಪುಟಕ್ಕೆ ಸೇರಿಸಲು ತಮ್ಮ ನಿಷ್ಠಾವಂತರ ಪಟ್ಟಿಯೊಂದಿಗೆ ಸಿದ್ಧರಾಗಿದ್ದಾರೆ ಎಂದು ಹೇಳಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹೈಕಮಾಂಡ್ ಜೊತೆ ಮತ್ತೊಂದು ಸುತ್ತಿನ ಸುದೀರ್ಘ ಚರ್ಚೆ ನಡೆಯುವ ಸಾಧ್ಯತೆ ಇದೆ. 2028ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಮತ್ತೆ ಅಧಿಕಾರಕ್ಕೆ ತರಬೇಕು ಹಾಗೂ ಅದಕ್ಕೆ ಪೂರಕವಾಗಿ ಸಚಿವ ಸಂಪುಟ ಸಭೆಯನ್ನು ವಿಸ್ತರಣೆ ಮಾಡುವ ಸಾಧ್ಯತೆ ಇದೆ. ರಾಹುಲ್ ಗಾಂಧಿ ಅವರು ಕೇರಳದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಯುವ ನಾಯಕರಿಗೆ ಸಚಿವ ಸ್ಥಾನಕ್ಕೆ ಅವಕಾಶ ಕಲ್ಪಿಸಿದ್ದಾರೆ. ಇದೇ ಮಾದರಿ ಪ್ರಯೋಗವನ್ನು ಕರ್ನಾಟಕದಲ್ಲೂ ನಡೆಸುವ ಸಾಧ್ಯತೆ ಇದೆ.

ಆಷಾಡ ಮಾಸಕ್ಕೂ ಮುಂಚೆ ಸಚಿವ ಸಂಪುಟ ವಿಸ್ತರಣೆ ನಿರೀಕ್ಷೆ
ಇನ್ನು ಆಷಾಡ ಮಾಸಕ್ಕೆ ಮುನ್ನ ಸಂಪುಟ ವಿಸ್ತರಣೆ ನಡೆಯಲಿದೆಯೇ ಎನ್ನುವ ಕುತೂಹಲ ಆಕಾಂಕ್ಷಿಗಳಲ್ಲಿದೆ. ಇದು ಅಶುಭಕರ ಎಂದು ಹಲವರು ನಂಬುತ್ತಾರೆ. ಆಷಾಡ ಮಂಗಳವಾರ (ಜುಲೈ 14) ಆರಂಭವಾಗಲಿದೆ. ಏತನ್ಮಧ್ಯೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಚಿವ ಸಂಪುಟ ವಿಸ್ತರಣೆ ಶೀಘ್ರದಲ್ಲೇ ನಡೆಯಲಿದೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಮತ್ತು ಎಐಸಿಸಿ ಮುಖ್ಯಸ್ಥರು ಇದನ್ನು ಸ್ಪಷ್ಟವಾಗಿ ಹೇಳಿದ್ದಾರೆ. ಕರ್ನಾಟಕದಲ್ಲಿ ತುರ್ತು ಪರಿಸ್ಥಿತಿ ಉದ್ಭವಿಸುವ ಸಾಧ್ಯತೆ ಇದೆ. ಮುಖ್ಯವಾಗಿ ಕರ್ನಾಟಕದಲ್ಲಿ ಮಳೆ ಕೊರತೆಯ ಕಾರಣಕ್ಕೆ ಬರ ಅಥವಾ ಭಾರೀ ಮಳೆಯಿಂದ ಪ್ರವಾಹ ಎದುರಾದರೆ ಪೂರ್ಣ ಪ್ರಮಾಣದ ಸಚಿವ ಸಂಪುಟವನ್ನು ಹೊಂದಿರುವುದು ಎಲ್ಲರಿಗೂ ಜವಾಬ್ದಾರಿಗಳನ್ನು ವಹಿಸಬಹುದು ಎಂದು ಖಚಿತಪಡಿಸಿಕೊಳ್ಳಬಹುದು. ಇದು ಸೇರಿದಂತೆ ಹಲವು ಕಾರಣಗಳಿಗೆ ಸಚಿವ ಸಂಪುಟ ಸಭೆ ಶೀಘ್ರ ವಿಸ್ತರಣೆ ಆಗುವ ಸಾಧ್ಯತೆ ಇದೆ ಎಂದು ಪ್ರಿಯಾಂಕ್ ಹೇಳಿದ್ದಾರೆ.
ಏತನ್ಮಧ್ಯೆ, ಮಾಜಿ ಸಿಎಂ ಎನ್. ಧರಂ ಸಿಂಗ್ ಅವರ ಪುತ್ರ ಜೇವರ್ಗಿ ಶಾಸಕ ಅಜಯ್ ಸಿಂಗ್ ಅವರು ಪ್ರಬಲ ಸಚಿವ ಆಕಾಂಕ್ಷಿಯಾಗಿದ್ದಾರೆ. ಹೈಕಮಾಂಡ್ ಯಾವುದೇ ಕ್ಷಣದಲ್ಲಿ ರಾಜ್ಯ ನಾಯಕರನ್ನು ಮಾತುಕತೆಗಾಗಿ ದೆಹಲಿಗೆ ಕರೆಯಬಹುದು ಎಂದು ಅಜಯ್ ಅವರು ಹೇಳಿದ್ದಾರೆ. ಚಾಮರಾಜನಗರ ಶಾಸಕ ಸಿ. ಪುಟ್ಟರಂಗಶೆಟ್ಟಿ, ಆಷಾಢ ಮುಗಿದ ಒಂದು ಅಥವಾ ಎರಡು ದಿನಗಳಲ್ಲಿ ಅಥವಾ ಒಂದು ತಿಂಗಳ ನಂತರ ವಿಸ್ತರಣೆ ಆಗಬಹುದು ಎಂದಿದ್ದಾರೆ.
ಜಮೀರ್ ಅಹ್ಮದ್‌ಗೆ ಸಚಿವ ಸ್ಥಾನ ಸಿಗುವುದು ಅನುಮಾನ
ಇನ್ನು ಸಚಿವ ಜಮೀರ್ ಅಹಮದ್‌ಗೆ ಸಚಿವ ಸ್ಥಾನ ಸಿಗುವುದು ಅನುಮಾನ ಅಂತಲೇ ಹೇಳಲಾಗುತ್ತಿದೆ. ಮೊದಲ ಹಂತದಲ್ಲಿ ಶಿವಕುಮಾರ್ ಸಂಪುಟ ರಚನೆಗೆ ಮುನ್ನ, ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ದಾವಣಗೆರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು ತಂತ್ರ ರೂಪಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಆಡಿಯೋವೊಂದು ವೈರಲ್ ಆಗಿತ್ತು. ಇದು ಶಿವಕುಮಾರ್ ಸಂಪುಟದಲ್ಲಿ ಸಚಿವರಾಗುವ ಅವಕಾಶ ಕೈ ತಪ್ಪಿಸಿತ್ತು. ಹೀಗಾಗಿ, ಇದು ಮುಂದಿನ ಹಂತದಲ್ಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದೇ ಹೇಳಲಾಗಿದೆ. ಇನ್ನು ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಸಚಿವ ಸ್ಥಾನ ಸಿಗುವುದು ಬಹುತೇಕ ಖಚಿತ ಅಂತಲೇ ಹೇಳಲಾಗಿದೆ.


Click it and Unblock the Notifications
